ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪ; ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲು
ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ.
ದಾವಣಗೆರೆ: ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪದಲ್ಲಿ ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲಾಗಿದೆ. ವಕೀಲರಾದ ಎ.ಹರಿರಾಂ, ಜಗನ್ನಾಥ್‌ರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚೇತನಾ ವಿರುದ್ಧ ದೂರು ಸಲ್ಲಿಸಲಾಗಿದೆ.
ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ. ವಕೀಲ ಎ ಹರಿರಾಂ ಅರ್ಜಿದಾರರಾಗಿದ್ದು, ವಕೀಲರಾದ ಜಗನ್ನಾಥ್, ದಾವಣಗೆರೆಯ ಅನೀಸ್ ಪಾಷ ರಿವಿಜನ್ ಅರ್ಜಿ ಸಲ್ಲಿಸಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ರೇಣುಕಾಚಾರ್ಯ ರಾಜಕೀಯ ಪ್ರಭಾವ ಬಳಸಿ ಎಸ್ಸಿ ಸರ್ಟಿಫಿಕೇಟ್ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಯಲ್ಲಿ ವಾಸವಿದ್ದರೂ ಬೆಂಗಳೂರಿನಲ್ಲಿ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆ. ಹೀಗಾಗಿ ಶಾಸಕ ಎಂಪಿ ರೇಣುಕಾಚಾರ್ಯ ಹಾಗೂ ಪುತ್ರಿ ಎಂಆರ್ ಚೇತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿ ದೂರು ದಾಖಲಿಸಲಾಗಿದೆ.
ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 40 ಶಾಲಾ ಮಕ್ಕಳ ದಾಖಲಾತಿಯಲ್ಲಿ ಬೇಡ ಜಂಗಮ ಜಾತಿ ಪತ್ತೆಯಾಗಿದೆ. 2015 ರಿಂದ ಈವರೆಗೆ ಹೊನ್ನಾಳಿ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ ಬೇಡ ಜಂಗಮ ಜಾತಿ ಹೆಸರಿನಲ್ಲಿ ಶಾಲಾ ದಾಖಲಾತಿ ಲಭ್ಯವಾಗಿದೆ. ಪೋಷಕರ ಜಾತಿ ಹಿಂದೂ ಲಿಂಗಾಯತ, ಹಿಂದೂ ವೀರಶೈವ ಲಿಂಗಾಯತ ಇದ್ದರೂ ಮಕ್ಕಳ ಜಾತಿ ಕಾಲಂ ನಲ್ಲಿ ಬೇಡ ಜಂಗಮ ಪರಿಶಿಷ್ಟ ಜಾತಿ ಎಂದು ಸೇರ್ಪಡೆ ಮಾಡಲಾಗಿದೆ. ರೈತ ಮುಖಂಡ ಶೇಖರ ನಾಯ್ಕ ಮಾಹಿತಿ ಹಕ್ಕಿನಡಿ ಡಿಡಿಪಿಐ ಕಚೇರಿಯಿಂದ ಪಡೆದ ದಾಖಲಾತಿಯಿಂದ ಪತ್ತೆಯಾಗಿದೆ.
ಸ್ಥಳೀಯ ಶಾಸಕರ ಕುಟುಂಬವೇ ಬೇಡ ಜಂಗಮ. ಹೊನ್ನಾಳಿಯಲ್ಲಿ ಪ್ರತಿ ವರ್ಷ ಐದರಿಂದ ಹತ್ತು ಮಕ್ಕಳ ಶಾಲಾ ದಾಖಲಾತಿಯಲ್ಲಿ ಬೇಡ ಜಗಮ ಸೇರ್ಪಡೆಯಾಗುತ್ತೆ. ಸ್ಥಳೀಯ ಶಾಸಕ ಎಂ.ಪಿ.ರೇಣುಕಾಚಾರ್ಯ ಪುತ್ರಿ ಹಾಗೂ ಕುಟುಂಬ ಸದಸ್ಯರು ಸಹ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವುದು ಪತ್ತೆಯಾಗಿದೆ. ಸದ್ಯ ದಾವಣಗೆರೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೇಡ ಜಂಗಮ ಪರ ವಿರೋಧ ಹೋರಾಟಗಳು ತೀವ್ರತೆ ಪಡೆದುಕೊಳ್ಳುತ್ತಿವೆ.
ರೇಣುಕಾಚಾರ್ಯ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಕುಟುಂಬದ ವಿರುದ್ಧ ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಬೇಡ ಜಂಗಮ ಎಸ್ಸಿ ಸರ್ಟಿಫಿಕೇಟ್ ಪಡೆದ ಹಿನ್ನಲೆ ರೇಣುಕಾಚಾರ್ಯ ಕುಟುಂಬದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಐಬಿ ಸರ್ಕಲ್ನಿಂದ ತಾಲೂಕು ಕಚೇರಿ ವರೆಗೂ ಬೃಹತ್ ಪ್ರತಿಭಟನೆ ನಡೆದಿದೆ. ರೇಣುಕಾಚಾರ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ದಲಿತರ ಸೌಲಭ್ಯಗಳನ್ನು ರೇಣುಕಾಚಾರ್ಯ ಕಸಿದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ರೇಣುಕಾಚಾರ್ಯ ವಿರುದ್ಧ ಧಿಕ್ಕಾರ ಕೂಗುತ್ತಾ ಬೃಹತ್ ಪ್ರತಿಭಟನಾ ರ್ಯಾಲಿ ನಡೆದಿದೆ.
ಇದನ್ನೂ ಓದಿ: ಅಧಿಕಾರಿಗಳು ಗೃಹ ಸಚಿವರಿಗೆ ಹೀಗೆ ಮಾಹಿತಿಯನ್ನೇ ನೀಡಿಲ್ಲ; ಚಂದ್ರು ಕೊಲೆ ಪ್ರಕರಣದಲ್ಲಿ ಆರಗ ಜ್ಞಾನೇಂದ್ರ ಯುಟರ್ನ್!
ಪುನೀತ್ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್ಕುಮಾರ್? ‘ಹೊಂಬಾಳೆ ಫಿಲ್ಮ್ಸ್’ ಬಗ್ಗೆ ಹಬ್ಬಿದೆ ಗುಸುಗುಸು
Published On - 12:07 pm, Wed, 6 April 22