ಸೆಪ್ಟೆಂಬರ್​ 25, 26 ರಂದು ರಾಜ್ಯದ ಯಾವ ಯಾವ ನಗರಗಳು ಬಂದ್, ಇಲ್ಲಿದೆ ಓದಿ

ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್​ ಕಾವೇರಿ ನದಿ ನೀರು ಹರಿಬಿಡುವ ಸುಪ್ರಿಂಕೋರ್ಟ್​​ ನಿರ್ಧಾರದ ವಿರುದ್ಧ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು, ರೈತರು ಹಾಗೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಅಲ್ಲದೇ ಆಯಾ ಜಿಲ್ಲೆಗಳ ಸಮಸ್ಯೆಯನ್ನು ಬಗೆ ಹರಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು, ರೈತರು ಸೆ.25 ಮತ್ತು 26 ರಂದು ಬಂದ್​ಗೆ ಕರೆ ನೀಡಿವೆ.

ಸೆಪ್ಟೆಂಬರ್​ 25, 26 ರಂದು ರಾಜ್ಯದ ಯಾವ ಯಾವ ನಗರಗಳು ಬಂದ್, ಇಲ್ಲಿದೆ ಓದಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 24, 2023 | 3:54 PM

ದಾವಣಗೆರೆ ಸೆ.23: ತಮಿಳುನಾಡಿಗೆ (Tamil Nadu) ಐದು ಸಾವಿರ ಕ್ಯೂಸೆಕ್​ ಕಾವೇರಿ ನದಿ (Cauvery Water) ನೀರು ಹರಿಬಿಡುವ ಸುಪ್ರಿಂಕೋರ್ಟ್​​ (Supreme Court) ನಿರ್ಧಾರದ ವಿರುದ್ಧ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು, ರೈತರು (Farmers) ಹಾಗೂ ಬಿಜೆಪಿ (BJP) ಪ್ರತಿಭಟನೆ ಮಾಡುತ್ತಿದೆ. ಅಲ್ಲದೇ ಆಯಾ ಜಿಲ್ಲೆಗಳ ಸಮಸ್ಯೆಯನ್ನು ಬಗೆ ಹರಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು, ರೈತರು ಸೆ.25 ಮತ್ತು 26 ರಂದು ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಸಂಪೂರ್ಣ ಬಂದ್​​ಗೆ ಕರೆ ನೀಡಿವೆ. ಹಾಗಿದ್ದರೇ ರಾಜ್ಯದ ಯಾವ ಯಾವ ನಗರಗಳು ಬಂದ್​ ಇರಲಿವೆ ? ಇಲ್ಲಿದೆ ಓದಿ

ದಾವಣಗೆರೆ ಬಂದ್​

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಮ್​ನಿಂದ ಕಾಲುವೆಗೆ ನೀರು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಸೆ.25 ರಂದು ಭಾರತೀಯ ರೈತ ಒಕ್ಕೂಟ‌ ದಾವಣಗೆರೆ ಬಂದ್​ಗೆ ಕರೆ ನೀಡಿದೆ. ಭದ್ರಾ ಕಾಲುವೆಗೆ ನೀರು ಹರಿಸುವುದಾಗಿ ಭದ್ರಾ ನೀರಾವರಿ ಸಲಹಾ ಸಮಿತಿ ಲಿಖಿತ ಆದೇಶ ಹೊರಡಿಸುವಂತೆ ಆಗ್ರಹಿಸಿದೆ. ಇಂದು (ಸೆ.24) ಸಂಜೆಯೊಳಗೆ ಅಧಿಕೃತ ಲಿಖಿತ ಆದೇಶ ಹೊರಡಿಸಬೇಕು, ಇಲ್ಲವಾದರೆ ಸೋಮವಾರ ದಾವಣಗೆರೆ ನಗರ ಬಂದ್​ ಮಾಡುವುದಾಗಿ ದಾವಣಗೆರೆಯಲ್ಲಿ ರೈತ ಒಕ್ಕೂಟದ ಬೆಳವನೂರ ನಾಗೇಶ್ವರರಾವ್ ಎಚ್ಚರಿಕೆ ನೀಡಿದ್ದಾರೆ.

ರಾಮನಗರ ಬಂದ್​

ರೇಷ್ಮೆನಗರಿ ರಾಮನಗರದಲ್ಲೂ ಕಾವೇರಿ ಕಿಚ್ಚು ಹೆಚ್ಚಾಗಿದೆ. ಸೆ.26ರಂದು ರಾಮನಗರ ಬಂದ್ ಮಾಡಲು ರೈತ ಹಾಗೂ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ರಾಮನಗರ, ಚನ್ನಪಟ್ಟಣ, ಬಿಡದಿ ಸಂಪೂರ್ಣ ಸ್ತಬ್ಧವಾಗಲಿದೆ. ಇಂದು ರಾಮನಗರ ರೈತ ಭವನದಲ್ಲಿ ನಡೆದ ಸಭೆಯಲ್ಲಿ ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಮುದಾಯಗಳು ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ. ಮೆಡಿಕಲ್, ಆಸ್ಪತ್ರೆ, ಹಾಲಿನ ಅಂಗಡಿ, ರೇಷ್ಮೆ ಮಾರುಕಟ್ಟೆ ಹೊರತು ಪಡಿಸಿ ಉಳಿದೆಲ್ಲ ಸೇವೆಗಳು ಸ್ಥಗಿತವಾಗಲಿವೆ.

ಇದನ್ನೂ ಓದಿ: ಸೆ.26ಕ್ಕೆ ಬೆಂಗಳೂರು ಬಂದ್ ಆದರೆ: ರಸ್ತೆಗಳಿಯಲ್ಲ ಬಸ್, ಓಲಾ, ಉಬರ್  ಬೆಂಬಲ 

 ಮುಂಡರಗಿ ಬಂದ್​

ಗದಗ ಜಿಲ್ಲೆಯ ಮುಂಡರಗಿ ಪಟ್ಟಣವನ್ನು ಬರ ಪೀಡಿತ ತಾಲೂಕು ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಸೆ.26 ರಂದು ಮುಂಡರಗಿ ತಾಲೂಕು ಬಂದ್​ಗೆ ರೈತ ಸಂಘಟನೆಗಳು ಕರೆ ನೀಡಿವೆ. ಗದಗ ಜಿಲ್ಲೆಯ ಏಳು ತಾಲೂಕು ಪೈಕಿ, ಆರು ತಾಲೂಕುಗಳು ಬರ ಪೀಡಿತ ತಾಲೂಕು ಅಂತ ಘೋಷಣೆ ಮಾಡಲಾಗಿದೆ. ಆದರೆ ಮುಂಡರಗಿ ತಾಲೂಕನ್ನು ಕೈ ಬಿಟ್ಟಿದ್ದಕ್ಕೆ ರೈತರು ಆಕ್ರೋಶಗೊಂಡಿದ್ದಾರೆ. ಬಂದ್​ಗೆ ರೈತ, ಕನ್ನಡಪರ ಸಂಘಟನೆ ಸೇರಿದಂತೆ 10 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕೆಆರ್ ಪೇಟೆ ಪಟ್ಟಣ ಬಂದ್​

ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ ಕೆ.ಆರ್​ ಪೇಟೆ ಬಂದ್​ಗೆ ಕಾವೇರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಸಂಸ್ಥೆಗಳು ಕರೆ ನೀಡಿವೆ. ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬೆಳಗ್ಗೆ 8 ರಿಂದ ಸಂಜೆ 6ರ ವರೆಗೂ ಬಂದ್ ಇರಲಿದೆ.

ಬೆಂಗಳೂರು ಬಂದ್​ ಪೆಂಡಿಂಗ್​

ಸೆ.26ರಂದು ಬೆಂಗಳೂರು ಬಂದ್ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಕುರುಬೂರು ಶಾಂತಕುಮಾರ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಭೆ ನಡೆಯುತ್ತಿದೆ. ಸೆ.29ರಂದು ಕರ್ನಾಟಕ ಬಂದ್​ ಬಗ್ಗೆ ವಾಟಾಳ್ ನಾಗರಾಜ್​ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ. ಎರಡೆರಡು ಬಾರಿ ಬಂದ್ ಬದಲು ಒಂದೇ ಬಾರಿ ಬಂದ್​ ಮಾಡಲು ಚಿಂತಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:52 pm, Sun, 24 September 23

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್