ಮಣ್ಣಲ್ಲಿ ಮಣ್ಣಾದ ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರು: ಹುಟ್ಟೂರು ಕುಂದೂರಿನಲ್ಲಿ ಅಂತ್ಯಕ್ರಿಯೆ

TV9kannada Web Team

TV9kannada Web Team | Edited By: ಗಂಗಾಧರ್​ ಬ. ಸಾಬೋಜಿ

Updated on: Nov 04, 2022 | 10:01 PM

ಶಾಸಕ ಎಂಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್​ ಅಂತಿಮ ಸಂಸ್ಕಾರವನ್ನು ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೂಲಂಬಿಯ ತೋಟದಲ್ಲಿ ನೆರವೇರಿಸಲಾಗಿದೆ.

ಮಣ್ಣಲ್ಲಿ ಮಣ್ಣಾದ ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರು: ಹುಟ್ಟೂರು ಕುಂದೂರಿನಲ್ಲಿ ಅಂತ್ಯಕ್ರಿಯೆ
ಚಂದ್ರಶೇಖರ್​ ಅಂತಿಮ ಸಂಸ್ಕಾರ


ದಾವಣಗೆರೆ: ಶಾಸಕ ಎಂಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್​ ಅಂತಿಮ ಸಂಸ್ಕಾರ (cremation) ವನ್ನು ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರಿನ ತೋಟದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಲಾಗಿದೆ. ಭಾರದ ಮನಸ್ಸಿನಿಂದಲೇ ಶಾಸಕ ರೇಣುಕಾಚಾರ್ಯ ಅಂತ್ಯ ಸಂಸ್ಕಾರ ನೆರವೇರಿಸಿದರು. ಮಧ್ಯಾಹ್ನ 12 ಗಂಟೆಗೆ ಮಠದ ವೃತ್ತದಿಂದ ಅಂತಿಮಯಾತ್ರೆ ಆರಂಭವಾಗಿದ್ದು, ಗೊಲ್ಲರಹಳ್ಳಿ ಮಾರ್ಗವಾಗಿ ಮಾಸಡಿ, ತರಗನಹಳ್ಳಿ, ಸಿಂಗಟಗೆರೆ, ಹನುಮನಹಳ್ಳಿ ಮಾರ್ಗವಾಗಿ ಹುಟ್ಟೂರು ಕುಂದೂರಿಗೆ ತಲುಪಿತು. ಮಧ್ಯಾಹ್ನ 3 ಗಂಟೆಗೆ ರೇಣುಕಾಚಾರ್ಯ ಅವರ ತಂದೆ, ತಾಯಿ ಸಮಾಧಿ ಪಕ್ಕದಲ್ಲೇ ವೀರಶೈವ ವಿಧಗಳ ಪ್ರಕಾರ ಅಂತ್ಯಕ್ರಿಯೆ ನಡೆಯಿತು.

ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ:

ತಾಜಾ ಸುದ್ದಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದರು. ಚಂದ್ರಶೇಖರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಶಾಸಕರ ನಿವಾಸಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರ ದಂಡು ಆಗಮಿಸಿತ್ತು. ಅಂತಿಮ ದರ್ಶನಕ್ಕಾಗಿ ನಿವಾಸದ ಪಕ್ಕದಲ್ಲಿಯೇ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿತ್ತು. ನಂತರ ನಿವಾಸದಿಂದ ಪಕ್ಕದ ಜಾಗಕ್ಕೆ ಮೃತ ದೇಹವನ್ನು ಸ್ಥಳಾಂತರ ಮಾಡಲಾಯಿತು. ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ರೇಣುಕಾಚಾರ್ಯ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ಚಂದ್ರಶೇಖರ್​ ಕಡಿಮೆ ಅವಧಿಯಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದ. ಚಂದ್ರಶೇಖರ್​ ಸಾವಿನ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳಿವೆ. ಸಿಎಂ ಬೊಮ್ಮಾಯಿ, ಗೃಹಸಚಿವ ಜ್ಞಾನೇಂದ್ರ ತನಿಖೆ ಮಾಡಿಸುತ್ತಾರೆ ಎಂದು ಹೇಳಿದರು.

ಚಂದ್ರಶೇಖರ್​ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವ ಭರವಸೆ

ಚಂದ್ರಶೇಖರ್​ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಸಿಎಂ ಬೊಮ್ಮಾಯಿ, ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ ಎಂದು ಕುಂದೂರು ಗ್ರಾಮದಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದರು. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುವ ಭರವಸೆ ನೀಡಿದ್ದಾರೆ. ಸರ್ಕಾರ ನಿಮ್ಮ ಜೊತೆ ಇರುತ್ತೆ ಎಂದು ಸಿಎಂ ಹೇಳಿದ್ದಾರೆ. ನಿನ್ನ ಜನಪ್ರಿಯತೆ ಕಂಡು ಹೀಗೆ ಮಾಡಿದ್ದಾರೆಂದು ಹೇಳಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ನನ್ನಷ್ಟೇ ಪ್ರೀತಿಯನ್ನ ಚಂದ್ರಶೇಖರ್​ಗೂ ಜನ ಪ್ರೀತಿ ತೋರಿಸಿದ್ದಾರೆ. ಜನರು ತೋರಿದ ಪ್ರೀತಿ ವಿಶ್ವಾಸಕ್ಕೆ ಧನ್ಯವಾದ ಎಂದು ರೇಣುಕಾಚಾರ್ಯ ಹೇಳಿದರು.

ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಚಂದ್ರಶೇಖರ್​ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಸಾವಿನ ಬಗ್ಗೆ ಹಲವು ಸಂಶಯ ಮೂಡಿದೆ. ಚಂದ್ರಶೇಖರ್​ ಸಾವಿನ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಚಂದ್ರಶೇಖರ್​ ಕಳೆದುಕೊಂಡಿರುವ ತಂದೆ, ತಾಯಿ, ಶಾಸಕ ರೇಣುಕಾಚಾರ್ಯಗೆ ದುಃಖ ಸಹಿಸುವ ಶಕ್ತಿ ನೀಡಲಿ. ಕುಟುಂಬಕ್ಕೆ ನೋವು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada