ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಯುವಕನ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಲೆದಂಡವಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯ ಡಿವೈಎಸ್‌ಪಿ, ಸರ್ಕಲ್ ಇನ್ಸ್​ಪೆಕ್ಟರ್ ಹಾಗೂ ಎಸ್​ಐ ಅಮಾನತು ಮಾಡಲಾಗಿದೆ. ಅಮಾನತು ಹಿನ್ನೆಲೆಯಲ್ಲಿ ಮೂವರನ್ನೂ ಸೇವೆಯಿಂದ ಬಿಡುಗಡೆ ಮಾಡಿದ್ದೇವೆ ಎಂದು ಟಿವಿ9ಗೆ ಪೂರ್ವ ವಲಯದ ಐಜಿಪಿ ಡಾ.ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ:  ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್
ಚನ್ನಗಿರಿ ಪೊಲೀಸ್ ಠಾಣೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:May 27, 2024 | 3:43 PM

ದಾವಣಗೆರೆ, (ಮೇ 27): ಚನ್ನಗಿರಿ ಯುವಕನ ಲಾಕಪ್​ ಡೆತ್​ ಪ್ರಕರಣಕ್ಕೆ (channagiri lockup death Case) ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅವರನ್ನು ಅಮಾನತು ಗೃಹ ಸಚಿವ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ವಶದಲ್ಲಿದ್ದ ಆದಿಲ್ ಎಂಬ ಯುವಕ ಮೇ 24 ರಂದು ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದ ಕುಟುಂಬಸ್ಥರು, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಆರೋಪಿಸಿ ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಠಾಣೆಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಧ್ವಂಸಗೊಳಸಿದ್ದರು. ಹಾಗೇ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು.

ಇದನ್ನೂ ಓದಿ: ಚನ್ನಗಿರಿ ಲಾಕಪ್​ ಡೆತ್: ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ಸಿಐಡಿ ಹೆಗಲಿಗೆ

ಅಮಾಕರಿಗೆ ಅನಗತ್ಯ ಕಿರುಕಳ‌ ನೀಡಬೇಡಿ

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದವರ ಪೈಕಿ ಈಗಾಗಲೇ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ನ್ನಗಿರಿ ಮುಸ್ಲಿಂ ಸಮಾಜದ ಮುಖಂಡ ಮಹ್ಮದ್ ಜಬಿವುಲ್ಲಾ ಪ್ರತಿಕ್ರಿಯಿಸಿದ್ದು, ಆರೋಪಿಗಳಿಗೆ ಶಿಕ್ಷೆ ‌ ಕೊಡಿ. ಆದ್ರೆ ಅಮಾಕರಿಗೆ ಅನಗತ್ಯ ಕಿರುಕಳ‌ ನೀಡಬೇಡಿ. ಬೇದರಿಕೆಗೆ ಬೇಸತ್ತು ಜನ ಬಹುತೇಕ ಕಡೆ ಮನೆ ಬೀಗ ಹಾಕಿಕೊಂಡು ಹೋಗುತ್ತಿದ್ದಾರೆ. ಅಮಾಯಕರಿಗೆ ಹಿಂಸೆ ಬೇಡ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕಲ್ಲು ತೂರಾಟ ಮಾಡಿದ ಆರೋಪಿಗಳ ವಿಡಿಯೋ‌ ಪೊಲೀಸರ ಬಳಿ‌ಇದೆ.‌ ಅವರನ್ನ ಗುರುತಿಸಿ ಕರೆತನ್ನಿ . ಅದು ಬಿಟ್ಟು ಪೊಲೀಸರು ಕೆಲ ಗ್ರಾಮಗಳಿಗೆ ಹೋಗಿ ಟಿ ಸ್ಟಾಲ್ ನಲ್ಲಿ ಕಟ್ಟೆ ಮೇಲೆ ಕುಳಿತವರನ್ನ ಕರೆದು ತರುತ್ತಿದ್ದಾರೆ.‌ ಇದೇ ಕಾರಣಕ್ಕೆ ಕೆಲ ಕುಟುಂಬಗಳು ಮನೆ ಬಿಟ್ಟು ಹೋಗಿವೆ. ನಮಗೆ ಪೊಲೀಸರ ಬಗ್ಗೆ ಗೌರವ ಇದೆ. ಮೇಲಾಗಿ ಘಟನೆ ನಡೆದಾಗ ನಾನು ಸ್ಥಳದಲ್ಲಿಯೇ ಇದ್ದೆ.‌ ಪೊಲೀಸರ ಜೊತೆ ಸೇರಿ ಗಲಭೆ ನಿಲ್ಲಿಸಲು ಪ್ರಯತ್ನಿಸಿದೆ ಆದ್ರೆ ಅನೀರಿಕ್ಷತವಾಗಿ ನಡೆದು ಹೋಗಿದೆ. ಇದರ ಬಗ್ಗೆ ‌ನಮಗೂ ಬೇಸರ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:41 pm, Mon, 27 May 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್