ದಾವಣಗೆರೆ: ಮೊರಾರ್ಜಿ ವಸತಿ ನಿಲಯದಲ್ಲಿ ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ; ಎಲ್ಲಾ ಮಕ್ಕಳು ಡಿಸ್ಚಾರ್ಜ್

ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖರಾದ ಹಿನ್ನಲೆ ಇಂದು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾ ಮಕ್ಕಳು ಆರೋಗ್ಯವಾಗಿ ಸ್ಥಿರವಾಗಿದ್ದಾರೆ ಎಂದು ವೈದ್ಯರು ಹೇಳಿದ ಹಿನ್ನೆಲೆಯಲ್ಲಿ ಆ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದರಾಜು ತಿಳಿಸಿದ್ದಾರೆ.

ದಾವಣಗೆರೆ: ಮೊರಾರ್ಜಿ ವಸತಿ ನಿಲಯದಲ್ಲಿ ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ; ಎಲ್ಲಾ ಮಕ್ಕಳು ಡಿಸ್ಚಾರ್ಜ್
ಅಸ್ವಸ್ಥ ಮಕ್ಕಳು ಗುಣಮುಖ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 07, 2023 | 7:26 PM

ದಾವಣಗೆರೆ, ಸೆ.07: ತಾಲೂಕಿನ ಮಾಯಕೊಂಡ ಎಸ್ಸಿ ಮತ್ತು ಎಸ್ಟಿ ಪ್ರತಿಭಾನ್ವಿತ ಬಾಲಕಿಯರ ವಸತಿ ಪ್ರೌಢಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ(Hospital) ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಗಳವಾರ(ಸೆ.06) ರಾತ್ರಿ ವಿಷಪೂರಿತ ಆಹಾರ ಸೇವಿಸಿ ಬುಧವಾರ ಬೆಳಿಗ್ಗೆ 38 ಮಕ್ಕಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಆ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಅದರಲ್ಲಿ 16 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ (Davanagere) ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಜೆ ವೇಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದ ಕೆಲವು ಮಕ್ಕಳನ್ನು ಪೋಷಕರೊಂದಿಗೆ ಮನೆಗೆ ಕಳುಹಿಸಲಾಯಿತು. ಇಂದು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾ ಮಕ್ಕಳು ಆರೋಗ್ಯವಾಗಿ ಸ್ಥಿರವಾಗಿದ್ದಾರೆ ಎಂದು ವೈದ್ಯರು ಹೇಳಿದ ಹಿನ್ನೆಲೆಯಲ್ಲಿ ಆ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದರಾಜು ತಿಳಿಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇವಿಸಿ 38 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

ನೀರಿನ ಮಾದರಿ, ಆಹಾರ ಪರೀಕ್ಷೆ

ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತಜ್ಞರು ಹಾಗೂ ಕಚೇರಿ ಸಿಬ್ಬಂದಿ ಬುಧವಾರ ಭೇಟಿ ನೀಡಿ ಆಹಾರ ಮತ್ತು ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಬಳಿಕ ಆಹಾರ ಮತ್ತು ಸುರಕ್ಷಿತ ಪ್ರಭಾರ ಅಧಿಕಾರಿ ಡಾ.ನಾಗರಾಜ್ ಹಾಗೂ ಸಿಬ್ಬಂದಿಗಳು ಆಹಾರ ಮತ್ತು ಆಹಾರ ಪದಾರ್ಥಗಳನ್ನು ಹೆಚ್ಚಿನ ಪರೀಕ್ಷೆಗಾಗಿ ದಾವಣಗೆರೆ ಡಿಪಿಎಚ್​ಎಲ್, ಬೆಂಗಳೂರಿನ ಡಿಪಿಎಚ್ಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಫಲಿತಾಂಶದ ನಿರೀಕ್ಷೆಯಲಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಾಲಯ ಶಾಲಾ ತಂತ್ರಜ್ಞರು ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿಯು ಕುಡಿಯಲು ಯೋಗ್ಯವಿದೆ ಎಂದು ಬಂದಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವಿನಾಯಕ ತಿಳಿಸಿದ್ದಾರೆ. ಮತ್ತೆ ಮುಂದುವರಿದು ತುರ್ತು ಚಿಕಿತ್ಸೆ ಗಾಗಿ ಸ್ಥಳೀಯ ವೈದ್ಯಾಧಿಕಾರಿಗಳನ್ನು ವಸತಿ ನಿಲಯಕ್ಕೆ ನೇಮಿಸಿದ್ದಾರೆ.

ಇದನ್ನೂ ಓದಿ:ಆಟ ಆಡ್ತಾ ಆಡ್ತಾ ವಿಷ ಸೇವನೆ ಮಾಡಿಬಿಟ್ಟ ಪುಟ್ಟ ಕಂದಮ್ಮಗಳು, ತೀವ್ರ ಅಸ್ವಸ್ಥ

ವಸತಿ ಶಾಲೆಗೆ ಭೇಟಿ

ಇಂದು ಸ್ಥಳೀಯ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ವಿನಾಯಕ, ಸಿಬ್ಬಂದಿ ಹಾಗೂ ಪ್ರಾ.ಆ.ಕೇಂದ್ರ ಹುಚ್ಚವ್ವನಹಳ್ಳಿಯ ಆಡಳಿತ ವೈದ್ಯಾಧಿಕಾರಿ ಡಾ.ಧೀರಜ್, ಆರೋಗ್ಯ ನಿರೀಕ್ಷಣಾಧಿಕಾರಿ ಎ.ಪಿ.ಪ್ರಸನ್ನಕುಮಾರ್ ವಸತಿ ಶಾಲೆಗೆ ಭೇಟಿ ನೀಡಿ, ವಸತಿ ಶಾಲೆಯಲ್ಲಿ ತಯಾರಿಸಿದ್ದ ಆಹಾರ, ಸ್ವಚ್ಛತೆ, ಕುಡಿಯುವ ನೀರು ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಪರೀಕ್ಷೆ ಮಾಡಿದ್ದಾರೆ. ಮುಂದೆ ಇಂತಹ ಘಟನೆಗಳು ಮರು ಕಳುಹಿಸದಂತೆ ಶಾಲೆಯ ಪ್ರಾಂಶುಪಾಲರು, ಅಡುಗೆ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ. ಹಾಗೂ ಮಾಯಕೊಂಡಕ್ಕೆ ಸಂಬಂಧಿಸಿದ ಎಲ್ಲಾ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us