ಪತ್ರಕರ್ತರಿಗೆ ಉಚಿತ ಬಸ್​ ಪಾಸ್: TV9ನ ಜಗದೀಶ್ ಬೆಳ್ಳಿಯಪ್ಪಗೆ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ

ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ಬಜೆಟ್​ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​ ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕಾಗಿದ್ದು  ಪತ್ರಕರ್ತನ ಜವಾಬ್ದಾರಿ ಎಂದು ಹೇಳಿದ್ದಾರೆ.

ಪತ್ರಕರ್ತರಿಗೆ ಉಚಿತ ಬಸ್​ ಪಾಸ್: TV9ನ ಜಗದೀಶ್ ಬೆಳ್ಳಿಯಪ್ಪಗೆ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ
ಸಿಎಂ‌ ಸಿದ್ದರಾಮಯ್ಯ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on:Feb 04, 2024 | 9:46 AM

ದಾವಣಗೆರೆ, ಫೆಬ್ರುವರಿ 3: ಮುಂದಿನ ಬಜೆಟ್​ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಹಿರಿಯ ಪತ್ರಕರ್ತ, ಟಿವಿ9 ಡಿಜಿಟಲ್ ಡೆಪ್ಯೂಟಿ ಎಡಿಟರ್ ಜಗದೀಶ್ ಬೆಳ್ಳಿಯಪ್ಪ ಸೇರಿದಂತೆ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಅವರು, ಈ ಕಾರ್ಯಕ್ರಮದಿಂದ ಬಡವರಿಗೆ ಸಹಾಯ ಆಗುತ್ತದೆ ಎಂಬುದನ್ನ ಅರಿತು ಬರೆಯಿರಿ. ನಾನು ಹೇಳಿದೆ ಎಂದು ಬರೆಯಬೇಡಿ. ಗಂಡಾ-ಹೆಂಡತಿ ‌ಜಗಳ ಉಂಡ ಮಲಗುವ ತನಕ.‌ ಆರೋಪ ಪ್ರತ್ಯಾರೋಪ ಸಾಮಾನ್ಯ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗಬಾರದು. ಅದಕ್ಕೆ ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ. ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಾಗ ಮಾತ್ರ ವೈಚಾರಿಕೆ ಬೆಳೆಯಲು ಸಾಧ್ಯ ಎಂದರು.

ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕಾಗಿದ್ದು  ಪತ್ರಕರ್ತನ ಜವಾಬ್ದಾರಿ

ಡಿವಿ ಗುಂಡಪ್ಪ ಕಾರ್ಯನಿರತ ಪತ್ರಕರ್ತರ ಸಂಘ ಸ್ಥಾಪನೆ ಮಾಡಿದ್ದರು. ಪತ್ರಿಕೋದ್ಯಮ ಓದದಿದ್ದವರು ಸಹ ಪತ್ರಕರ್ತರಾಗಿದ್ದಾರೆ. ಮಹಾತ್ಮ‌ ಗಾಂಧಿ, ಅಂಬೇಡ್ಕರ ಅವರು ಸಹ ಪತ್ರಕರ್ತರಾಗಿದ್ದರು. ಸ್ವಾತಂತ್ರ್ಯ ಪೂರ್ವ ಪತ್ರಿಕೆಗಳು ಅದ್ಭುತ ಕೆಲಸ ಮಾಡಿವೆ. ದೇಶಕ್ಕೆ ಸ್ವಾತಂತ್ರ್ಯ ಬಂತು. ಪತ್ರಕರ್ತರಾದವರು ಶೇ 90 ಕ್ಕಿಂತ ಹೆಚ್ಚು ಪ್ರಮಾಣಿಕವಾಗಿ ಇರಬೇಕು.

ಇದನ್ನೂ ಓದಿ: ಕುಣಿಲಿಕ್ಕೆ ಬಾರದವನಿಗೆ ನೆಲ ಡೊಂಕು ಅನ್ನುವ ಸ್ಥಿತಿ ರಾಜ್ಯ ಸರ್ಕಾರದ್ದು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವ್ಯಂಗ್ಯ

ದೇಶದಲ್ಲಿ ಎಲ್ಲ ವರ್ಗದ ಜನ ಇದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೀಸಲಾತಿ ಬಂದಿದೆ. ಎಲ್ಲ ವರ್ಗದ ಕಲ್ಯಾಣ ಆಗಬೇಕು. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕಾಗಿದ್ದು ನಮ್ಮ ಪತ್ರಕರ್ತನ ಜವಾಬ್ದಾರಿ. ಮಾಧ್ಯಮಗಳು ಯಾವುದೇ ಕಾರಣಕ್ಕೂ ಮೌಢ್ಯಗಳನ್ನ ಬೆಂಬಲಿಸಬಾರದು. ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಕಾರ್ ‌ಮೇಲೆ ಕಾಗೆ ಕುಳಿತ್ತಿತ್ತು. ಇದು ಮಾಧ್ಯಮಗಳಲ್ಲಿ ‌ದೊಡ್ಡ ಸುದ್ದಿ ಆಗಿತ್ತು. ಚಾಮರಾಜನಗರಕ್ಕೆ ಹೋದರೆ ಸಿಎಂ ‌ಹುದ್ದೆ ಹೋಗುತ್ತದೆ ಅಂದ್ದರು. ನಾನು 12 ಸಲ ಚಾಮರಾಜನಗರಕ್ಕೆ ಹೋಗಿದ್ದೆ. ಐದು ವರ್ಷ ಸಿಎಂ ಆಗಿದೆ. ಮತ್ತೆ ಸಿಎಂ ಆಗಿದ್ದೇನೆ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಕೊಟ್ಟಿದ್ದೇವೆ. ಬಿಜೆಪಿಯವರು ಬಿಟ್ಟಿ ಯೋಜನೆಗಳು ಎಂದು ರಾಜಕೀಯವಾಗಿ ಮಾತಾಡುತ್ತಾರೆ. ಮನೆ ಜಯಮಾನಿಗೆ ಎರಡು ಸಾವಿರ ‌ರೂಪಾಯಿ ಮಾಡಿದ್ದೇವೆ. ಪ್ರತಿ ಕುಟುಂಬಕ್ಕೆ ನಾಲ್ಕರಿಂದ ಐದು ಸಾವಿರ ರೂಪಾಯಿ ಪ್ರತಿ ಕುಟುಂಬಕ್ಕೆ ಸಿಗುತ್ತದೆ.

ಇದನ್ನೂ ಓದಿ: SSLC Preparatory Exam: ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಎಲ್ಲ ಜಾತಿ, ಧರ್ಮದವರಿಗೆ ಗ್ಯಾರಂಟಿ ಸಹಾಯ ಆಗಿವೆ. ನಾನು ಸಿಎಂ ಅದ ಮೇಲೆ ಮಾಶಾಸನ ಹೆಚ್ಚಿಸಿದ್ದೇನೆ. ಕಾರ್ಮಿಕ ಇಲಾಖೆಯಿಂದ ವಿಮೆ ಯೋಜನೆ ಜಾರಿಗೆ ತಂದಿದ್ದು ಸಹ ನಮ್ಮ ಸರ್ಕಾರ ಎಂದು ಹೇಳಿದ್ದಾರೆ.

TV9 ಡಿಜಿಟಲ್​​ ವಿಭಾಗದ ಮುಖ್ಯಸ್ಥ ಜಗದೀಶ್​​​ಬೆಳ್ಳಿಯಪ್ಪಗೆ ಪ್ರಶಸ್ತಿ

TV9 ಡಿಜಿಟಲ್​​ ವಿಭಾಗದ ಮುಖ್ಯಸ್ಥ ಜಗದೀಶ್​​​ಬೆಳ್ಳಿಯಪ್ಪ ಅವರಿಗೆ ಸಿಎಂ ಸಿದ್ದರಾಮಯ್ಯರಿಂದ ಪತ್ರಕರ್ತ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ಪತ್ರಕರ್ತರಿಗೆ ಕೂಡ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಜಗದೀಶ್ ಬೆಳ್ಳಿಯಪ್ಪ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:30 pm, Sat, 3 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್