2ನೇ ಸಲ ಸಿಎಂ ಆದ ಬಳಿಕ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಂಡ ಸಿದ್ದರಾಮಯ್ಯ

ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು (ಜೂ.05) ದಾವಣಗೆರೆಗೆ ಭೇಟಿ ನೀಡಲಿದ್ದಾರೆ.

2ನೇ ಸಲ ಸಿಎಂ ಆದ ಬಳಿಕ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಂಡ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Jun 05, 2023 | 8:21 AM

ಬೆಂಗಳೂರು: ಕಾಂಗ್ರೆಸ್ (Congress)​ ನಾಯಕ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಚಿವ ಸಂಪುಟ ರಚನೆ, ವಿಸ್ತರಣೆ ಮತ್ತು ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲೇ ಬ್ಯುಸಿಯಾಗಿದ್ದರು. ಈ ಸಂಬಂಧ ಬೆಂಗಳೂರಿನಲ್ಲೇ (Bengaluru) ವಾಸ್ತವ್ಯ ಹೂಡಿದ್ದು, ರಾಜಧಾನಿ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಹೋಗಲು ಸಾಧ್ಯವಾಗಿರಲಿಲ್ಲ. ಇದೀಗ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು (ಜೂ.05) ದಾವಣಗೆರೆಗೆ (Davangere) ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್​​ನಲ್ಲಿ ದಾವಣಗೆರೆಗೆ ತೆರಳಲಿದ್ದಾರೆ.

ನಂತರ ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್ ಅವರ​ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಶುಭಹಾರೈಸಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರಿನ ಮೇಲೆ ಹಿಡಿತ ಸಾಧಿಸಲು ಮುಂದಾದ ಡಿಕೆಶಿವಕುಮಾರ್

ಬೆಂಗಳೂರಿನ ಮೇಲೆ ಹಿಡಿತ ಸಾಧಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಂದಾಗಿದ್ದು, ಇಂದು (ಜೂ.05) ಬೆಳಗ್ಗೆ 11 ಗಂಟೆಗೆ ಬೆಂಗಳೂರು ಶಾಸಕರ ಸಭೆ ಕರೆದಿದ್ದಾರೆ.  ಮಳೆಯಿಂದ ಮುಂಜಾಗ್ರತ ಕ್ರಮಗಳು, ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಂಸದರು , ಶಾಸಕರು ಹಾಗೂ ಎಂಎಲ್​​​ಸಿಗಳು ಭಾಗಿಯಾಗಲಿದ್ದಾರೆ. ಸರ್ವ ಪಕ್ಷದ ನಾಯಕರುಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ.  ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಅಲ್ಲದೇ ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಕುರಿತಾಗಿ ಚರ್ಚಿಸುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 am, Mon, 5 June 23

ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ