AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್: ಕಾನೂನು ಕ್ರಮಕ್ಕೆ ಕಾಂಗ್ರೆಸ್​ ಆಗ್ರಹ

ಬಿಜೆಪಿ ದಾವಣಗೆರೆ ಕಾರ್ಯಕರ್ತ ಹೆಸರಿನ ಫೇಸ್ ಬುಕ್​ ಖಾತೆಯಿಂದ ಸಿದ್ದು ಸವಾರಿ ಮಸೀದಿ ಕಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಲಾಗಿದೆ. ಈ ಪೋಸ್ಟ್​ಗೆ ಮತ್ತಷ್ಟು ಅವಹೇಳನಕಾರಿಯಾಗಿ ಹತ್ತಾರು ಜನ ಕಾಮೆಂಟ್ ಹಾಕಿದ್ದಾರೆ. ಹಾಗಾಗಿ ಪೋಸ್ಟ್​ ಮಾಡಿದ ಹಾಗೂ ಅದಕ್ಕೆ ಕಾಮೆಂಟ್​ ಮಾಡಿದವರ ವಿರುದ್ದ ಕಾನೂನು ಕ್ರಮಕ್ಕೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್: ಕಾನೂನು ಕ್ರಮಕ್ಕೆ ಕಾಂಗ್ರೆಸ್​ ಆಗ್ರಹ
ಅವಹೇಳನಕಾರಿ ಪೋಸ್ಟ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Sep 30, 2023 | 3:16 PM

Share

ದಾವಣಗೆರೆ, ಸೆಪ್ಟೆಂಬರ್​ 30: ಸಿಎಂ ಸಿದ್ದರಾಮಯ್ಯ (Siddaramaiah) ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್​ ಮಾಡಿದ ಹಾಗೂ ಅದಕ್ಕೆ ಕಾಮೆಂಟ್​ ಮಾಡಿದವರ ವಿರುದ್ದ ಕಾನೂನು ಕ್ರಮ ಜರಗಿಸುವಂತೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ಅವರು ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಜೆಪಿ ದಾವಣಗೆರೆ ಕಾರ್ಯಕರ್ತ ಹೆಸರಿನ ಫೇಸ್ ಬುಕ್​ ಖಾತೆಯಿಂದ ಸಿದ್ದು ಸವಾರಿ ಮಸೀದಿ ಕಡೆ ಎಂದು ಅವಹೇಳನಕಾರಿ ಪೋಸ್ಟ್​ ಮಾಡಲಾಗಿದೆ. ಈ ಪೋಸ್ಟ್​ಗೆ ಮತ್ತಷ್ಟು ಅವಹೇಳನಕಾರಿಯಾಗಿ ಹತ್ತಾರು ಜನ ಕಾಮೆಂಟ್ ಹಾಕಿದ್ದಾರೆ.

ಸದ್ಯ ಫೇಸ್ ಬುಕ್​ನಲ್ಲಿ ಪೋಸ್ಟ್ ಹಾಕಿದವರ ಹಾಗೂ ಕಾಮೆಂಟ್​ ಮಾಡಿದವರ ವಿರುದ್ಧ ‌ಕ್ರಮಕ್ಕೆ ಕಾಂಗ್ರೆಸ್​ ಆಗ್ರಹಿಸಿದೆ. ಸಿಎಂ ಸಿದ್ದರಾಮಯ್ಯರಂತಹ ಒಬ್ಬ ನಾಯಕನ ಬಗ್ಗೆ ಅವಹೇಳನಕಾರಿ ಪೋಸ್ಟ್​​ ಮಾಡಿದ ಹಾಗೂ ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಡಿ.ಬಸವರಾಜ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್ ದಾಖಲಿಸಿದ ಪೊಲೀಸರು

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ನೂತನ ಸರ್ಕಾರ ರಚನೆಯಾದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ರಾಜ್ಯಕ್ಕಾಗಿ ಸಿಎಂ ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿತ್ತು.

ಅದೇ ರೀತಿಯಾಗಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್​​ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ