ದಾವಣಗೆರೆ, ಸೆಪ್ಟೆಂಬರ್ 30: ಸಿಎಂ ಸಿದ್ದರಾಮಯ್ಯ (Siddaramaiah) ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ಮಾಡಿದ ಹಾಗೂ ಅದಕ್ಕೆ ಕಾಮೆಂಟ್ ಮಾಡಿದವರ ವಿರುದ್ದ ಕಾನೂನು ಕ್ರಮ ಜರಗಿಸುವಂತೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ಅವರು ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಜೆಪಿ ದಾವಣಗೆರೆ ಕಾರ್ಯಕರ್ತ ಹೆಸರಿನ ಫೇಸ್ ಬುಕ್ ಖಾತೆಯಿಂದ ಸಿದ್ದು ಸವಾರಿ ಮಸೀದಿ ಕಡೆ ಎಂದು ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ಗೆ ಮತ್ತಷ್ಟು ಅವಹೇಳನಕಾರಿಯಾಗಿ ಹತ್ತಾರು ಜನ ಕಾಮೆಂಟ್ ಹಾಕಿದ್ದಾರೆ.
ಸದ್ಯ ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿದವರ ಹಾಗೂ ಕಾಮೆಂಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಸಿಎಂ ಸಿದ್ದರಾಮಯ್ಯರಂತಹ ಒಬ್ಬ ನಾಯಕನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಹಾಗೂ ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಡಿ.ಬಸವರಾಜ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್ಐಆರ್ ದಾಖಲಿಸಿದ ಪೊಲೀಸರು
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ನೂತನ ಸರ್ಕಾರ ರಚನೆಯಾದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ
ರಾಜ್ಯಕ್ಕಾಗಿ ಸಿಎಂ ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿತ್ತು.
ಅದೇ ರೀತಿಯಾಗಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.