ದಾವಣಗೆರೆ ವಿಶ್ವ ವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ; ಚಿನ್ನದ ಪದಕ ಪಡೆಯುವಲ್ಲಿ ಹೆಣ್ಣು ಮಕ್ಕಳೇ ಮೇಲುಗೈ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 01, 2023 | 8:15 AM

ದಾವಣಗೆರೆ ವಿಶ್ವ ವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ; ಚಿನ್ನದ ಪದಕ ಪಡೆಯುವಲ್ಲಿ ಹೆಣ್ಣು ಮಕ್ಕಳೇ ಮೇಲುಗೈ ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ ನಿನ್ನೆ(ಫೆ.28) ಹತ್ತನೇ ಘಟಿಕೋತ್ಸವ ಕಾರ್ಯಕ್ರಮವು ಕುಲಪತಿ ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್​ರವರ ನೇತೃತ್ವದಲ್ಲಿ ಅದ್ಧೂರಿಯಾಗಿ ಜರುಗಿತು. ಈ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು

ದಾವಣಗೆರೆ ವಿಶ್ವ ವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ; ಚಿನ್ನದ ಪದಕ ಪಡೆಯುವಲ್ಲಿ ಹೆಣ್ಣು ಮಕ್ಕಳೇ ಮೇಲುಗೈ
ದಾವಣಗೆರೆ ವಿಶ್ವ ವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ; ಚಿನ್ನದ ಪದಕ ಪಡೆಯುವಲ್ಲಿ ಹೆಣ್ಣು ಮಕ್ಕಳೇ ಮೇಲುಗೈ
Follow us on

ದಾವಣಗೆರೆ: ತಾಲೂಕಿನ ತೋಳಹುಣಸೆ ಗ್ರಾಮದ ಬಳಿ ಇರುವ ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿಂದು ಹತ್ತನೇ ಘಟಿಕೋತ್ಸವ ಕಾರ್ಯಕ್ರಮ ಕುಲಪತಿ ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್(Thawar Chand Gehlot)​ರವರ ನೇತೃತ್ವದಲ್ಲಿ ಅದ್ಧೂರಿಯಾಗಿ ಜರುಗಿತು. ಈ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ಇನ್ನು ವಿಶೇಷ ಅಂದರೆ ಈ ಹತ್ತನೇ ಘಟಿಕೋತ್ಸವದಲ್ಲಿ ಹೆಣ್ಣು ಮಕ್ಕಳೇ ಅತಿ ಹೆಚ್ಚು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಪೋಷಕರಿಗೆ ಕೀರ್ತಿ ತಂದಿದ್ದು, ವಿಶ್ವ ವಿದ್ಯಾಲಯ ಅಂಗಳದಲ್ಲಿ ಬಹುತೇಕ ಕಡೆ ಯುವತಿಯರೇ ಕಂಡು ಬರುತ್ತಿದ್ದರು.

ಸ್ನಾತಕೋತ್ತರ ಪದವಿಗಳಲ್ಲಿ 2021-22ನೇ ಸಾಲಿನಲ್ಲಿ 1,161 ಮಹಿಳಾ ವಿದ್ಯಾರ್ಥಿಗಳು ಹಾಗೂ 638 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 1,700 ವಿದ್ಯಾರ್ಥಿಗಳು ಪದವಿ ಪಡೆದರು, ಇನ್ನು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು ಸೇರಿ ಒಟ್ಟು 13,978 ವಿದ್ಯಾರ್ಥಿಗಳು ಪದವಿ ಪಡೆದರು. 2021-22 ನೇ ಸಾಲಿನಲ್ಲಿ ಒಟ್ಟು 81 ಸ್ವರ್ಣ ಪದಕಗಳಲ್ಲಿಂದು ಸ್ನಾತಕ ಪದವಿಯಲ್ಲಿ 10 ಮಹಿಳಾ ಹಾಗೂ 01 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 14 ವಿದ್ಯಾರ್ಥಿಗಳು 22 ಸ್ವರ್ಣ ಪದಕಗಳನ್ನು ಪಡೆದರು. ಹಾಗೂ ಸ್ನಾತಕೋತ್ತರ ಪದವಿಯಲ್ಲಿ 22 ಮಹಿಳಾ ಹಾಗೂ 09 ಮರುಷ ವಿದ್ಯಾರ್ಥಿಗಳು ಸೇರಿ ಒಟ್ಟು 31 ವಿದ್ಯಾರ್ಥಿಗಳು 59 ಸ್ವರ್ಣ ಪದಕಗಳನ್ನು ಸ್ವೀಕರಿಸಿದ್ರು, ಇನ್ನು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಒಟ್ಟು 32 ಮಹಿಳಾ ವಿದ್ಯಾರ್ಥಿನಿಗಳು ಹಾಗೂ 13 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 45 ವಿದ್ಯಾರ್ಥಿಗಳು 81 ಚಿನ್ನದ ಪದಕಗಳನ್ನು ಹಂಚಿಕೊಂಡು ನಾವು ಯಾರಿಗೇನು ಕಮ್ಮಿ ಇಲ್ಲ ಎಂದು ಮಹಿಳಾ ವಿದ್ಯಾರ್ಥಿಗಳು ತೋರಿಸಿಕೊಟ್ಟರು.

ಇದನ್ನೂ ಓದಿ:ಬೀದರ್: ಪಂಚತಾರಾ ವಿಶ್ವ ವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ; ಬರೋಬ್ಬರಿ 1269 ಹುದ್ದೆಗಳು ಖಾಲಿ!

ಇನ್ನು ಪಿಹೆಚ್​​ಡಿ ವಿಭಾಗದಲ್ಲಿ ಮಾತ್ರ ಪುರುಷ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದು ಮತ್ತೊಂದು ವಿಶೇಷವಾಗಿತ್ತು. 10 ಪುರುಷ ವಿದ್ಯಾರ್ಥಿಗಳು ಪಿಹೆಚ್​ಡಿ ಪಡೆದರೆ, ಇತ್ತ ಕೇವಲ 04 ಜನ ಮಹಿಳಾ ವಿದ್ಯಾರ್ಥಿನಿಯರು ಪಿಹೆಚ್​ಡಿ ಪಡೆಯುವಲ್ಲಿ ಸಫಲರಾದ್ರು. ಇದಲ್ಲದೆ ಎಮ್​ಫಿಲ್ ಪದವಿಯಲ್ಲಿ ಪುರುಷ ವಿದ್ಯಾರ್ಥಿಗೆ ಪದವಿ ಪ್ರಧಾನ ಮಾಡಲಾಯಿತು, ಪದವಿಗಳನ್ನು ಪಡೆಯುವಲ್ಲಿ ಕೂಡ ಮಹಿಳಾ ವಿದ್ಯಾರ್ಥಿಗಳು ಮೇಲು ಗೈ ಸಾಧಿಸಿದ್ದು, 12,179 ಸ್ನಾತಕ ಪದವಿಯಲ್ಲಿ ಮಹಿಳಾ ವಿದ್ಯಾರ್ಥಿಗಳು 7,219 ಹಾಗು ಪುರುಷ ವಿದ್ಯಾರ್ಥಿಗಳು 4,960 ಪದವಿಗಳನ್ನ ಪಡೆದರು.

ವರದಿ: ಬಸವರಾಜ್ ದೊಡ್ಮನಿ ಟಿವಿ9 ದಾವಣಗೆರೆ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ