ದಾವಣಗೆರೆ ನವೋದಯ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ! ಶಾಲೆ ಸೀಲ್ ಡೌನ್
ನವೋದಯ ಶಾಲೆಯ 25 ಜನ ಸಿಬ್ಬಂದಿ ಸೇರಿ 539 ಜನರ ಗಂಟಲು ದ್ರವವನ್ನು ಸಂಗ್ರಹಿಸಲಾಗಿದೆ. ಈಗಾಗಲೇ ಪಾಸಿಟಿವ್ ಬಂದ ನಾಲ್ವರು ವಿದ್ಯಾರ್ಥಿಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ: ಚನ್ನಗಿರಿ ತಾಲೂಕಿನ ದೇವರಹಳ್ಳಿ ಬಳಿಯಿರುವ ಜವಾಹರ್ ನವೋದಯ ವಿದ್ಯಾಲಯ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾಹಿತಿ ನೀಡಿದ್ದಾರೆ. ಈವರೆಗೆ ಜಿಲ್ಲೆಯ 4,882 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 3,667 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಬಂದಿದೆ. ಉಳಿದ 1,215 ವರದಿಗಳಿಗಾಗಿ ಜಿಲ್ಲಾಡಳಿತ ಕಾದು ಕುಳಿತಿದೆ.
ನವೋದಯ ಶಾಲೆಯ 25 ಜನ ಸಿಬ್ಬಂದಿ ಸೇರಿ 539 ಜನರ ಗಂಟಲು ದ್ರವವನ್ನು ಸಂಗ್ರಹಿಸಲಾಗಿದೆ. ಈಗಾಗಲೇ ಪಾಸಿಟಿವ್ ಬಂದ ನಾಲ್ವರು ವಿದ್ಯಾರ್ಥಿಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ವರದಿ ಇಂದು ಸಂಜೆಯೊಳಗೆ ಲಭ್ಯವಾಗಲಿದೆ. ಸದ್ಯ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಅಂತ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ತಿಳಿಸಿದ್ದಾರೆ.
ಕೊಡಗಿನಲ್ಲಿ 25 ವಿದ್ಯಾರ್ಥಿಗಳಿಗೆ ಕೊರೊನಾ ಕೊಡಗು ಜಿಲ್ಲೆಯಲ್ಲಿ 25 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಿವಿಧ ಶಾಲೆಗಳ 375 ವಿದ್ಯಾರ್ಥಿಗಳಿಗೆ ಕೊವಿಡ್-19 ಟೆಸ್ಟ್ ಮಾಡಲಾಗಿದೆ. 375 ವಿದ್ಯಾರ್ಥಿಗಳ ಪೈಕಿ 25 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿನ ಲಕ್ಷಣವಿಲ್ಲ. ಸೋಂಕಿತ 25 ವಿದ್ಯಾರ್ಥಿಗಳಿಗೆ ತಮ್ಮ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸದಾಗಿ 320 ಜನರಿಗೆ ಕೊರೊನಾ ಸೋಂಕು ಕರ್ನಾಟಕದಲ್ಲಿ ನಿನ್ನೆ (ಡಿಸೆಂಬರ್ 11) ಹೊಸದಾಗಿ 320 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,54,513 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,257 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಇದನ್ನೂ ಓದಿ
ಜಮ್ಮು ಮತ್ತು ಕಾಶ್ಮೀರ: ಪುಲ್ವಾಮಾದಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಜಮ್ಮು ಮತ್ತು ಕಾಶ್ಮೀರ: ಪುಲ್ವಾಮಾದಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
Published On - 11:24 am, Sun, 12 December 21