ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ

ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ಒಂದು ದುರಂತ ಘಟನೆ ನಡೆದಿದೆ. 65 ವರ್ಷದ ಕಸ್ತೂರಿ ರಂಗಪ್ಪ ಅವರು ಪಡಿತರ ಪಡೆಯಲು ಹೋಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಸುದ್ದಿ ಕೇಳಿ ಅವರ ಪತ್ನಿ ಜಯಮ್ಮ (58) ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ.

ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ
ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 26, 2024 | 4:13 PM

ದಾವಣಗೆರೆ, ನವೆಂಬರ್​ 26: ಸಾವಿನಲ್ಲೂ ದಂಪತಿ (Couple) ಒಂದಾಗಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ನಡೆದಿದೆ. ಕಸ್ತೂರಿ ರಂಗಪ್ಪ (65) ಮತ್ತು ಜಯಮ್ಮ (58) ಮೃತ ದಂಪತಿ. ಸದ್ಯ ಸಂಬಂಧಿಕರು ದಂಪತಿ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಕಸ್ತೂರಿ ರಂಗಪ್ಪ ಹೋಗಿದ್ದಾರೆ. ಈ ವೇಳೆ ಕುಸಿದುಬಿದಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಇನ್ನು ಪತಿ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಪತ್ನಿಗೆ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪತ್ನಿ ಜಯಮ್ಮ ಕುಸಿದುಬಿದ್ದು ಅವರು ಕೂಡ ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ವೈದ್ಯ ಸಾವು

ಚಲಿಸುತ್ತಿರುವ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್​ನಲ್ಲಿದ್ದ ಚಿತ್ರದುರ್ಗ‌ಮೂಲದ ವೈದ್ಯ ಡಾ. ಜಿ.ಆರ್.‌ತಿಮ್ಮೇಗೌಡ (34) ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ಹೊರ ವಲಯದ ಬಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ರಾಷ್ಟ್ರೀಯ ಮಕ್ಕಳ‌ ಶ್ವಾಸಕೋಶ ತಜ್ಞ ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸಾಗುವ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ.ತಿಮ್ಮೇಗೌಡ ವೈದ್ಯರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರು ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವು

ಮತ್ತೊಂದು ಪ್ರಕರಣದಲ್ಲಿ ಕಾರು ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೆದ್ಲೆಟ್ಟಿ ಗ್ರಾಮದ ಬಳಿ ನಡೆದಿತ್ತು. ರೂಪಾ (08) ಸಾವನ್ನಪ್ಪಿದ್ದ ಬಾಲಕಿ. ಈ ಹಿಂದೆ ಕೂಡ ಒಂದು ಮಗು ಸಾವನ್ನಪ್ಪಿತ್ತು.

ಇದನ್ನೂ ಓದಿ: ಮಂಡ್ಯದಲ್ಲಿ ಪ್ರಾಮಾಣಿಕ ಕಳ್ಳರು: ಕದ್ದ ಚಿನ್ನಾಭಾರಣ ವಾಪಸ್ ಅದೇ ಜಾಗದಲ್ಲೇ ಇಟ್ಟು ಹೋದರು

ಇದೇ ಕಾರಣಕ್ಕೆ ರೊಚ್ಚಿಗೆದ್ದ ಜನ ಮರದ ತುಂಡು, ವಾಹನ ಅಡ್ಡ ನಿಲ್ಲಿಸಿ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಹಾಗೂ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಕೆಲ ಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?