ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು: ಮೃತದೇಹ ತರಿಸಿಕೊಡುವಂತೆ ಸರ್ಕಾರಕ್ಕೆ ತಾಯಿ ಮನವಿ

ದಾವಣಗೆರೆ ಮೂಲದ ದಂಪತಿ ಸೇರಿದಂತೆ ಆರು ವರ್ಷದ ಮಗು ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರು ಮೂಲತಃ ದಾವಣಗೆರೆ ಜಿಲ್ಲೆಯವರು. ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಮಗನ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು: ಮೃತದೇಹ ತರಿಸಿಕೊಡುವಂತೆ ಸರ್ಕಾರಕ್ಕೆ ತಾಯಿ ಮನವಿ
ಮೃತ ದಂಪತಿ ಮತ್ತು ಮಗು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 19, 2023 | 4:48 PM

ದಾವಣಗೆರೆ, ಆಗಸ್ಟ್​ 19: ಅಮೆರಿಕದಲ್ಲಿ ದಾವಣಗೆರೆ (Davanagere) ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ ಘಟನೆ ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದರು. ಯೋಗೇಶ್​, ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದರು. ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೌಟುಂಬಿಕ ಕಲಹ: ಪತಿಯಿಂದ ಪತ್ನಿಯ ಕೊಲೆ

ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ಮಾಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಸುಲೋಚನಾ(45) ಕೊಲೆ ಮಾಡಿದ ಪತಿ ನಾಗರಾಜಪ್ಪ(48). ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದ.

ಇದನ್ನೂ ಓದಿ: ಕಲಬುರಗಿ: ಶಾಲಾ ವಿದ್ಯಾರ್ಥಿಯ ಅಪಹರಣ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಮುಂದೇನಾಯ್ತು?

ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ. ಬಳಿಕ ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಆರ್​​ಟಿಪಿಎಸ್​​ನಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ದುರ್ಮರಣ

ರಾಯಚೂರು: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿರೊ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ನಡೆದಿದೆ. ನಿಂಗಪ್ಪ(45)ಮೃತ ಕಾರ್ಮಿಕ. ಯುನಿಟ್ 4 ನ ಇಎಸ್​ಪಿಸಿ ವಿಭಾಗದಲ್ಲಿ ಇಂದು ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್​ ತಗುಲಿ ಅವಘಡ ಸಂಭವಿಸಿದೆ. ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಬೀದಿ ನಾಯಿಗಳ ದಾಳಿಗೆ ಐದು ಮೇಕೆಗಳು ಬಲಿ

ಚಿಕ್ಕೋಡಿ: ಬೀದಿ ನಾಯಿಗಳ ದಾಳಿಗೆ ಐದು ಮೇಕೆಗಳು ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ‌ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಬೇಡಕಿಹಾಳ‌ ಗ್ರಾಮದ ಹೊರವಲಯ ತೋಟದಲ್ಲಿ ನಡೆದಿದೆ. ಮಹಾದೇವ ಮೋಹಿತೆ ಎಂಬುವವರಿಗೆ ಮೃತ ಐದು‌ ಮೇಕೆಗಳು ಸೇರಿದ್ದವು.

ಇದನ್ನೂ ಓದಿ: ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ಕುಟುಂಬ ಸಮೇತ ಊರಲ್ಲಿದ್ದ ಮನೆಗೆ ತೆರಳಿದಾಗ ಬೀದಿ ನಾಯಿಗಳ ದಾಳಿ ಮಾಡಿದ್ದಾವೆ. ಬಿಡಾಡಿ ನಾಯಿಗಳ ಹಾವಳಿಗೆ ತೋಟದ ವಸತಿಯ ಜನ ಬೇಸತ್ತಿದ್ದಾರೆ. ಈ ಹಿಂದೆಯೂ ಸಹ ದನ ಕರುಗಳ ಮೇಲೆ‌ ನಾಯಿಗಳು ದಾಳಿ ಮಾಡಿದ್ದವು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:25 pm, Sat, 19 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ