Davanagere Benne Dose: ಡಿ. 23 ರಿಂದ ಮೂರು ದಿನ ದಾವಣಗೆರೆ ಬೆಣ್ಣೆದೋಸೆ ಹಬ್ಬ

ಇತಿಹಾಸ ಪ್ರಸಿದ್ದ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಡಿ. 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.

Davanagere Benne Dose: ಡಿ. 23 ರಿಂದ ಮೂರು ದಿನ ದಾವಣಗೆರೆ ಬೆಣ್ಣೆದೋಸೆ ಹಬ್ಬ
ದಾವಣಗೆರೆ ಬೆಣ್ಣೆದೋಸೆ (ಸಂಗ್ರಹ ಚಿತ್ರ)
Edited By:

Updated on: Dec 13, 2023 | 10:00 PM

ದಾವಣಗೆರೆ, ಡಿಸೆಂಬರ್​ 13: ದಾವಣಗೆರೆ ಬೆಣ್ಣೆದೋಸೆ (Davanagere Benne Dose) ಇತಿಹಾಸ ಪ್ರಸಿದ್ದವಾಗಿದ್ದು ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ದತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೋಟೆಲ್ ಮಾಲಿಕರೊಂದಿಗೆ ಚರ್ಚಿಸಲಾಗಿದ್ದು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ದಾವಣಗೆರೆ ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.

ಇದನ್ನೂ ಓದಿ: ದಾವಣಗೆರೆ ಚಾಣಕ್ಯ ಕಾಲೇಜಿನಲ್ಲಿ ಆಹಾರ ಮೇಳ; ಡಿಫರೆಂಟ್ ಫುಡ್​ಗಳ ಅನಾವರಣ, ಇಲ್ಲಿದೆ ಫೋಟೋಸ್​

ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10 ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸಲಿದ್ದಾರೆ.

ದೋಸೆ ಹಬ್ಬವನ್ನು ಏರ್ಪಡಿಸುವ ಮೂಲಕ ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟವನ್ನು ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಬೆಳೆದ ಬೆಳೆ ಬೆಣ್ಣೆನಗರಿಯಲ್ಲಿ ಸಹ ಬೆಳೆಯಬಹುದು! ಯಾವುದದು? ಏನದು ರೈತ ಕಸರತ್ತು?

ದೋಸೆ ಹೋಟೆಲ್‍ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡಗಳನ್ನು ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ .ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us