ದಾವಣಗೆರೆ, ಫೆ.24: ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ದಾವಣಗೆರೆ (Davanagere) ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ. ಪಿ.ಜೆ.ಕೊಟ್ರೇಶ್ ಮೃತ ವ್ಯಕ್ತಿ. ಶಿವಮೊಗ್ಗ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ, ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ದುರ್ಘಟನೆ ನಡೆದಿದೆ. ಫೆಬ್ರವರಿ 21ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಕಸ್ತೂರಿ(25) ಎಂಬುವರು ಸಾವನ್ನಪ್ಪಿದ್ದಾರೆ. ಇತ್ತ ಐದು ತಿಂಗಳ ಮಗು ಸ್ಥಿತಿ ಚಿಂತಾಜನಕವಾಗಿದ್ದು, ಕಸ್ತೂರಿ ಪತಿ ಮಂಜುನಾಥ್ , ಅತ್ತೆ ಉಮಾ ಹಾಗೂ ಮೈದುನ ಮುತ್ತು ಎಂಬುವವರು ಪತ್ನಿ, ಮಗುವಿಗೆ ವಿಷ ಕುಡಿಸಿದ್ದಾರೆ ಎಂದು ಕಸ್ತೂರಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನಲೆ ಆರೋಪಿ ಮಂಜುನಾಥ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಪ್ರಕರಣ: ಇಬ್ಬರು ವೈದ್ಯರು ಸೇರಿ ಮೂವರ ವಿರುದ್ಧ ಎಫ್ಐಆರ್
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ