28 ಕ್ಷೇತ್ರಗಳಲ್ಲಿ ನಿಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ: ಮಾಜಿ ಶಾಸಕ ರೇಣುಕಾಚಾರ್ಯ ಕಿಡಿ

ದಾವಣಗೆರೆಯಲ್ಲಿ ಹೊನ್ನಾಳಿಯ ಮಾಜಿ‌ ಶಾಸಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು, 9 ತಿಂಗಳಾದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಟೇಕಾಫ್​ ಆಗಿಲ್ಲ. ಅದೇ ಕೆಂಪಣ್ಣ ಕಾಂಗ್ರೆಸ್ ವಿರುದ್ಧ ಕಮಿಷನ್​ ಆರೋಪ ಮಾಡಿದ್ದಾರೆ. ಹೊಣೆ ಹೊತ್ತು ರಾಜೀನಾಮೆ ನೀಡಿ. 28 ಕ್ಷೇತ್ರಗಳಲ್ಲಿ ನಿಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

28 ಕ್ಷೇತ್ರಗಳಲ್ಲಿ ನಿಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ: ಮಾಜಿ ಶಾಸಕ ರೇಣುಕಾಚಾರ್ಯ ಕಿಡಿ
BJP ಮಾಜಿ ಶಾಸಕ ರೇಣುಕಾಚಾರ್ಯ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 10, 2024 | 7:32 PM

ದಾವಣಗೆರೆ, ಫೆಬ್ರವರಿ 10: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಛಿದ್ರ ಛಿದ್ರವಾಗುತ್ತದೆ. 28 ಕ್ಷೇತ್ರಗಳಲ್ಲಿ ನಿಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ ಎಂದು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ (Renukacharya) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು​ ನೀಡಿದ ಎಲ್ಲಾ ಗ್ಯಾರಂಟಿಗಳು ಫೇಲ್ಯೂರ್​ ಆಗಿವೆ. ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. 9 ತಿಂಗಳಾದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಟೇಕಾಫ್​ ಆಗಿಲ್ಲ. ಹಿಂದೆ ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿದ್ದರು. ಅದೇ ಕೆಂಪಣ್ಣ ಕಾಂಗ್ರೆಸ್ ವಿರುದ್ಧ ಕಮಿಷನ್​ ಆರೋಪ ಮಾಡಿದ್ದಾರೆ. ಈಗ ಆರೋಪ ಬಂದಿದೆಯಲ್ಲ, ಹೊಣೆ ಹೊತ್ತು ರಾಜೀನಾಮೆ ನೀಡಿ. ಗುತ್ತಿಗೆದಾರರು ಆರೋಪ ಮಾಡಿದ್ರೂ ಸ್ಪಷ್ಟವಾದ ಉತ್ತರ‌ ನೀಡುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರೈತರಿಗೆ ಬರ ಪರಿಹಾರ ನೀಡುವಲ್ಲಿ ಕೂಡ ನೀವು ವಿಫರಾಗಿದ್ದೀರಿ. INDIA ಒಕ್ಕೂಟದಿಂದ ಎಲ್ಲಾರೂ ಹೊರ ಬಂದಿದ್ದಾರೆ. 28 ಕ್ಷೇತ್ರಗಳಲ್ಲಿ ಸಚಿವರನ್ನೇ ನಿಲ್ಲಸಬೇಕು ಎನ್ನುವ ಪ್ಲಾನ್ ಕಾಂಗ್ರೆಸ್ ಮಾಡಿಕೊಂಡಿದೆ. ಪ್ರತಿಭಟನೆಗಳನ್ನು ಮಾಡಿ ಅವರ ದುರಾಡಳಿವನ್ನು ಮುಚ್ಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕೆ.ಎಸ್​.ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

ಗುಂಡಿಕ್ಕಿ ಕೊಲ್ಲಬೇಕು ಎಂದು ಬಿಜೆಪಿ ಹಿರಿಯ ನಾಕಯ ಕೆ.ಎಸ್​.ಈಶ್ವರಪ್ಪ ಹೇಳಿಕೆಯನ್ನು ರೇಣುಕಾಚಾರ್ಯ ಸಮರ್ಥಿಸಿಕೊಂಡರು. ಈಶ್ವರಪ್ಪ ಹಿಂದುತ್ವವಾದಿ, ಅದ್ದರಿಂದ ಇರೋದನ್ನೇ ಹೇಳಿದ್ದಾರೆ. ದೇಶ ವಿಭಜನೆ ಮಾಡಬೇಕು ಅಂದರೆ ಯಾರು ಸುಮ್ಮನೆ ಇರುತ್ತಾರೆ.

ಇದನ್ನೂ ಓದಿ: ಡಿಕೆ ಸುರೇಶ್, ವಿನಯ್​ ಕುಲಕರ್ಣಿಗೆ ಗುಂಡಿಕ್ಕಿ ಕೊಲ್ಲಬೇಕೆಂದ ಈಶ್ವರಪ್ಪ ವಿರುದ್ಧ ಎಫ್​ಐಆರ್

ಕಾಂಗ್ರೆಸ್ ವೈಫಲ್ಯ ಮುಚ್ಚಿ ಹಾಕಲು ಈ ರೀತಿ ಮಾತನಾಡುತ್ತಿದ್ದಾರೆ. ದೇಶ ವಿಭಜನೆ ಮಾತಾಡಿದರೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಅಂತಾ ಮಾತ್ರ ಹೇಳಿದ್ದಾರೆ ಎಂದರು.

ಪರೋಕ್ಷವಾಗಿ ‌ದಾವಣಗೆರೆ ಲೋಕ ಸಭಾ ಕ್ಷೇತ್ರದ ಟಿಕೆಟ್ ‌ಕೇಳಿದ ಮಾಜಿ ಸಚಿವ ಎಂಪಿ‌ ರೇಣುಕಾಚಾರ್ಯ

ಇತ್ತೀಚೆಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದ ಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಪಿ‌ ರೇಣುಕಾಚಾರ್ಯ, ಪರೋಕ್ಷವಾಗಿ ‌ದಾವಣಗೆರೆ ಲೋಕ ಸಭಾ ಕ್ಷೇತ್ರದ ಟಿಕೆಟ್ ‌ಕೇಳಿದ್ದರು. ಆದರೆ ದಾವಣಗೆರೆ ಕ್ಷೇತ್ರಕ್ಕೆ ಇವರೇ ಅಧ್ಯಕ್ಷರು ಅಂತಾ ಹೆಸರು ಘೋಷಣೆ ಮಾಡಿಲ್ಲ. ಈಗಾಗಲೇ ನಾವು ಬಹಿರಂಗವಾಗಿಯೇ ಹೇಳಿದ್ದೇವೆ. ಸರ್ವೇ ಮಾಡಲಿ. ಸ್ಥಳೀಯರಿಗೆ ಲೋಕ ಸಭೆಯಲ್ಲಿ ಗೆಲ್ಲುವ ಶಕ್ತಿ ಇಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಮಾಡಾಳ್ ಮತ್ತೆ ಬಿಜೆಪಿಗೆ; ಜಿಎಂ ಸಿದ್ದೇಶ್ವರ-ರೇಣುಕಾಚಾರ್ಯ ನಡುವೆ ಮುಸುಕಿನ ಗುದ್ದಾಟ; ಬಿವೈ ವಿಜಯೇಂದ್ರ ಮಧ್ಯಪ್ರವೇಶ

ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿ ಕಟ್ಟಿ ಬೆಳಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಮಾಜಿ ಸಚಿವ ಎಸ್ ಎ ರವೀಂದ್ರನಾಥ ಅವರು ಬೆಳೆಸಿದ್ದಾರೆ ಎಂದು ಹೇಳುವ ಮೂಲಕ, ಪರೋಕ್ಷವಾಗಿ ಹಾಲಿ ಸಂಸದ ಜಿಎಂ ಸಿದ್ದೇಶ್ವರ ವಿರುದ್ಧ ವಾಗ್ದಾಳಿ‌ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.