ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ

Independence Day 2021: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಜಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾದ ರುದ್ರಮುನಿಯಪ್ಪ, ಹೆಚ್.ವೀರಯ್ಯ, ಚಂದ್ರರೆಡ್ಡಿ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ
Follow us
TV9 Web
| Updated By: ganapathi bhat

Updated on: Aug 15, 2021 | 11:10 PM

ದಾವಣಗೆರೆ: ಸ್ವಾತಂತ್ರ್ಯ ದಿನಾಚರಣೆಯ ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನ ಮಾಡುವ ಉತ್ತಮ ಕಾರ್ಯವನ್ನು ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿದೆ. ಈ ಮೂಲಕ, ದಾವಣಗೆರೆಯಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಇಂದು ದೇಶಕ್ಕೆ ಸ್ವಾತಂತ್ರ ಸಿಕ್ಕು 75 ವರ್ಷವಾಯಿತು. ಸ್ವಾತಂತ್ರ್ಯ ಎಂಬುದು ಸುಮ್ಮನೇ ಸಿಕ್ಕಿಲ್ಲ. ಲಕ್ಷಾಂತರ ಜನರ ತ್ಯಾಗ ಬಲಿದಾನಗಳ ಮೂಲಕ ಲಭಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಮನೆ ಬಿಟ್ಟು ಹೋರಾಟ ಮಾಡಿದ ಕೆಲವು ಹಿರಿಯರು ಈಗ ನಮ್ಮ ಜೊತೆಗೆ ಇದ್ದಾರೆ. ಅಂತಹವರ ಮನೆಗೆ ತೆರಳಿ ಅವರೊಂದಿಗೆ ಸಂಭ್ರಮ ಆಚರಣೆ ಮಾಡುವ ಕಾರ್ಯವನ್ನು ದಾವಣಗೆರೆ ಜಿಲ್ಲಾಡಳಿತ ಮಾಡಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ನಿವಾಸಿ ರುದ್ರಮುನಿಯಪ್ಪ, ಎಚ್. ವೀರಯ್ಯ ಹಾಗೂ ಚಂದ್ರ ರೆಡ್ಡಿ ಎಂಬ ಮೂರು ಜನ ಹಿರಿಯರು ದೇಶವನ್ನು ದಾಸ್ಯದಿಂದ ವಿಮೋಚನೆ ಮಾಡಲು ಮಹಾತ್ಮ ಗಾಂಧೀಜಿ ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಜಗಳೂರು ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಭಾಗವಾಗಿತ್ತು. ಈ ಜಿಲ್ಲೆಯ ಭಾಗವಾದ ಜಗಳೂರಿನಲ್ಲಿ ನೂರಾರು ಜನ ತಂಡ ಕಟ್ಟಿ ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. ಅವರಲ್ಲಿ ಈ ಮೂವರು ಈಗ ನಮ್ಮ ಜೊತೆಗಿದ್ದಾರೆ. ಗಾಂಧಿಯ ಆದರ್ಶದಂತೆ ಸರಳ ಜೀವನ ನಡೆಸುತ್ತಿರುವ ಇವರ ಮನೆಗಳಿಗೆ ತೆರಳಿ ಜಿಲ್ಲಾಡಳಿತ ಇಂದು ಸ್ವಾತಂತ್ರ್ಯ ದಿನ ಆಚರಿಸಿದೆ.

ಈ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಗಳೂರು ಶಾಸಕ ಎಸ್.ವಿ ರಾಮಚಂದ್ರ, ಎಸ್​ಪಿ ಸಿ.ಬಿ ರಿಷ್ಯಂತ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ವಿಜಯ ಮಹಾಂತೇಶ ಭಾಗವಹಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಜಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾದ ರುದ್ರಮುನಿಯಪ್ಪ, ಹೆಚ್.ವೀರಯ್ಯ, ಚಂದ್ರರೆಡ್ಡಿ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ.

ಇದನ್ನೂ ಓದಿ: Independence Day: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ

ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನವೇ ಕಾರ್ಮಿಕರ ಪ್ರತಿಭಟನೆ!

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್