ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ

ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ ಹಿನ್ನಲೆ ಹಾಸ್ಟೆಲ್‌ನಲ್ಲಿ ನೀಡಿದ್ದ ಊಟದಲ್ಲಿ ಹುಳು ಇರುವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಹಿನ್ನೆಲೆ ಅಮಾನತು ಆದೇಶಗೊಳಿಸಿದ್ದಾರೆ. ಜೊತೆಗೆ ಅಮಾನತುಗೊಂಡವರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಡಿಸಿ ಖಡಕ್​ ಸೂಚನೆ ನೀಡಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ
ದಾವಣಗೆರೆ ಜಿಲ್ಲಾಧಿಕಾರಿ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 28, 2023 | 6:56 PM

ದಾವಣಗೆರೆ, ನ.28: ಜಿಲ್ಲೆಯ ಚನ್ನಗಿರಿ(Channagiri)ತಾಲೂಕಿನ ಕಾಕನೂರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ(Kittur Rani Channamma Residential School) ಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಿನ್ಸಿಪಾಲ್‌ ಮಂಜುನಾಥ ಪುರದ್ ಹಾಗೂ ವಸತಿ ಶಾಲೆಯ ಮೇಲ್ವಿಚಾರಕಿ ನಸೀನಾ ಬಾನು ಅವರನ್ನು ಸೇವೆಯಿಂದ  ಅಮಾನತುಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ನೀಡಿದ್ದ ಊಟದಲ್ಲಿ ಹುಳು ಇರುವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಹಿನ್ನೆಲೆ ಅಮಾನತು ಆದೇಶಗೊಳಿಸಿದ್ದಾರೆ. ಜೊತೆಗೆ ಅಮಾನತುಗೊಂಡವರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಡಿಸಿ ಖಡಕ್​ ಸೂಚನೆ ನೀಡಿದ್ದಾರೆ. ಇನ್ನು ಜಿಲ್ಲಾಸ್ಪತ್ರೆ ಸೇರಿದಂತೆ ಸಂತೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಹಾಗೂ ಪೋಷಕರು ವಸತಿ ಶಾಲೆ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಇದನ್ನೂ ಓದಿ:ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಘಟನೆ ವಿವರ

ನಿನ್ನೆ(ನ.28) ಮಧ್ಯಾಹ್ನ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರು. ವಾಂತಿ ಭೇದಿ ಶುರುವಾದ ತಕ್ಷಣವೇ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದರಲ್ಲಿ ಐವರು ಮಕ್ಕಳು ಗಂಭೀರ ಅಸ್ವಸ್ಥಗೊಂಡಿದ್ದ ಹಿನ್ನಲೆ ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಈ ಮಧ್ಯೆ, ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿರುವ ಆರೋಪ ಕೇಳಿಬಂದಿದೆ. ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 28 November 23

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ