ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​

ದಾವಣಗೆರೆ ಜಿಲ್ಲೆಯ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾತಿನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರು ಶಿಕ್ಷಕರು ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ಸಾವಿಗೆ ಕಿರುಕುಳವೇ ಕಾರಣವೆಂದು ಆರೋಪಿಸಿ ಜಯಪ್ಪ ಅವರ ಪತ್ನಿ ಅಂಜಿನಮ್ಮ ದೂರು ನೀಡಿದ್ದರು.

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​
ಮೃತ ಮುಖ್ಯ ಶಿಕ್ಷಕ ಜಯಪ್ಪ
Image Credit source: Tv9 Kannada
Edited By:

Updated on: Jun 18, 2026 | 6:09 PM

ದಾವಣಗೆರೆ, ಜೂನ್​​ 18: ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ,ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಸೇರಿದಂತೆ 10 ಜನರ ವಿರುದ್ಧ ಮಲೆಬೆನ್ನೂರು ಠಾಣೆಗೆ ಜಯಪ್ಪ ಪತ್ನಿ ಅಂಜನಮ್ಮ ದೂರು ನೀಡಿದ್ದರು.

ಅಂಜನಮ್ಮ ದೂರಿನಲ್ಲಿ ಏನಿದೆ?

ಕಳೆದ 10 ತಿಂಗಳಿಂದ ಕೊಕ್ಕನೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪತಿ ಜಯಪ್ಪಗೆ ನಿತ್ಯವೂ ಹಿಂಸೆ ನೀಡಲಾಗುತ್ತಿತ್ತು. ನಾವು ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಜಾತಿ ನಿಂದನೆ ಮಾಡುತ್ತಿದ್ದರು. ಈ ವಿಚಾರವನ್ನು ಹತ್ತಾರು ಸಲ ಪತಿ ಜಯಪ್ಪ ತನಗೆ ಹೇಳಿದ್ದರು. ಇವರು ನೀಡಿದ ಮಾನಸಿಕ ಹಿಂಸೆಯೇ ತನ್ನ ಪತಿ ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ಅಂಜಿನಮ್ಮ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು; ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ!

ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ನಡುವೆ ಒಳಜಗಳದ ಆರೋಪ ಕೇಳಿಬಂದಿತ್ತು. ಸಹಶಿಕ್ಷಕರು, ಅಡುಗೆ ಸಹಾಯಕರು ಮತ್ತು ಮುಖ್ಯ ಶಿಕ್ಷಕನ ನಡುವೆ ಮನಸ್ಥಾಪದ ಹಿನ್ನೆಲೆ ಎಸ್​​ಡಿಎಂಸಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆದಿತ್ತು. ಸಭೆ ಸೇರಿದ್ದ ವೇಳೆ ಶಾಲಾ ಶೌಚಾಲಯಕ್ಕೆ ಹೋಗಿ ಮುಖ್ಯ ಶಿಕ್ಷಕ ಜಯಪ್ಪ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us