ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

| Updated By: ಗಣಪತಿ ಶರ್ಮ

Updated on: Nov 27, 2023 | 6:42 PM

ಮಧ್ಯಾಹ್ನದ ಊಟ ಮಾಡಿದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸಂತೆಬೆನ್ನೂರು ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಮೂವರು ತೀವ್ರ ಅ್ವಸ್ವಸ್ಥರಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಆಸಪತ್ರೆಗೆ ದಾಖಲಿಸಲಾಯಿತು
Follow us on

ದಾವಣಗೆರೆ, ನವೆಂಬರ್ 27: ಸಂತೆಬೆನ್ನೂರು ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ (Kittur Rani Channamma Residential School) ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅಸ್ವಸ್ಥಗೊಂಡವರ ಪೈಕಿ ಐವರ ಸ್ಥಿತಿ ಗಂಭೀರ‌ವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ (Davanagere) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿ ಶುರುವಾಗಿದೆ. ತಕ್ಷಣವೇ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಅಸ್ವಸ್ಥಗೊಂಡಿರುವ ಐವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಈ ಮಧ್ಯೆ, ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿರುವ ಆರೋಪ ಕೇಳಿಬಂದಿದೆ. ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಮಕ್ಕಳು ಅಸ್ವಸ್ಥ

ಕೋಲಾರದ ಬಂಗಾರಪೇಟೆ ತಾಲೂಕಿನ ದೊಡ್ಡಪೊನ್ನಾಂಡಹಳ್ಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಗಿರೀಶ್, ಧನು, ಡಂಕಣಚಾರಿಗೆ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಚಿಕ್ಕಮಗಳೂರು; ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ, ಆಸ್ಪತ್ರೆಗೆ ಶಾಸಕ ಭೇಟಿ

ಸಮಾರಂಭವೊಂದರಲ್ಲಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಇತ್ತೀಚೆಗೆ ನಡೆದಿತ್ತು. ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳಗಳು ಪತ್ತೆಯಾದ ಬಗ್ಗೆಯೂ ಇತ್ತೀಚೆಗೆ ವರದಿಯಾಗಿತ್ತು. ರಾಜ್ಯಾದ್ಯಂತ ಇಂಥ ಅನೇಕ ಘಟನೆಗಳು ಇತ್ತೀಚೆಗೆ ವರದಿಯಾಗುತ್ತಿವೆ. ಸಂಬಂಧಪಟ್ಟವರು ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಆಗ್ರಹ ಎಲ್ಲೆಡೆ ವ್ಯಕ್ತವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಮಾಡಿ