ಯಾವುದೇ ದೇಗುಲದ ತೆರವು/ ಸ್ಥಳಾಂತರ ಇಲ್ಲವೆಂದು ಸಿಎಂ ಸ್ಪಷ್ಟಪಡಿಸಿದ್ದಾರೆ: ಎನ್ ರವಿಕುಮಾರ್

| Updated By: guruganesh bhat

Updated on: Sep 19, 2021 | 7:00 PM

ರೈತ ಮಕ್ಕಳಿಗೆ ಶಿಷ್ಯ ವೇತನ ನೀಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದರು.

ಯಾವುದೇ ದೇಗುಲದ ತೆರವು/ ಸ್ಥಳಾಂತರ ಇಲ್ಲವೆಂದು ಸಿಎಂ ಸ್ಪಷ್ಟಪಡಿಸಿದ್ದಾರೆ: ಎನ್ ರವಿಕುಮಾರ್
ಬಸವರಾಜ ಬೊಮ್ಮಾಯಿ ಮತ್ತು ಎನ್ ರವಿಕುಮಾರ್
Follow us on

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ದೇಗುಲ ತೆರವುಗೊಳಿಸುವುದಿಲ್ಲ, ಅಲ್ಲದೇ ಸ್ಥಳಾಂತರ ಕೂಡ ಮಾಡುವುದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಉದ್ಘಾಟನಾ ಭಾಷಣದಲ್ಲಿ ಸ್ಪಷ್ಟಪಡಿಸಿದ್ದಾರೆ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮುಕ್ತಾಯಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಯಶಸ್ವಿಯಾಗಿದ್ದು ಕಾರ್ಯಕಾರಿಣಿಯಲ್ಲಿ 2 ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ರಾಜ್ಯಗಳಿಗೆ ಅಧಿಕಾರ ನೀಡಿದ ಕಾರಣಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ರೈತ ಮಕ್ಕಳಿಗೆ ಶಿಷ್ಯ ವೇತನ ನೀಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಯಶಸ್ವಿಯಾಗಿದೆ. ಜನಪರ ಆಡಳಿತ ಮಾಡುವುದಕ್ಕೆ ಸಂಕಲ್ಪ ಮಾಡಿದ್ದೇವೆ. ಅಧಿವೇಶನ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಬೇಕು. ಆಡಳಿತಕ್ಕೆ ಮತ್ತಷ್ಟು ಚುರುಕು ಮುಟ್ಟಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: 

ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಗ್ರಾಮಸ್ಥರ ಪ್ರತಿಭಟನೆ, ಕಾಂಗ್ರೆಸ್ ಆಕ್ರೋಶ

ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ, ಬಿಜೆಪಿ ನಾಯಕರನ್ನು ಡಿಕೆ ಶಿವಕುಮಾರ್ ಸಂಪರ್ಕಿಸಿದ್ದಾರೆ; ಯಡಿಯೂರಪ್ಪ

Published On - 5:59 pm, Sun, 19 September 21