ದಾವಣಗೆರೆ; ಸಾರ್ವಜನಿಕರಿಂದ ದೂರಿನ ಸುರಿಮಳೆ, ಪಿಡಿಓಗೆ ತರಾಟೆಗೆ ತೆಗೆದುಕೊಂಡ ಶಾಸಕರ ವಿಡಿಯೋ ವೈರಲ್

ದೊಡ್ಡಅಬ್ಬಿಗೆರೆ ಗ್ರಾಮದ ಪಿಡಿಓ ರಂಗನಾಥ ಎಂಬುರನ್ನ ಶಾಸಕ ಬಸವರಾಜ್ ಶಿವಗಂಗಾ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಾದ ಬಸವರಾಜು ವಿ ಶಿವಗಂಗಾ ಅವರ ಬಳಿ ಸಾರ್ವಜನಿಕರು ಪಿಡಿಓ ವಿರುದ್ಧ ದೂರುಗಳ ಸರಮಾಲೆ ಇಟ್ಟಿದ್ದಾರೆ.

ದಾವಣಗೆರೆ, ಆ.20: ಜಿಲ್ಲೆಯ ಚನ್ನಗಿರಿ ವಿಧಾನ ಸಭಾ ಕ್ಷೇತ್ರದಿಂದ ಬಸವರಾಜ್ ಶಿವಗಂಗಾ(MLA Basavaraj Shivaganga) ಆಯ್ಕೆ ಆಗಿದ್ದಾರೆ. ಇದೇ ಮೊದಲ ಸಲ ವಿಧಾನ ಸಭೆಗೆ ಕಾಂಗ್ರೆಸ್ಸಿನಿಂದ ಆಯ್ಕೆ ಆಗಿದ್ದಾರೆ. ಹೀಗಾಗಿ ಏನಾದ್ರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಬೇಕು ಎಂಬುದು ಅವರ ಆಶಯ. ಹೀಗಾಗಿ ಇಂದು ದೊಡ್ಡ ಅಬ್ಬಿಗೆರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಇಲ್ಲಿನ ಕಸಗುಡಿಸುವ ಜನಕ್ಕೆ ಕಳೆದ ಏಳು ತಿಂಗಳಿಂದ ಸಂಬಳವೇ ಸಿಕ್ಕಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ. ತಕ್ಷಣವೇ ಶಾಸಕ ಬಸವರಾಜ್ ಶಿವಗಂಗಾ ಪಿಡಿಓಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಹೀಗೆ ತರಾಟೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.

ದೊಡ್ಡಅಬ್ಬಿಗೆರೆ ಗ್ರಾಮದ ಪಿಡಿಓ ರಂಗನಾಥ ಎಂಬುರನ್ನ ಶಾಸಕ ಬಸವರಾಜ್ ಶಿವಗಂಗಾ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಾದ ಬಸವರಾಜು ವಿ ಶಿವಗಂಗಾ ಅವರ ಬಳಿ ಸಾರ್ವಜನಿಕರು ಪಿಡಿಓ ವಿರುದ್ಧ ದೂರುಗಳ ಸರಮಾಲೆ ಇಟ್ಟಿದ್ದಾರೆ. ಇದನ್ನ ಗಮನಿಸಿದ ಶಾಸಕರು ತಕ್ಷಣ ಮೇಲಾಧಿಕಾರಿಗಳಿಗೆ ಸೂಚನೆ ನೀಡಿ ಇವರನ್ನ ಬೇರೆ ಕಡೆ ವರ್ಗಾವಣೆ ಮಾಡಿ. ಚನ್ನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಇವರು ಇರಬಾರದು ಎಂದು ತಾಕೀತು ಮಾಡಿದ್ದಾರೆ. ಚನ್ನಗಿರಿ ಕ್ಷೇತ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತವರಿಗೆ ಇಲ್ಲಿ ಅವಕಾಶವಿಲ್ಲ. ಮೇಲಾಗಿ ಕಸ ತೆಗೆದುಕೊಂಡು ಹೋಗುವ ಸಿಬ್ಬಂದಿಗೆ ವೇತನ ನೀಡಲು ವಿಳಂಬ ಮಾಡದೆ ಅವರ ಸಂಕಷ್ಟಕ್ಕೆ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಶಾಸಕರು ಕಿಡಿಕಾರಿದರು.

ಇದನ್ನೂ ಓದಿ: ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ: ವ್ಯವಸ್ಥಾಪನಾ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಇದೇ ವೇಳೆ ಶಾಸಕರನ್ನ ಕೆಲ ಅಧಿಕಾರಿಗಳು ಭೇಟಿಯಾದ್ರು. ಈ ವೇಳೆ ಕೆಲ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕರು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ಹಲವಾರು ದಿನಗಳಿಂದ ಅಧಿಕಾರಿಗಳು ಠಿಕಾಣಿ ಹಾಕಿದ್ದು. ಇಂತವರನ್ನ ಬೇರೆ ಕಡೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಶಾಸಕರು ಸ್ಪಷ್ಟವಾಗಿ ಹೇಳಿದ್ದಾರೆ.

ದಾವಣಗೆರೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us