ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಬಾಲಕಿ ಗರ್ಭಿಣಿ, ಆರೋಪಿ ಪರಾರಿ

17ರ ಹರೆಯದ ಅಪ್ರಾಪ್ತ ಬಾಲಕಿ ಜೊತೆ ಸ್ನೇಹ ಮಾಡಿದ ಆರೋಪಿ, ಆಕೆಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ತಲೆಮರಸಿಕೊಂಡಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಬಾಲಕಿ ಗರ್ಭಿಣಿ, ಆರೋಪಿ ಪರಾರಿ
ಪ್ರಾತಿನಿಧಿಕ ಚಿತ್ರ
Image Credit source: news18.com

Updated on: Jun 08, 2023 | 11:00 AM

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 17 ವರ್ಷದ ಬಾಲಕಿಯ ಮನೆ ಪಕ್ಕದ ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ಆರೋಪಿ, ಆಕೆಯನ್ನು ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿ ಗರ್ಭಿಣಿಯಾಗಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

17ರ ಹರೆಯದ ಅಪ್ರಾಪ್ತ ಬಾಲಕಿ ಜೊತೆ ಸ್ನೇಹ ಮಾಡಿದ ಆರೋಪಿ, ಆಕೆಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ತಲೆಮರಸಿಕೊಂಡಿದ್ದಾನೆ. ಅಪ್ರಾಪ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಗೆ ಹೋದಾಗ ಅಪ್ರಾಪ್ತೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆ ತಂದೆ ಪ್ರಕರಣ ದಾಖಲಿಸಿದ್ದು ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿ ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು 2 ತಿಂಗಳಾದರೂ ಎಫ್​ಐಆರ್​ ದಾಖಲಾಗಿಲ್ಲ, ನೋವಿನಲ್ಲಿ ತಂದೆ ಆತ್ಮಹತ್ಯೆ

ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪಾಪಿ ಪತಿ

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಬಳಿಕ ಗಂಡ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತಿಯ ಕೃತ್ಯದಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಉಷಾ(36)ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ ಧರೆಪ್ಪ ಕೋತ್ ಬಳಿಕ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಪತ್ನಿ ಜೊತೆ ಜಗಳವಾಡಿ ನಂತರ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಧರೆಪ್ಪ ಕೃತ್ಯದಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಌಂಬುಲೆನ್ಸ್ ಡಿಕ್ಕಿ, ಮೂವರು ಸಾವು

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಲಾರಿಗೆ ಡಿಕ್ಕಿಯಾಗಿ ಌಂಬುಲೆನ್ಸ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಌಂಬುಲೆನ್ಸ್​ನಲ್ಲಿದ್ದ ಕನಕಮಣಿ(72), ಆಕಾಶ್(17), ಚಾಲಕ ಮೃತರು. ಮತ್ತಿಬ್ಬರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಜರಾತ್​ನಿಂದ ತಮಿಳುನಾಡಿಗೆ ತೆರಳುತ್ತಿದ್ದ ಌಂಬುಲೆನ್ಸ್, ಅಹಮದಾಬಾದ್​ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:47 am, Thu, 8 June 23