AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ: ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವು

ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ ಸಂಭವಿಸಿದ್ದು, ಕೇಸರಿ ಧ್ವಜ ಕಟ್ಟುವಾಗ ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಪಿಬಿ ರಸ್ತೆಯಲ್ಲಿ ನಡೆದಿದೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು. ಪೃಥ್ವಿರಾಜ್ ಸಾವು ಹಿನ್ನೆಲೆ ನಾಳೆ ನಡೆಯಬೇಕಿದ್ದ ಬೈಕ್​ ರ‍್ಯಾಲಿ ರದ್ದು ಮಾಡಲಾಗಿದೆ. 

ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ: ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 11, 2023 | 8:54 PM

Share

ದಾವಣಗೆರೆ, ಅಕ್ಟೋಬರ್​​​ 11: ಹಿಂದೂ ಮಹಾಗಣಪತಿ (Hindu Mahaganapati) ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ ಸಂಭವಿಸಿದ್ದು, ಕೇಸರಿ ಧ್ವಜ ಕಟ್ಟುವಾಗ ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಪಿಬಿ ರಸ್ತೆಯಲ್ಲಿ ನಡೆದಿದೆ. ಬಸವರಾಜಪೇಟೆ ನಿವಾಸಿ ಪೃಥ್ವಿರಾಜ್(26) ಮೃತ ದುರ್ದೈವಿ. ಸದ್ಯ ಮೃತದೇಹವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆಸ್ಪತ್ರೆಯ ಮುಂಭಾಗ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು. ಪೃಥ್ವಿರಾಜ್ ಸಾವು ಹಿನ್ನೆಲೆ ನಾಳೆ ನಡೆಯಬೇಕಿದ್ದ ಬೈಕ್​ ರ‍್ಯಾಲಿ ರದ್ದು ಮಾಡಲಾಗಿದೆ.

ಹೃದಯಾಘಾತದಿಂದ ಐಎಫ್​ಎಸ್ ಅಧಿಕಾರಿ ಸಾವು

ಜಿಲ್ಲೆಯ ಹೊನ್ನಾಳಿ ತಾಲೂಕಿನ ಹರಗನಹಳ್ಳಿ ನಿವಾಸಿ ಐಎಫ್​ಎಸ್ ಅಧಿಕಾರಿ ಡಾ.ಸಿ.ಮಂಜುನಾಥ(46) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೇಘಾಲಯ ಸರ್ಕಾರದಲ್ಲಿ ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ: ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?

ಸೇವೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಡಾ.ಸಿ.ಮಂಜುನಾಥ, ಹರಗನಹಳ್ಳಿಯ ಪ್ರಗತಿಪರ ರೈತ ಟಿ.ಚನ್ನಬಸಪ್ಪನವರ ಪುತ್ರ. 4 ತಿಂಗಳ ಹೆಣ್ಣು ಮಗು, ಪತ್ನಿ, ತಂದೆ, ತಾಯಿಯನ್ನು ಡಾ.ಸಿ.ಮಂಜುನಾಥ ಅಗಲಿದ್ದಾರೆ. ಗುರುವಾರ ಸ್ವಗ್ರಾಮ ಹರಗನಹಳ್ಳಿಗೆ ಮೃತದೇಹ ಆಗಮಿಸಲಿದೆ.

ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ರಾಮಮೂರ್ತಿನಗರದ ಮುಕುಟಮ್ಮ ದೇವಸ್ಥಾನದ ಬಳಿ ನಡೆದಿದೆ. ಮದನ್(32) ಮೃತ ವ್ಯಕ್ತಿ. ಹಳೇ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಸಂಜೆ 5.30ರ ಸುಮಾರಿಗೆ ಮೂವರು ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯವೆಸಲಾಗಿದೆ. ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ವಾಸವಿದ್ದ ಕೊಲೆಯಾದ ಮದನ್‌, ಹಲವು ದಿನಗಳ ಹಿಂದೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃತ್ವಿಕ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದ.

ಇದನ್ನೂ ಓದಿ: ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಮದನ್ ಬರುವಿಕೆಗಾಗಿ ಕಾದುಕುಳಿತು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಮದನ್‌ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರಿನಲ್ಲಿ ಹಾಡುಹಗಲೇ ಜಳಪಿಸಿದ ಮಚ್ಚು, ಲಾಂಗ್ 

ಮೈಸೂರು: ನಗರದಲ್ಲಿ ಹಾಡುಹಗಲೇ ಮಚ್ಚು, ಲಾಂಗ್​ಗಳು ಜಳಪಿಸಿರುವಂತಹ ಘಟನೆ ಹನುಮಂತು ಹೋಟೆಲ್ ಬಳಿ ನಡೆದಿದೆ. ವ್ಯಕ್ತಿಗೆ ಲಾಂಗ್​ನಿಂದ ಹೊಡೆಯಲು ಇಬ್ಬರು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿ ಆಗಿದ್ದು, ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!