ದಾವಣಗೆರೆ, ಅಕ್ಟೋಬರ್ 11: ಹಿಂದೂ ಮಹಾಗಣಪತಿ (Hindu Mahaganapati) ಶೋಭಾಯಾತ್ರೆ ಸಿದ್ಧತೆ ವೇಳೆ ಅವಘಡ ಸಂಭವಿಸಿದ್ದು, ಕೇಸರಿ ಧ್ವಜ ಕಟ್ಟುವಾಗ ಕ್ರೇನ್ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಪಿಬಿ ರಸ್ತೆಯಲ್ಲಿ ನಡೆದಿದೆ. ಬಸವರಾಜಪೇಟೆ ನಿವಾಸಿ ಪೃಥ್ವಿರಾಜ್(26) ಮೃತ ದುರ್ದೈವಿ. ಸದ್ಯ ಮೃತದೇಹವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆಸ್ಪತ್ರೆಯ ಮುಂಭಾಗ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು. ಪೃಥ್ವಿರಾಜ್ ಸಾವು ಹಿನ್ನೆಲೆ ನಾಳೆ ನಡೆಯಬೇಕಿದ್ದ ಬೈಕ್ ರ‍್ಯಾಲಿ ರದ್ದು ಮಾಡಲಾಗಿದೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಹರಗನಹಳ್ಳಿ ನಿವಾಸಿ ಐಎಫ್ಎಸ್ ಅಧಿಕಾರಿ ಡಾ.ಸಿ.ಮಂಜುನಾಥ(46) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೇಘಾಲಯ ಸರ್ಕಾರದಲ್ಲಿ ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ: ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?
ಸೇವೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಡಾ.ಸಿ.ಮಂಜುನಾಥ, ಹರಗನಹಳ್ಳಿಯ ಪ್ರಗತಿಪರ ರೈತ ಟಿ.ಚನ್ನಬಸಪ್ಪನವರ ಪುತ್ರ. 4 ತಿಂಗಳ ಹೆಣ್ಣು ಮಗು, ಪತ್ನಿ, ತಂದೆ, ತಾಯಿಯನ್ನು ಡಾ.ಸಿ.ಮಂಜುನಾಥ ಅಗಲಿದ್ದಾರೆ. ಗುರುವಾರ ಸ್ವಗ್ರಾಮ ಹರಗನಹಳ್ಳಿಗೆ ಮೃತದೇಹ ಆಗಮಿಸಲಿದೆ.
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ರಾಮಮೂರ್ತಿನಗರದ ಮುಕುಟಮ್ಮ ದೇವಸ್ಥಾನದ ಬಳಿ ನಡೆದಿದೆ. ಮದನ್(32) ಮೃತ ವ್ಯಕ್ತಿ. ಹಳೇ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಸಂಜೆ 5.30ರ ಸುಮಾರಿಗೆ ಮೂವರು ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯವೆಸಲಾಗಿದೆ. ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ವಾಸವಿದ್ದ ಕೊಲೆಯಾದ ಮದನ್, ಹಲವು ದಿನಗಳ ಹಿಂದೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃತ್ವಿಕ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದ.
ಇದನ್ನೂ ಓದಿ: ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಮದನ್ ಬರುವಿಕೆಗಾಗಿ ಕಾದುಕುಳಿತು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಮದನ್‌ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೈಸೂರು: ನಗರದಲ್ಲಿ ಹಾಡುಹಗಲೇ ಮಚ್ಚು, ಲಾಂಗ್ಗಳು ಜಳಪಿಸಿರುವಂತಹ ಘಟನೆ ಹನುಮಂತು ಹೋಟೆಲ್ ಬಳಿ ನಡೆದಿದೆ. ವ್ಯಕ್ತಿಗೆ ಲಾಂಗ್ನಿಂದ ಹೊಡೆಯಲು ಇಬ್ಬರು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿ ಆಗಿದ್ದು, ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.