AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere: ರಾಮನವಮಿ ಆಚರಣೆ ವೇಳೆ ಎರಡು ಕೋಮಿನ ಮಧ್ಯೆ ಘರ್ಷಣೆ: ಇಬ್ಬರಿಗೆ ಚಾಕು ಇರಿತ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್​ನಲ್ಲಿ ರಾಮನವಮಿ ಆಚರಣೆ ವೇಳೆ ಕೋಮಿನ ಯುವಕರ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರಿಗೆ ಚಾಕು ಇರಿದಿರುವಂತಹ ಘಟನೆ ನಡೆದಿದೆ. ಕಳೆದ ವರ್ಷದಂತೆ ಈ ವರ್ಷವು ರಾಮನವಮಿ ಆಚರಣೆ ವೇಳೆ ಕೋಮು ಸಂಘರ್ಷವಾಗಿ ನಡೆದಿದೆ. ಸದ್ಯ ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Davanagere: ರಾಮನವಮಿ ಆಚರಣೆ ವೇಳೆ ಎರಡು ಕೋಮಿನ ಮಧ್ಯೆ ಘರ್ಷಣೆ: ಇಬ್ಬರಿಗೆ ಚಾಕು ಇರಿತ
ಪ್ರಾತಿನಿಧಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 19, 2024 | 7:05 PM

Share

ದಾವಣಗೆರೆ, ಏಪ್ರಿಲ್ 19: ಏ.17 ರಂದು ರಾಮನವಮಿ (Rama Navami) ಆಚರಣೆ ವೇಳೆ ಎರಡು ಕೋಮಿನ ಯುವಕರ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರಿಗೆ ಚಾಕು ಇರಿದಿರುವಂತಹ (stabbed) ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್​ನಲ್ಲಿ ನಡೆದಿದೆ. ಹನುಮಂತ ಮತ್ತು ಗೋಪಾಲ್ ಎಂಬುವರಿಗೆ ಚಾಕು ಇರಿಯಲಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗುಂಪು ಘರ್ಷಣೆಯಲ್ಲಿ ಅನ್ಯಕೋಮಿನ ಓರ್ವ ಯುವಕನಿಗೂ ಗಾಯವಾಗಿದೆ. ಸದ್ಯ ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

2022ರಲ್ಲೂ ರಾಮನವಮಿ ಆಚರಣೆ ವೇಳೆ ಕೋಮು ಸಂಘರ್ಷವಾಗಿತ್ತು ಉಂಟಾಗಿತ್ತು. ಅದೇ ರೀತಿಯಾಗಿ ಈ ಬಾರಿ ಕೂಡ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ನಲ್ಲೂರು ಕ್ಯಾಂಪ್​ನಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಚಾಕು ಇರಿತಕ್ಕೂಳಗಾದ ಗೋಪಿ ಹೇಳಿದ್ದಿಷ್ಟು 

ಟಿವಿ9 ಜೊತೆಗೆ ಘಟನೆಯಲ್ಲಿ ಚಾಕು ಇರಿತಕ್ಕೂಳಗಾದ ಗೋಪಿ ಪ್ರತಿಕ್ರಿಯಿಸಿದ್ದು, ರಾಮನವಮಿ ದಿವಸ ಪಾನಕ, ಕೋಸಂಬರಿ ಹಂಚುತ್ತಿದ್ದೇವೆ. ಆ ದಿನ ರಾತ್ರಿ ಅದೇ ಗ್ರಾಮದ ಅನ್ಯಕೋಮಿನ ಯುವಕರು ನಿಂದಿಸಿದ್ದಾರೆ. ಏಕಾಏಕಿ ಯುವಕರು ನನ್ನ ಮೇಲೆ ಹಲ್ಲೆ ಮಾಡಿದ್ದು, ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಉಪನ್ಯಾಸಕನ ಶವ ಪತ್ತೆ

ಮೈಸೂರು: ನಿರ್ಜನ ಪ್ರದೇಶದಲ್ಲಿ ಉಪನ್ಯಾಸಕನ ಶವ ಪತ್ತೆ ಆಗಿರುವಂತಹ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ಬಳಿ ಪತ್ತೆ ಆಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ (45) ಮೃತ ಉಪನ್ಯಾಸಕ. ಚಾಮರಾಜನಗರ ಜಿಲ್ಲಾ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.

ಇದನ್ನೂ ಓದಿ: ಸೆಕ್ಯುರಿಟಿ ಗಾರ್ಡ್​ನಿಂದ ಬಾತ್​​ ರೂಮ್​ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್: ಕಂಬಕ್ಕೆ ಕಟ್ಟಿ ಥಳಿಸಿದ ಜನರು

ಮೃತ ಉಪನ್ಯಾಸಕ ಮಾದಪ್ಪ ಪತ್ನಿ ಪೂರ್ಣಿಮಾ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ

ನೆಲಮಂಗಲ: ಕುಡಿದು ಮಲಗಿದ್ದ ವ್ಯಕ್ತಿ ತಲೆಗೆ ಕಲ್ಲಿನಿಂದ ಜಜ್ಜಿ ಭೀಕರ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ನಡೆದಿದೆ. ಹಿರಿಯೂರು ಸ್ವಾಮಿ(45) ಮೃತ ವ್ಯಕ್ತಿ. ಕೊಲ್ಕತ್ತಾ ಮೂಲದ ಮಹಮದ್ ಶಮಿಮ್ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ: ದೂರು ದಾಖಲು

ಕುಡಿದ ಮತ್ತಿನಲ್ಲಿ ಮಲಗಿದ್ದ ಸ್ವಾಮಿ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದೆ. ಕೇಸ್ ದಾಖಲಿಸಿ ಆರೋಪಿ ಪತ್ತೆಗಾಗಿ ಮಾದನಾಯಕನಹಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:51 pm, Fri, 19 April 24

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು