ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳೋದು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

ದಾವಣಗೆರೆಯ ವೀರಶೈವ ಮಹಾ ಅಧಿವೇಶನದಲ್ಲಿ‌ ಮಾತನಾಡಿರುವ ಮಾಜಿ‌ ಸಿಎಂ ಬಸವರಾಜ್ ಬೊಮ್ಮಾಯಿ, ಜಾತಿ ಗಣತಿಯನ್ನೆ ರಾಜಕೀಯ ಅಸ್ತ್ರವಾಗಿ ಬಳಸುವ ಪ್ರಯತ್ನ ನಡೆದಿದೆ. ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜಾತಿ ಗಣತಿ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕಿಡಿಕಾರಿದ್ದಾರೆ.

ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳೋದು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ‌ ಸಿಎಂ ಬಸವರಾಜ್ ಬೊಮ್ಮಾಯಿ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 24, 2023 | 3:59 PM

ದಾವಣಗೆರೆ, ಡಿಸೆಂಬರ್​​ 24: ಜಾತಿ ಗಣತಿಯನ್ನೆ ರಾಜಕೀಯ ಅಸ್ತ್ರವಾಗಿ ಬಳಸುವ ಪ್ರಯತ್ನ ನಡೆದಿದೆ. ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ನಗದರಲ್ಲಿ ಆಯೋಜಿಸಿರುವ ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಯಾಕೆ‌ ಸಾಧ್ಯವಿಲ್ಲ ಅಂದರೆ ನಮ್ಮೊಂದಿಗೆ ಎಲ್ಲಾ‌ ತಳ ಸಮುದಾಯ ಸೇರಿವೆ ಎಂದಿದ್ದಾರೆ.

ನಮ್ಮೊಂದಿಗಿನ ಒಳಪಂಗಡಗಳನ್ನು ಭೇರ್ಪಡಿಸುವ ಕೆಲಸ ಆಗಿತ್ತು.  ಸಂಸ್ಕಾರದ ತಿರುಳು ಗಟ್ಟಿಯಾಗಿ ನಮ್ಮಲ್ಲಿ ಉಳಿದಿದೆ. ಜಾತಿ ಗಣತಿ ಬಗ್ಗೆ ಸ್ಪಷ್ಟ ನಿಲುವು ಇರಬೇಕು. ಶಿಕ್ಷಣ, ಆರ್ಥಿಕತೆ, ಸ್ಥಿತಿಗತಿ ಬಗ್ಗೆ ಜನಗಣತಿ ಆಗಿದೆ. ಜಾತಿಗಣತಿ ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಸಮಾಜದಲ್ಲಿ ಗೊಂದಲ ನಿರ್ಮಾಣ ಮಾಡಬಾರದು ಪಾರದರ್ಶಕ, ವೈಜ್ಞಾನಿಕ ಜನಗಣತಿ‌ ಆಗಬೇಕು. ಸಮಾಜಕ್ಕೆ ಅನ್ಯಾಯ ಆಗಬಾರದು ಎಂದರು.

ಜಾತಿ ಗಣತಿ ಹೆಸರಿನಲ್ಲಿ ಪ್ರತ್ಯೇಕ ಮಾಡುವ ಕೆಲಸ

ಇತ್ತೀಚಿನ ದಿನಗಳಲ್ಲಿ ಜಾತಿ ಗಣತಿ ಹೆಸರಿನಲ್ಲಿ ಪ್ರತ್ಯೇಕ ಮಾಡುವ ಕೆಲಸ ಕೂಡ ನಡೆಯುತ್ತಿದೆ. ಅದು ಸಾಧ್ಯವಿಲ್ಲ. ಈಗ ಕರ್ನಾಟಕದಲ್ಲಿ ಆಗಿದ್ದು‌ ಜಾತಿಗಣತಿ ಅಲ್ಲ. ಅದು ಶೈಕ್ಷಣಿಕ ಆರ್ಥಿಕ ಸಮೀಕ್ಷೆ. ಜಾತಿ ಗಣತಿ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಇಲ್ಲ. ಅದು ಕೇಂದ್ರ ಸರ್ಕಾರಕ್ಕೆ ಮಾತ್ರಯಿದೆ. ಜಾತಿ ಗಣತಿ ವೈಜ್ಞಾನಿಕವಾಗಿ ನಡೆಯಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ: ಶಾಮನೂರು ಶಿವಶಂಕರಪ್ಪ

ಮಹಾಸಭಾ ಅಂದರೆ ಇದೊಂದು ದೊಡ್ಡ ಸಂಸಾರ. ಮೊಮ್ಮಕ್ಕಳು, ಸೊಸೆಯಂದಿರು‌ ಬಂಧಿಗಳಿರುವ ಕುಟುಂಬ. ಈ ಅಧಿವೇಶನ ಕಳೆದ ವರ್ಷ ಆಗಬೇಕಿತ್ತು. ಚುನಾವಣೆ ವರ್ಷ ಆದ ಹಿನ್ನಲೆಯಲ್ಲಿ‌ಈ ಬಾರಿ ಯಶಸ್ವಿಯಾಗಿ ಅಧಿವೇಶನ ನಡೆದಿದೆ.  ಅಧಿವೇಶನ ಯಶಸ್ಸಿಗಾಗಿ ಶಿವಶಂಕರಪ್ಪ ಅವರನ್ನು ಅಭಿನಂದಿಸುತ್ತೇನೆ. ಎಳ್ಳುಕಾಳಷ್ಟು ಇತರರಿಗೆ ನೋವು ಮಾಡದ ಸಮಾಜ ನಮ್ಮದು. ನಮ್ಮ ಸಂಸ್ಕಾರ, ಪರಂಪರೆ‌ ಮೂಲ ವೈಚಾರಿಕತೆ.

ಇದನ್ನೂ ಓದಿ; ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ

ದೂರದೃಷ್ಠಿ ಸಮಾಜ ನಮ್ಮದು. ಯಾರು ಏನೇ ಷಡ್ಯಂತ್ರ ಮಾಡಲಿ, ಯಾರು ಆತಂಕ ಪಡುವ ಅಗತ್ಯವಿಲ್ಲ. ನಮ್ಮ‌ ವಿಚಾರದಾರೆ, ಆತ್ಮಸಾಕ್ಷಿ ನಮ್ಮನ್ನೆಲ್ಲ‌ಒಗ್ಗೂಡಿಸಲಿದೆ. ಕರ್ನಾಟಕ, ಆಂಧ್ರ, ಮಹಾರಾಷ್ಟ್ರ ಎಲ್ಲೆಡೆ ಹೆಣ್ಮಕ್ಕಳಿಗೆ ಹಾಸ್ಟೆಲ್ ಮಾಡಿದ್ದು ಮಠಮಾನ್ಯಗಳು. ಯಾರು ಸಹ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ನಮ್ಮನ್ನು ಹೊರತುಪಡಿಸಿ ರಾಜ್ಯ ಆಳೋದು, ಕಾರ್ಯಕ್ರಮ ರೂಪಿಸುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ