ದಾವಣಗೆರೆ: ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಮ್ಜದ್ ಖಾನ್ (44), ಇಸ್ಮಾಯಿಲ್ ಖಾನ್ (42) ನೂರ್ ಅಹ್ಮದ್ (36) ಬಂಧಿತ ಆರೋಪಿಗಳು. ಸೆಪ್ಟೆಂಬರ್ ಎರಡರಂದು ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ರವರ ಕೊಲೆ ನಡೆದಿತ್ತು. ಆದರೆ ಈ ಬಗ್ಗೆ ನಿನ್ನೆ (ಸೆ.10) ಬೆಳಕಿಗೆ ಬಂದಿತ್ತು.
ಆರೋಪಿಗಳು ಬಸವಾ ಪಟ್ಟಣದ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ, ಹೂತು ಹಾಕಿದ್ದರು. ಅನೈತಿಕ ಸಂಬಂಧವೇ ಕೊಲೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಕೊಲೆಯಾದ ಕೈ ಮುಖಂಡ ಜೈನುಲ್ಲಾ ಖಾನ್ ಆರೋಪಿ ಅಮ್ಜದ್ ಖಾನ್ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದರಂತೆ. ಈ ವಿಷಯ ಆರೋಪಿ ಅಮ್ಜದ್ ಖಾನ್ ಗಮನಕ್ಕೆ ಬಂದಿತ್ತು. ಹೀಗಾಗಿ ಸಹೋದರ ಇಸ್ಮಾಯಿಲ್ ಖಾನ್ ಹಾಗೂ ಸ್ನೇಹಿತ ನೂರ್ ಅಹ್ಮದ್ ಜೊತೆ ಸೇರಿ ಜೈನುಲ್ಲಾ ಖಾನ್ನ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೃತ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದರು. ಒಂದು ವಾರದ ಹಿಂದೆ ನಾಪತ್ತೆ ಆಗಿದ್ದರು. ಉದ್ದೇಶಪೂರ್ವಕವಾಗಿ ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಶೀಲನೆ ನಡೆಸಿದ್ದರು. ಸದ್ಯ ಬಸವಾಪಟ್ಟಣದ ಪೊಲೀಸರು ಆರೋಪಿಗಳನ್ನು ಬಂಧಿಸಿ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ
ಯುವತಿ ರೇಪ್-ಕೊಲೆ ಪ್ರಕರಣ: 38 ಸೆಲೆಬ್ರಿಟಿಗಳ ಬಂಧನಕ್ಕೆ ಒತ್ತಾಯ; ಘಟಾನುಘಟಿಗಳ ತಪ್ಪೇನು?
(Davanagere Police arrested a man accused of murdering Congress leader)