ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ದೂರು ದಾಖಲು

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಿಚಾರವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ವಿರುದ್ಧ ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಪೊಲೀಸರಿಗೆ ದೂರು ನೀಡಿದ್ದಾರೆ. ಕ್ಷಮೆಯಾಚಿಸುವಂತೆಯೂ ಆಗ್ರಹಿಸಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ದೂರು ದಾಖಲು
ಕೆಎಸ್ ಶಿವರಾಮು & ಜಯಮೃತ್ಯುಂಜಯ ಸ್ವಾಮೀಜಿ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma

Updated on: Dec 17, 2024 | 11:34 AM

ದಾವಣಗೆರೆ, ಡಿಸೆಂಬರ್ 17: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಅಶೋಕ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಮಾತನಾಡಿದ ಅವರು, ಪಂಚಮಸಾಲಿ ಸಮಾಜದವರು ಹೇಡಿಗಳಲ್ಲ. ಕೆಎಸ್ ಶಿವರಾಮು ತಕ್ಷಣವೇ ಸ್ವಾಮೀಜಿಗಳ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಗೋಪನಾಳ್ ಅಶೋಕ ಆಗ್ರಹಿಸಿದ್ದಾರೆ.

ಏನು ಹೇಳಿದ್ದರು ಕೆಎಸ್​ ಶಿವರಾಮು?

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಎಸ್​ ಶಿವರಾಮು, ಆ ವಿಚಾರವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವಾಮೀಜಿ ಬಿಜೆಪಿ ಏಜೆಂಟ್​ರಂತೆ ವರ್ತಿಸುತ್ತಿದ್ದಾರೆ. ಕಾವಿ ಬಿಚ್ಚಿ ರಾಜಕೀಯಕ್ಕೆ ಬರಲಿ ಎಂದಿದ್ದರು.

ಇದನ್ನೂ ಓದಿ: ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಜಯಮೃತ್ಯುಂಜಯ ಸ್ವಾಮೀಜಿಗೆ ಕೆಎಸ್ ಶಿವರಾಮು ಎಚ್ಚರಿಕೆ

ಮೈಸೂರಿನಲ್ಲಿ ಮಾತನಾಡಿದ್ದ ಶಿವರಾಮು, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ