AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮರ್ಥ್ ಶಾಮನೂರು ಜಸ್ಟ್‌ ಪಾಸ್: ಕಾಂಗ್ರೆಸ್​​ಗೆ ಶಾಕ್ ಕೊಟ್ಟ ದಾವಣಗೆರೆ ದಕ್ಷಿಣ ರಿಸಲ್ಟ್

ಕರ್ನಾಟಕ ಉಪ ಚುನಾವಣೆಯ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡುವೆ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಸಮರ್ಥ್ ಶಾಮನೂರು 5 ಸಾವಿರ ಮತಗಳ ಅಂತರದಲ್ಲಿ ಜಯಶೀಲರಾಗಿದ್ದಾರೆ. ಇದರೊಂದಿಗೆ ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ ಪ್ರವೇಶಿಸಿದೆ. ಆದ್ರೆ, ದಾವಣಗೆರೆ ಫಲಿತಾಂಶ ಕಾಂಗ್ರೆಸ್ ಕೊಂಚ ಆತಂಕ ತಂದಿದೆ.

ಸಮರ್ಥ್ ಶಾಮನೂರು ಜಸ್ಟ್‌ ಪಾಸ್: ಕಾಂಗ್ರೆಸ್​​ಗೆ ಶಾಕ್ ಕೊಟ್ಟ ದಾವಣಗೆರೆ ದಕ್ಷಿಣ ರಿಸಲ್ಟ್
Samarth Shamanur
ರಮೇಶ್ ಬಿ. ಜವಳಗೇರಾ
|

Updated on:May 04, 2026 | 7:17 PM

Share

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ. ಈ ನಡುವೆ ಅಚ್ಚರಿಯ ಬೆಳವಣಿಗೆಯಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಾಖಲೆಯ ಮತಗಳಿಸಿದೆ. ಈ ಮೂಲಕ ಕಾಂಗ್ರೆಸ್ ಭರ್ಜರಿ ಸಂದೇಶವನ್ನು ಮುಸ್ಲಿಂ ಸಮುದಾಯ ನೀಡಿದೆ.

ತಂದೆ ರೀತಿ ಮಗ ಚಿಕ್ಕ ವಯಸ್ಸಿನಲ್ಲೇ ಶಾಸಕ

ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು. ಅದರಂತೆ ಇದೀಗ ಪುತ್ರ ಸಮರ್ಥ ಸಹ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ತಂದೆ ರೀತಿಯಲ್ಲೇ ಚಿಕ್ಕ ವಯಸ್ಸಿನಲ್ಲೇ ಅಂದರೆ 27ನೇ ವಯಸ್ಸಿಗೆ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು

ಕಾಂಗ್ರೆಸ್ ಎಚ್ಚರಿಕೆ ಸಂದೇಶ

ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು 68619 ಮತಗಳೊಂದಿಗೆ ಕೇವಲ 5 ಸಾವಿರ ಮತಗಳ ಅಂತರದಿಂದ ಪ್ರಯಾಸದ ಗೆಲುವು ಸಾಧಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ 63746 ಮತಗಳನ್ನು ಪಡೆದುಕೊಂಡರೆ, ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್‌ ಕೊಡ್ಲಿಪೇಟೆ 18,485 ಮತಗಳನ್ನು ಪಡೆದಿದ್ದಾರೆ. ಈ ಮೂಲಕ 3ನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಾರೆ.  ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರು ಎಸ್‌ಡಿಪಿಐ ಬೆಂಬಲಿಸಿದ್ದು, ಆ ಪಕ್ಷ 18 ಸಾವಿರ ಮತಗಳನ್ನು ಪಡೆದು ಅಚ್ಚರಿ ಮೂಡಿಸಿದೆ. ಮುಸ್ಲಿಂ ಮತಗಳ ಈ ವಿಭಜನೆ ಕಾಂಗ್ರೆಸ್‌ಗೆ ಆತಂಕ ತಂದಿದೆ. ಈ ಮೂಲಕ  ಮುಸ್ಲಿಂ ಸಮುದಾಯ  ಕಾಂಗ್ರೆಸ್ ಎಚ್ಚರಿಗೆ ಸಂದೇಶ ರವಾನಿಸಿದೆ.

ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ಮುಸ್ಲಿಮರು ಎಸ್‌ಡಿಪಿಐ ಬೆಂಬಲಿಸಿರುವುದು ಸ್ಪಷ್ಟವಾಗಿದೆ. ಈ ಅಂಶವೇ ಕಾಂಗ್ರೆಸ್‌ಗೆ ಮತಗಳ ಸಂಖ್ಯೆ ತಗ್ಗಿಸಿ ಪ್ರಭಲ ಪೈಪೋಟಿಗೆ ಕಾರಣವಾಯಿತು. ತಂದೆ ಸಚಿವ, ತಾಯಿ ಸಂಸದೆ ಹಾಗೂ ತಾತ ಮುತ್ಸದ್ದಿ ರಾಜಕಾರಣಿಯಾದರೂ ಸಮರ್ಥ್ ಶಾಮನೂರು ಜಸ್ಟ್‌ ಪಾಸ್‌ ಎಂಬಂತೆ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಭದ್ರಕೋಟೆ ಶೇಕ್ ಶೇಕ್

ದಾವಣಗೆರೆ ದಕ್ಷಿಣ ಕ್ಷೇತ್ರವು ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ನ ಭದ್ರಕೋಟೆ ಮತ್ತು ಶಾಮನೂರು ಕುಟುಂಬದ ಪಾರುಪತ್ಯವಿರುವ ಕ್ಷೇತ್ರ. ಕಳೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಇಲ್ಲಿ ಕಾಂಗ್ರೆಸ್ ಸಾಧಿಸುತ್ತಿದ್ದ ಬೃಹತ್ ಅಂತರಕ್ಕೆ ಹೋಲಿಸಿದರೆ, ಈ ಐದು ಸಾವಿರಕ್ಕಿಂತ ಕಡಿಮೆ ಮತಗಳ ಅಂತರದ ಗೆಲುವು ಆಘಾತಕಾರಿಯಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯ ಗೋಡೆಗಳಲ್ಲಿ ಬಿರುಕು ಮೂಡಿರುವುದರ ಸ್ಪಷ್ಟ ಸಂಕೇತ. ಬಿಜೆಪಿ ಇಲ್ಲಿ ತೀವ್ರ ಪೈಪೋಟಿ ನೀಡಿರುವುದು ಮುಂದಿನ ದಿನಗಳಲ್ಲಿ ಕ್ಷೇತ್ರದ ರಾಜಕೀಯ ಸ್ವರೂಪ ಬದಲಾಗುವ ಮುನ್ಸೂಚನೆಯಾಗಿದೆ.

ಈ ಉಪಚುನಾವಣೆ ಫಲಿತಾಂಶವು ಸಾಂಪ್ರದಾಯಿಕ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಕೇವಲ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿ ಎಂದು ಭಾವಿಸಲಾಗಿದ್ದ ಕಣದಲ್ಲಿ, ಎಸ್‌ಡಿಪಿಐ ಸುಮಾರು ದಾಖಲೆಯ ಮತಗಳನ್ನು ಪಡೆಯುವ ಮೂಲಕ ಪ್ರಬಲ ಪೈಪೋಟಿ ನೀಡಿದೆ. ಈ ಬೆಳವಣಿಗೆ ಇದೀಗ ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Mon, 4 May 26

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More