AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಬೈ ಎಲೆಕ್ಷನ್: ಬಿಜೆಪಿ ಮನೆಯೊಂದು 3 ಬಾಗಿಲು, ಕಾಂಗ್ರೆಸ್​​​​ ಮನೆಯೊಂದು ಎರಡು ಬಾಗಿಲು

ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ದಿನಾಂಕ ಘೋಷಣೆಗೂ ಮೊದಲೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆದ್ರೆ, ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ತಿಕ್ಕಾಟಗಳು ಜೋರಾಗಿವೆ. ಒಂದೆಡೆ ಆಡಳಿತರೂಢ ಕಾಂಗ್ರೆಸ್​​​ ಮನೆಯೊಂದು ಎರಡು ಬಾಗಿಲಾಗಿದ್ದರೆ, ವಿಪಕ್ಷ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ.

ದಾವಣಗೆರೆ ಬೈ ಎಲೆಕ್ಷನ್: ಬಿಜೆಪಿ ಮನೆಯೊಂದು 3 ಬಾಗಿಲು, ಕಾಂಗ್ರೆಸ್​​​​ ಮನೆಯೊಂದು ಎರಡು ಬಾಗಿಲು
Davanagere South by election
ಕಿರಣ್​ ಹನಿಯಡ್ಕ
| Edited By: |

Updated on: Mar 13, 2026 | 9:01 PM

Share

ದಾವಣಗೆರೆ, (ಮಾರ್ಚ್ 13): ಜಿಲ್ಲೆಯಲ್ಲಿ ಭಿನ್ನಾಭಿಪ್ರಾಯ ಸರಿಪಡಿಸಲು ಹೋರಾಡುತ್ತಿರುವ ಬಿಜೆಪಿ (BJP) ಈಗ ಉಪಚುನಾವಣೆಯನ್ನು (Davanagere South By Election)  ಗೆದ್ದು ಕೊಳ್ಳುವ ನೆಪದಲ್ಲಾದರೂ ಭಿನ್ನಮತಕ್ಕೆ ಕೊನೆ ಹಾಡಲು ಸರ್ಕಸ್ ಮುಂದುವರಿಸಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯ ಜೊತೆಗೆ ಎರಡೂ ಬಣಗಳನ್ನು ಕೂರಿಸಿ ಚರ್ಚೆ ನಡೆಸಲಾಗಿದೆ. ಇನ್ನು ಕಾಂಗ್ರೆಸ್​​​ನಲ್ಲೂ (Congress) ಸಹ ಅಭ್ಯರ್ಥಿ ಆಯ್ಕೆಯಲ್ಲಿ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರೆ ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಸಮಿತಿ ಸಹ ಎರಡು ಕಡೆಯವರನ್ನು ಕೂರಿಸಿ ಸಭೆ ಮಾಡಿದೆ.

ಐವರು ಆಕಾಂಕ್ಷಿಗಳ ಬಗ್ಗೆ ಚರ್ಚಿಸಿದ ಬಿಜೆಪಿ

ಕಳೆದೆರಡು ವರ್ಷಗಳಿಂದಲೂ ಭಿನ್ನಮತದಿಂದ ಬಳಲುತ್ತಿರುವ ದಾವಣಗೆರೆ ಜಿಲ್ಲಾ ಬಿಜೆಪಿ ಉಪಚುನಾವಣೆಯಿಂದಲಾದರೂ ಒಗ್ಗೂಡುವ ವಿಶ್ವಾಸವಿಟ್ಟುಕೊಂಡು ಈಗ ಪ್ರಯತ್ನ ಶುರುವಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಇಂದು (ಮಾರ್ಚ್ 13) ಚರ್ಚೆ ನಡೆಸಿದೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಐವರು ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಚರ್ಚೆ ನಡೆಸಲಾಗಿದೆ. ಯಶವಂತ್ ರಾವ್ ಜಾಧವ್, ಬಿ.ಜಿ. ಅಜಯ್ ಕುಮಾರ್, ಶ್ರೀನಿವಾಸ್ ದಾಸ್ ಕರಿಯಪ್ಪ, ದೇವಮುನಿ ಮತ್ತು ರಾಜನಹಳ್ಳಿ ಶಿವಕುಮಾರ್ ಆಕಾಂಕ್ಷಿಗಳಾಗಿದ್ದು, ಎರಡು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸುಗೊಳ್ಳಲಿದೆ.

ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಬಿಜೆಪಿಯ ಎರಡೂ ಬಣಗಳ ಜತೆ ಚರ್ಚೆ

ಕೋರ್ ಕಮಿಟಿ ಸಭೆಯ ಬಳಿಕವೂ ಸಹ ದಾವಣಗೆರೆಯ ಎರಡೂ ಬಣಗಳನ್ನು ಬೆಂಗಳೂರಿಗೆ ಕರೆಸಿಕೊಂಡು ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ,‌ ಶಾಸಕ ಬಿ.ಪಿ. ಹರೀಶ್ ಮತ್ತು ದಾವಣಗೆರೆ ಜಿಲ್ಲಾಧ್ಯಕ್ಷ ರಾಜಶೇಖರ್ ಸೇರಿದಂತೆ ಎರಡೂ ಬಣಗಳ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲಾ ವ್ಯತ್ಯಾಸಗಳನ್ನೂ ಪಕ್ಕಕ್ಕಿಟ್ಟು ಉಪಚುನಾವಣೆಯನ್ನು ಎದುರಿಸಬೇಕೆಂದು ಸೂಚನೆ ನೀಡಲಾಗಿದೆ. ನಾಯಕರ ಸೂಚನೆಗೆ ಒಪ್ಪಿಕೊಂಡಂತಿರುವ ಎರಡೂ ಬಣ ಪಕ್ಷದ ಕೆಲಸ ಮಾಡುವುದಾಗಿ ಒಪ್ಪಿಕೊಂಡಿವೆ.

ಈ ಮಧ್ಯೆ ಕೋರ್ ಕಮಿಟಿ ಸಭೆಗೂ ಮುನ್ನ ಜಿ.ಎಂ‌. ಸಿದ್ದೇಶ್ವರ ಬಣವನ್ನು ಸಮಾಧಾನಿಸುವ ಕೆಲಸವನ್ನೂ ಬಿಜೆಪಿ ಮಾಡಿದೆ. ಹಾಲಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ರೇಣುಕಾಚಾರ್ಯ ಬಣದಲ್ಲಿ ಗುರುತಿಸಿಕೊಂಡಿದ್ದು, ಸಿದ್ದೇಶ್ವರ ಬಣದ ರಾಜನಹಳ್ಳಿ ಶಿವಕುಮಾರ್, ಬಾತಿ ವೀರೇಶ್ ಮತ್ತು ಶಿವಪ್ರಕಾಶ್ ಅವರಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಗಳನ್ನು ನೀಡಲಾಗಿದೆ.

ಕಾಂಗ್ರೆಸ್ ನಲ್ಲೂ ಅಭ್ಯರ್ಥಿ ಆಯ್ಕೆ ಗೊಂದಲ

ಇನ್ನು ಕಾಂಗ್ರೆಸ್ ನಲ್ಲಿ ಕೂಡಾ ಅಭ್ಯರ್ಥಿ ಆಯ್ಕೆಯ ಸರ್ಕಸ್ ಮುಂದುವರಿದಿದೆ. ಒಂದೆಡೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮಿರ್ ಅಹಮ್ಮದ್ ಖಾನ್ ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ತಮ್ಮ ಪುತ್ರಿನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹೀಗಾಗಿ ಕಾಂಗ್ರೆಸ್​​​ನಲ್ಲೂ ಸಹ ಟಿಕೆಟ್​​ಗಾಗಿ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ. ಈ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ನೇತೃತ್ವದಲ್ಲಿ ನಿನ್ನೆ (ಮಾರ್​ 12) ವಿಧಾನಸೌಧದಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಸಭೆ ನಡೆದಿದೆ. ಮತ್ತೊಂದೆಡೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ಪರವಾಗಿ ದಾವಣಗೆರೆಯಿಂದ ಒಂದು ತಂಡ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ಟಿಕೆಟ್ ನೀಡುವಂತೆ ಒತ್ತಾಯಿಸಿದೆ.

ಒಟ್ಟಿನಲ್ಲಿ ದಾವಣಗೆರೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಗೊಂದಲ ಉದ್ಭವಿಸಿದ್ದು, ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತೋ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!