AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು

ಸಾಕಷ್ಟು ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ ಯಶಸ್ವಿಯಾಗಿದೆ. ಉಪ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಯ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿನ ಬಾವುಟ ಹಾರಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿದ್ದ ಹಿನ್ನೆಲೆ ಉಪ ಚುನಾವಣೆ ನಡೆದಿತ್ತು.

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು
ಸಮರ್ಥ್ ಶಾಮನೂರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 04, 2026 | 4:53 PM

Share

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ.

ಯಾರಿಗೆ ಎಷ್ಟು ಮತ?

ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ  5,708 ಮತಗಳ ಅಂತರಿಂದ ಜಯ ಸಾಧಿಸಿದ್ದಾರೆ.  ಸಮರ್ಥ್ ಶಾಮನೂರುಗೆ 69,578 ಮತಗಳು ಬಿದ್ದಿದ್ದರೆ,  ಶ್ರೀನಿವಾಸ ಟಿ.ದಾಸ ಕರಿಯಪ್ಪ 63,870 ಮತಗಳನ್ನು ಪಡೆದಿದ್ದಾರೆ. ಇನ್ನು ಎಸ್​ಡಿಪಿಐನ ಅಫ್ಸರ್ ಕೊಡ್ಲಿಪೇಟೆಗೆ 18975 ಮತಗಳು ಮತ್ತು ನೋಟಾಗೆ 511 ಮತಗಳು ಚಲಾವಣೆಯಾಗಿವೆ.

ಇದನ್ನೂ ಓದಿ: ಬಾಗಲಕೋಟೆ ಬೈ ಎಲೆಕ್ಷನ್​​; ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ

ಕಣದಲ್ಲಿದ್ದ 15 ಮುಸ್ಲಿಂ ಅಭ್ಯರ್ಥಿಗಳು

ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್​​ ಟಿಕೆಟ್​​ ಸಿಗದ ಕಾರಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಕೆಲ ನಾಯಕರು ಬಂಡಾಯವೆದ್ದಿದ್ದರು. ಹೀಗಾಗಿ ಎಸ್​​ಡಿಪಿಐನ ಅಭ್ಯರ್ಥಿ ಸೇರಿ ಒಟ್ಟು 15 ಜನ ಮುಸ್ಲಿಂಮರು ಉಪಚುನಾವಣೆಗೆ ಸ್ಫರ್ಧೆ ಮಾಡಿದ್ದರು. ಈ ಎಲ್ಲರಿಗೆ ಸೇರಿ ಒಟ್ಟು 22,768 ಮತಗಳು ಚಲಾವಣೆಗೊಂಡಿವೆ. ಇವರ ಸ್ಪರ್ಧೆಯಿಂದ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್​​ ಶಾಮನೂರುಗೆ ಸೋಲಾಗದಿದ್ದರೂ ಗೆಲುವಿನ ಅಂತರ ಕಡಿಮೆಗೊಳಿಸುವ ಮೂಲಕ ಪ್ರಯಾಸದ ಗೆಲುವು ತರುವಲ್ಲಿ ಪಾತ್ರವಹಿಸಿದೆ.

ಕಾರ್ಯಕರ್ತರ ವಿಜಯೋತ್ಸವ

ಸಮರ್ಥ್ ಶಾಮನೂರು ಗೆಲುವಿನ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಕೆಲವರು ಮುಸ್ಲಿಂ ಮತಗಳು ವಿಭಜನೆ ಆಗುವಂತೆ ಮಾಡಿದ್ದು, ಕಾಂಗ್ರೆಸ್​​ನ 22 ಸಾವಿರ ಮತಗಳು ಬೇರೆಯವರ ಪಾಲಾಗಿವೆ. ಹೀಗಾಗಿಯೇ ಇದಕ್ಕೆ ಕಾರಣರಾದ ಮುಖಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮುಸ್ಲಿಂ‌‌ ಮುಖಂಡ ಅಮಾನತ್ತನ್ನು ಕಾರ್ಯಕರ್ತರು ಸಮರ್ಥಿಸಿಕೊಂಡಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Mon, 4 May 26

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ