ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಜಗಳ, ಪುತ್ರನಿಗೆ ವಿಷ ಕುಡಿಸಿದ ತಂದೆ; ಚಿಕಿತ್ಸೆ ಫಲಿಸದೇ ಪುತ್ರ ಸಾವು

|

Updated on: Apr 10, 2023 | 12:56 PM

ಪತ್ನಿಯ ಶೀಲ ಶಂಕಿಸಿ ಜಗಳ ಮಾಡಿ, ಬಳಿಕ ಪುತ್ರನಿಗೆ ವಿಷ ಕುಡಿಸಿದ್ದು, ಚಿಕಿತ್ಸೆ ಫಲಿಸದೇ ಪುತ್ರ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಂಗನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮುಬಾರಕ್ (12) ಸಾವನ್ನಪ್ಪಿದ ಪುತ್ರ.

ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಜಗಳ, ಪುತ್ರನಿಗೆ ವಿಷ ಕುಡಿಸಿದ ತಂದೆ; ಚಿಕಿತ್ಸೆ ಫಲಿಸದೇ ಪುತ್ರ ಸಾವು
ತಂದೆ ಸಲೀಂ
Follow us on

ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಜಗಳ ಮಾಡಿ, ಬಳಿಕ ಪುತ್ರನಿಗೆ ವಿಷ ಕುಡಿಸಿದ್ದು, ಚಿಕಿತ್ಸೆ ಫಲಿಸದೇ ಪುತ್ರ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಂಗನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮುಬಾರಕ್ (12) ಸಾವನ್ನಪ್ಪಿದ ಪುತ್ರ. ನಿನ್ನೆ(ಏ.9) ಪತ್ನಿಯ ಶೀಲ ಶಂಕಿಸಿ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಇದನ್ನ ನೋಡಿದ ಮಗ ತಾಯಿಯ ಮೇಲೆ ಹಲ್ಲೆಯನ್ನ ತಡೆಯಲು ಮುಂದಾಗಿದ್ದು, ಈ ವೇಳೆ ಪುತ್ರನಿಗೆ ಒತ್ತಾಯವಾಗಿ ವಿಷ ಕುಡಿಸಿದ್ದಾನೆ. ಕೂಡಲೇ ಆ ಬಾಲಕನನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದರು. ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.

ಇನ್ನು ಇಬ್ಬರನ್ನ ವಿವಾಹವಾಗಿದ್ದ ಸಲೀಂ, ಸುಧಾ ಎಂಬ ಅನ್ಯ ಧರ್ಮದ ಮಹಿಳೆಯನ್ನೂ ಮದುವೆಯಾಗಿದ್ದ. ಇನ್ನು ಇತನಿಗೆ ಮೂರು ಗಂಡು, ಒಂದು ಹೆಣ್ಣು ಸೇರಿ ನಾಲ್ವರು ಮಕ್ಕಳು ಇದ್ದರು. ನಿರಂತರವಾಗಿ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ. ಇದೇ ಕಾರಣಕ್ಕೆ ಪತ್ನಿ ತನ್ನೂರು ಸುಲ್ತಾನಿಪುರ ಬಿಟ್ಟು ಸಂಬಂಧಿಕರ ಮನೆ ಗಂಗನಕಟ್ಟೆಗೆ ಬಂದಿದ್ದಳು. ಆದರೆ ಇಲ್ಲಿಗೂ ಬಂದು ಇದೀಗ ಹಲ್ಲೆ ಮಾಡಿದ್ದ ಪಾಪಿ ಸಲೀಂ, ತನ್ನ ಮಗನ ಸಾವಿಗೆ ಕಾರಣವಾಗಿದ್ದಾನೆ. ಈ ಕುರಿತು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಲಾಗಿದೆ.

ಇದನ್ನೂ ಓದಿ:ದೊಡ್ಡಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ಮಗಳದ್ದು ಕೊಲೆ ಎಂದ ಕುಟುಂಬಸ್ಥರು

ಗಂಡನನ್ನು ಕಳೆದುಕೊಂಡು ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆಯ ಹತ್ಯೆ

ಬೆಂಗಳೂರು: ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದ ಮಹಿಳೆಯೋರ್ವಳನ್ನು  ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ .ಘಟನೆ ಬೆಂಗಳೂರಿನ ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿ ನಡೆದಿದೆ. ಟಿ.ಸಿ.ಪಾಳ್ಯದಲ್ಲಿ ನೆಲೆಸಿದ್ದ ಬಳ್ಳಾರಿ ಮೂಲದ ಅಂಬಿಕಾ (40) ಕೊಲೆಯಾದ ಮಹಿಳೆ. ಮೃತಳ ಮನೆಯಿಂದ ಬರುತ್ತಿದ್ದ ದುರ್ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಮನೆ ಬಾಗಿಲು ಮುರಿದು ಒಳ ಪ್ರವೇಶಿಸಿ ಪರಿಶೀಲಿಸಿದಾಗ ಮಹಿಳೆಯ ಕೊಳತೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ಕು ದಿನಗಳ ಹಿಂದೆಯೇ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಅಂಬಿಕಾಳ ಮೊಬೈಲ್‌ನಲ್ಲಿ ನಂಬರ್‌ ಪಡೆದು ಆಕೆಯ ಕುಟುಂಬದವರಿಗೆ ಘಟನೆ ಬಗ್ಗೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಅಂಬಿಕಾ ಬಳ್ಳಾರಿ ಜಿಲ್ಲೆ ಶಿರಗುಪ್ಪ ತಾಲೂಕಿನ ಎಚ್‌.ಹೊಸಹಳ್ಳಿ ಗ್ರಾಮದವಳಾಗಿದ್ದು, ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಟಿ.ಸಿ.ಪಾಳ್ಯದ ಗಾರ್ಡನ್‌ ಸಿಟಿ ಕಾಲೇಜು ಸಮೀಪ ಅಂಬಿಕಾ ನೆಲೆಸಿದ್ದಳು. ಹಲವು ತಿಂಗಳ ಹಿಂದೆಯೇ ಅನಾರೋಗ್ಯ ಹಿನ್ನೆಲೆಯಲ್ಲಿ ಆಕೆಯ ಪತಿ ಸಹ ಮೃತಪಟ್ಟಿದ್ದ. ಇಬ್ಬರು ಮಕ್ಕಳ ಪೈಕಿ ಹಿರಿಯ ಮಗ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಓದುತ್ತಿದ್ದಾನೆ. ಈ ಕೃತ್ಯಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಅನೈತಿಕ ಸಂಬಂಧದ ಶಂಕೆ, ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

ಏ.3ರಂದು ತನ್ನ ನೆರೆಮನೆಯ ಮಹಿಳೆಯನ್ನು ಭೇಟಿಯಾಗಿ ಅಂಬಿಕಾ ಮಾತನಾಡಿದ್ದಳು. ನಂತರ ಆಕೆ ಹೊರಗೆ ಎಲ್ಲೂ ಕಾಣಿಸಿಕೊಂಡಿಲ್ಲ. ಹೀಗಾಗಿ ಏ.4 ಅಥವಾ ಏ.5ರಂದು ಆಕೆಯ ಮನೆಗೆ ಬಂದಿರುವ ಪರಿಚಿತರೇ ಹತ್ಯೆ ಮಾಡಿದ್ದಾರೆ. ಮೃತಳ ದೇಹದಲ್ಲಿ ನಾಲ್ಕೈದು ಬಾರಿ ಚೂರಿ ಇರಿತದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ