ದಾವಣಗೆರೆ: ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ‌ ಮಾಡ್ತಿದ್ದ ಆರೋಪಿ ಬಂಧನ; 74 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ಲ್ಯಾಣ ಮಂಟಪಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರ(Davanagere) ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಕಳೆದ ಫೆಬ್ರವರಿ 11 ರಂದು ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಇರುವ ಬಾಪೂಜಿ ಸಮುದಾಯ ಭವನ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿತ್ತು.

ದಾವಣಗೆರೆ: ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ‌ ಮಾಡ್ತಿದ್ದ ಆರೋಪಿ ಬಂಧನ; 74 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ
ಪ್ರಾತಿನಿಧಿಕ ಚಿತ್ರ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 01, 2024 | 10:30 PM

ದಾವಣಗೆರೆ, ಮಾ.01: ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರ(Davanagere) ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಇತನಿಂದ 74 ಸಾವಿರ ರೂಪಾಯಿ ಮೌಲ್ಯದ 13.25 ಗ್ರಾಂ ತೂಕದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಫೆಬ್ರವರಿ 11 ರಂದು ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಇರುವ ಬಾಪೂಜಿ ಸಮುದಾಯ ಭವನ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿತ್ತು.

ದಾವಣಗೆರೆ ನಗರದ ಸರಸ್ವತಿ ಬಡಾವಣೆಯ ಚಿದಾನಂದಗೌಡ ಎಂಬುವರ ಪತ್ನಿಗೆ ಸೇರಿದ ಚಿನ್ನ ಇದಾಗಿದ್ದು, ನಕಲಿ ಕೀ ಬಳಸಿ ಕಲ್ಯಾಣ ಮಂಟಪದ ರೂಮ್ ಪ್ರವೇಶ ಮಾಡಿದ್ದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಇದೇ ರೀತಿ ಕಳೆದ ಎರಡು ಎರಡು ವರ್ಷಗಳಲ್ಲಿ ಮೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಿದ ಪೊಲೀಸರು, ಚಿನ್ನದ ಆಭರಣವನ್ನು ವಾರಸುದಾರರಿಗೆ ‌ನೀಡಿದ್ದಾರೆ.

ಇದನ್ನೂ ಓದಿ:Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ

ಬೆಳಗಾವಿಯಲ್ಲಿ ಕಲ್ಯಾಣಮಂಟಪದಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಖದೀಮ

ಬೆಳಗಾವಿ: ನಗರದ ವಾದಿರಾಜ್ ಕಲ್ಯಾಣ ಮಂಟಪದಲ್ಲಿ ಜ.6 ರಂದು ದಾವಣಗೆರೆಯಿಂದ ಪಂಚಾಕ್ಷರಿ-ಲತಾ ದಂಪತಿ ಮದುವೆಗೆ ಬಂದಿದ್ದರು. ತಾಳಿ ಕಟ್ಟಿದ ಬಳಿಕ ವೇದಿಕೆ ಮೇಲೆ ಹೋಗಿ ನವ ಜೋಡಿಗೆ ಶುಭ ಹಾರೈಸಲು ಪಂಚಾಕ್ಷರಿ ಲತಾ ದಂಪತಿ ಹೋಗುವಾಗ ತಾವು ಕುಳಿತಿದ್ದ ಕುರ್ಚಿಯ ಮೇಲೆಯೇ ತಮ್ಮ ವ್ಯಾನಿಟಿ ಬ್ಯಾಗ್ ಇಟ್ಟು ವೇದಿಕೆಗೆ ಹೋಗಿದ್ದಾರೆ. ಇದನ್ನ ನೋಡಿದ ಖದೀಮ, ಆ ವ್ಯಾನಿಟಿ ಬ್ಯಾಗ್ ಪಕ್ಕದ ಕುರ್ಚಿಯಲ್ಲಿ ಬಂದು ಕುಳಿತು ಯಾರಿಗೂ ಗೊತ್ತಾಗದಂತೆ ಬ್ಯಾಗ್ ಎಗರಿಸಿ ಅಲ್ಲಿಂದ ಎಸ್ಕೇಪ್ ಆಗಿದ್ದ. ಇತ್ತ ನೂತನ ವಧು-ವರರಿಗೆ ಶುಭ ಹಾರೈಸಿ ಕೆಳಗೆ ಬಂದ ಲತಾ ದಂಪತಿ ವ್ಯಾನಿಟಿ ಬ್ಯಾಗ್​ಗಾಗಿ ಹುಡುಕಿ, ಬಳಿಕ ಸಿಸಿಟಿವಿ ಪರಿಶೀಲನೆ ಮಾಡಲಾಗಿದೆ. ಆಗ ಬ್ಯಾಗು ಕಳ್ಳತನ ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ. ತಕ್ಷಣ ಸ್ಥಳೀಯ ಮಾಳಮಾರುತಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಲರ್ಟ್ ಆದ ಪೊಲೀಸರು, ಕೇಸ್ ದಾಖಲಿಸಿಕೊಂಡು ಕೇವಲ ಆರೇ ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ