ರಾಮಮಂದಿರಕ್ಕೂ ಮೊದಲು ವಾಲ್ಮೀಕಿ ಮಂದಿರ ಕಟ್ಟಬೇಕಿತ್ತು: ಸಚಿವ ಕೆಎನ್​ ರಾಜಣ್ಣ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ನಡೆಯುತ್ತಿದೆ. ಜಾತ್ರೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಹಕಾರ ಸಚಿವ ಕೆ.ಎನ್​.ರಾಜಣ್ಣ, ರಾಮಮಂದಿರಕ್ಕೂ ಮೊದಲು ವಾಲ್ಮೀಕಿ ಮಂದಿರ ಕಟ್ಟಬೇಕಿತ್ತು. ಶ್ರೀರಾಮನ ಬಗ್ಗೆ ಜಗತ್ತಿಗೆ ತಿಳಿಸಿದ್ದೇ ವಾಲ್ಮೀಕಿ ಎಂದು ಹೇಳಿದ್ದಾರೆ. ರಾಜ್ಯದಲ್ಲಿ 100 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದಿದ್ದಾರೆ.

ರಾಮಮಂದಿರಕ್ಕೂ ಮೊದಲು ವಾಲ್ಮೀಕಿ ಮಂದಿರ ಕಟ್ಟಬೇಕಿತ್ತು: ಸಚಿವ ಕೆಎನ್​ ರಾಜಣ್ಣ
ಸಹಕಾರ ಸಚಿವ ಕೆ.ಎನ್​.ರಾಜಣ್ಣ
Edited By:

Updated on: Feb 09, 2024 | 5:41 PM

ದಾವಣಗೆರೆ, ಫೆಬ್ರವರಿ 9: ಶ್ರೀರಾಮನ ಬಗ್ಗೆ ಜಗತ್ತಿಗೆ ತಿಳಿಸಿದ್ದೇ ವಾಲ್ಮೀಕಿ. ಹೀಗಾಗಿ ರಾಮಮಂದಿರಕ್ಕೂ ಮೊದಲು ವಾಲ್ಮೀಕಿ ಮಂದಿರ ಕಟ್ಟಬೇಕಿತ್ತು ಎಂದು ಸಹಕಾರ ಸಚಿವ ಕೆ.ಎನ್​.ರಾಜಣ್ಣ (KN Rajanna) ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಾತನಾಡಿ ಅವರು, ವಾಲ್ಮೀಕಿ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಿದ್ದಾರೆ. ರಾಜ್ಯದಲ್ಲಿ 100 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ತಿಳಿಸಿದರು. ಸಚಿವ ಕೆ.ಹೆಚ್​.ಮುನಿಯಪ್ಪ ಮಾತನಾಡಿ, ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಾವು ಕೂಡ ರಾಮ ಭಕ್ತರೇ. ಆದರೆ ರಹೀಮನನ್ನೂ ಅಷ್ಟೇ ಪ್ರೀತಿಯಿಂದ ನೋಡುತ್ತೇವೆ. ರಾಮನ ಹೆಸರಲ್ಲಿ ರಾಜಕೀಯ ಮಾಡುವುದನ್ನ ಬಿಡಬೇಕು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದಲ್ಲಿ ವಾಲ್ಮೀಕಿ ವಿವಿ ಆಗಲೇಬೇಕು: ಸಚಿವ ಡಾ.ಜಿ.ಪರಮೇಶ್ವರ್

ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ರಾಜ್ಯದಲ್ಲಿ ವಾಲ್ಮೀಕಿ ವಿವಿ ಆಗಲೇಬೇಕು. ವಾಲ್ಮೀಕಿ ವಿವಿ ಸ್ಥಾಪನೆಗೆ ಈ ಬಾರಿ ಬಜೆಟ್​ನಲ್ಲಿ ಘೋಷಿಸಬೇಕು. ಸಿಎಂ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾರೂ ಇದನ್ನು ಮಾಡಲ್ಲ. ರಾಮನಿಗೆ ಸಂಬಂಧವೇ ಇಲ್ಲದವರು ಏನೇನೋ ಮಾಡುತ್ತಿದ್ದಾರೆ. ನಮಗೆ ಸಂಬಂಧ ಇದೆ, ಹೀಗಾಗಿ ವಾಲ್ಮೀಕಿ ವಿವಿ ಸ್ಥಾಪನೆ ಆಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನು ಯಾವ ಕಾರಣಕ್ಕೂ ಅವಿದ್ಯಾವಂತರಾಗಿ ಉಳಿಯಲು ಬಿಡಬಾರದು, ಓದು ಸ್ವಾಭಿಮಾನ ಬೆಳೆಸುತ್ತದೆ: ಸಿದ್ದರಾಮಯ್ಯ, ಸಿಎಂ

ಸಮಾನತೆ ಪ್ರತಿಪಾದನೆ ಮಾಡಿದರೂ ಜಾತಿ ವ್ಯವಸ್ಥೆ ಜೀವಂತ ಇದೆ. ಆಂಧ್ರ, ಪಂಜಾಬ್​ನಲ್ಲಿ ವಾಲ್ಮೀಕಿ ಸಮಾಜ ಹೆಚ್ಚಿನ ಸಂಖ್ಯೆಯಲ್ಲಿದೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಆಗಿನ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದಿಸಲಿಲ್ಲ ಎಂದಿದ್ದಾರೆ.

SC, ST ಬ್ಯಾಕ್​ಲಾಗ್ ಹುದ್ದೆ ಭರ್ತಿ ಮಾಡಬೇಕು: ರಾಜ್ಯ ಸರ್ಕಾರಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಆಗ್ರಹ

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಮಾತನಾಡಿ, ರಾಜ್ಯದ ಯಾವುದಾದರೂ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು. ಅದಕ್ಕಿಂತ ಮುಖ್ಯವಾಗಿ SC, ST ಬ್ಯಾಕ್​ಲಾಗ್ ಹುದ್ದೆ ಭರ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ವಾಲ್ಮೀಕಿ ಸ್ವಾಮೀಜಿ ನಿರಂತರ ಹೋರಾಟದಿಂದ ಮೀಸಲಾತಿ ಹೆಚ್ಚಿಸಿದರು. ಬೆಂಗಳೂರಿನಲ್ಲಿ ಹೋರಾಟದಿಂದ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದರು ಎಂದರು.

ಇದನ್ನೂ ಓದಿ: ಕೇಂದ್ರದಿಂದ ತೆರಿಗೆ ಅನ್ಯಾಯ: ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡುತ್ತೇನೆ: ಸಿಎಂ ಸವಾಲ್

ದೇಶದಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗದವರು ಇದ್ದಾರೆ. ಕರ್ನಾಟಕದಲ್ಲಿ SC, ST ಮೀಸಲಾತಿ ಪ್ರಮಾಣ 24%ಗೆ ಹೆಚ್ಚಿಸಲಾಗಿದೆ. ಇದೇ ಮಾದರಿಯಲ್ಲಿ ಬೇರೆ ರಾಜ್ಯಗಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ. ಕೇಂದ್ರ ಸರ್ಕಾರವೂ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಮುಂದಿನ ವರ್ಷ ಪರಿವಾರ, ತಳವಾರರನ್ನು ಎಸ್​ಟಿಗೆ ಸೇರಿಸುವಂತೆ ಆಗ್ರಹಿಸಿದ್ದಾರೆ.

ಬುಡಕಟ್ಟು ವಿವಿ ಸ್ಥಾಪನೆ ಆಗಬೇಕು ಎಂದ ಸತೀಶ್​ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಸಬ್ಸಿಡಿ ದರದಲ್ಲಿ ಪರಿಶಿಷ್ಟ ವರ್ಗದವರಿಗೆ ಭೂಮಿ ಕೊಡಬೇಕು. ಬುಡಕಟ್ಟು ವಿವಿ ಸ್ಥಾಪನೆ ಆಗಬೇಕು. ಸಹಕಾರ ಸಚಿವ ಕೆ.ಎನ್.ರಾಜಣ್ಣ ವಾಲ್ಮೀಕಿ ಸಮುದಾಯದ ಹುಲಿ. ವಾಲ್ಮೀಕಿ ಸಮುದಾಯದ ಬಹುತೇಕ ಎಲ್ಲಾ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:40 pm, Fri, 9 February 24

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us