ಹೃದಯಾಘಾತದಿಂದ ದಾವಣಗೆರೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಸಾವು

| Updated By: ಆಯೇಷಾ ಬಾನು

Updated on: Aug 30, 2022 | 4:25 PM

ಭಾರತೀಯ ಸೇನೆಯಲ್ಲಿ ಮೇಜರ್ ಆಗಿದ್ದ ಡಾ. ಹರ್ಷ, ಸೇನೆಯಲ್ಲಿ ಸೇವೆ ಮುಗಿಸಿ ಗ್ರಾಮೀಣಾಭಿವೃದ್ಧಿ ಇಲಾಖೆ ಸೇವೆಗೆ ಸೇರಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.

ಹೃದಯಾಘಾತದಿಂದ ದಾವಣಗೆರೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಸಾವು
ಡಾ. ಹರ್ಷಾ
Follow us on

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಭಾರತೀಯ ಸೇನೆಯಲ್ಲಿ ಮೇಜರ್ ಆಗಿದ್ದ ಡಾ. ಹರ್ಷ, ಸೇನೆಯಲ್ಲಿ ಸೇವೆ ಮುಗಿಸಿ ಗ್ರಾಮೀಣಾಭಿವೃದ್ಧಿ ಇಲಾಖೆ ಸೇವೆಗೆ ಸೇರಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ನಾಳೆ ಮಧ್ಯಾಹ್ನ ಸ್ವ ಗ್ರಾಮ ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಬನ್ನಿಕೊಪ್ಪ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬೈಕ್ ಸವಾರ 35 ವರ್ಷದ ವಿನಾಯಕ್ ಮೃತ ದುರ್ದೈವಿ. ಕೊಪ್ಪಳದಿಂದ ಗದಗಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 4:20 pm, Tue, 30 August 22