AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿದ್ಯುತ್​ ಅವಘಡಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ದಾಖಲಾಗುತ್ತಿದ್ದು, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಿದೆ.

ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 01, 2023 | 10:30 PM

Share

ದಾವಣಗೆರೆ, ಡಿ.01: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere)  ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿದ್ಯುತ್​ ಅವಘಡಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ದಾಖಲಾಗುತ್ತಿದ್ದು, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಿದೆ.

ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

ಮಂಡ್ಯ: ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಅಡಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಡಗನಹಳ್ಳಿ ಗ್ರಾಮದ ಮಘಣ್ಣ(40) ಚಿರತೆ ದಾಳಿಗೊಳಗಾದವರು. ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಸ್ತೂರು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿವೆ ಜೀವಕ್ಕೆ ಕುತ್ತು ತರುವ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳು: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಲೆ ಮಹದೇಶ್ವರ ಬೆಟ್ಟದ ಲಾಡು ತಯಾರಿಸುವ ಮನೆಯಲ್ಲಿ ಬೆಂಕಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಲಾಡು ತಯಾರಿಸುವ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್​​ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಹದೇಶ್ವರ ಬೆಟ್ಟ ಪ್ರಾಧಿಕಾರದ ನೌಕರರು ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More