ಆಸ್ತಿ ವಿವಾದದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ; ಎಸ್ಪಿ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಆಸ್ತಿ ವಿವಾದ ಸಂಬಂಧ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಹಿನ್ನಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಶಿವಕುಳೆನೂರ ಗ್ರಾಮದ ನಿವಾಸಿ ವೇದಾವತಿ(55) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.

ಆಸ್ತಿ ವಿವಾದದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ; ಎಸ್ಪಿ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 15, 2023 | 10:01 AM

ದಾವಣಗೆರೆ: ಆಸ್ತಿ ವಿವಾದ ಸಂಬಂಧ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಹಿನ್ನಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಚನ್ನಗಿರಿ(Channagiri) ತಾಲೂಕಿನ ಶಿವಕುಳೆನೂರ ಗ್ರಾಮದ ನಿವಾಸಿ ವೇದಾವತಿ(55) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಅಸ್ವಸ್ಥ ವೇದಾವತಿ ಎಂಬುವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಮಹಿಳೆ ಸಾಗುವಳಿ ಮಾಡುತ್ತಿದ್ದ 5 ಎಕರೆ ಜಮೀನು ವಿಚಾರವಾಗಿ ಸಂಬಂಧಿಯಾದ ಕಾನ್ಸ್​ಟೇಬಲ್ ವೆಂಕಟೇಶ್​ ನಡುವೆ ಜಗಳ ನಡೆಯುತ್ತಿತ್ತು. ಪೊಲೀಸ್ ಪ್ರಭಾವ ಬಳಸಿ ನಮಗೆ ಬಿತ್ತನೆ ಮಾಡಲು ಬಿಡುತ್ತಿಲ್ಲ ಎಂದು ಎಸ್​ಪಿ ಬಳಿ ದೂರು ನೀಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಸೂಕ್ತ ಕ್ರಮದ ಭರವಸೆ ನೀಡಿದ ದಾವಣಗೆರೆ ಎಸ್ಪಿ

ಇನ್ನು ಕಾನ್ಸ್​​ಟೇಬಲ್ ವೆಂಕಟೇಶ್ ಕಿರುಕುಳಕ್ಕೆ ಬೇಸತ್ತಿದ್ದ ಮಹಿಳೆ ಎಸ್ಪಿ ಕಚೇರಿಗೆ ಹೋಗುವ ಮೊದಲೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆಕೆಯನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಹಿನ್ನಲೆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಪ್ರಕರಣದ ಬಗ್ಗೆ ಮಾಹಿತಿ ಪಡೆದ ದಾವಣಗೆರೆ ಎಸ್ಪಿ ಡಾ.ಕೆ ಅರುಣ್ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ಈ ಘಟನೆ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:Hubballi News: ತಾನಿದ್ದ ರೂಂ ನಲ್ಲಿಯೇ ನೇಣಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವು

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಹೊಡೆಬಿರನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ನಡೆದಿದೆ. ನರಸಮ್ಮ ನರಸಪ್ಪ( 35) ಮೃತ ಮಹಿಳೆ. ನಿನ್ನೆ ಸಂಜೆ ಮೃತ ಮಹಿಳೆ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಆಕೆಯನ್ನ ಆಸ್ಪತ್ರೆಗೆ ಕರೆದೋಯ್ಯೂವಾಗಲೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ