AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್

ದಾವಣಗೆರೆ ಬೈ-ಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸುರ್ಜೇವಾಲಾ ಅವರ ಸಂಧಾನ ಯಶಸ್ವಿಯಾಗಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಅಂತಿಮಗೊಂಡಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರ್‌ಗೆ ಕಾಂಗ್ರೆಸ್ ಬಿ-ಫಾರಂ ನೀಡಲು ನಿರ್ಧರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಕಣಕ್ಕಿಳಿಯಲಿದ್ದಾರೆ.

ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್
ಸಮರ್ಥ್ ಶಾಮನೂರ್‌
Anil Kalkere
| Edited By: |

Updated on:Mar 21, 2026 | 11:03 PM

Share

ಬೆಂಗಳೂರು, ಮಾರ್ಚ್​ 21: ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಹೈಕಮಾಂಡ್​​ಗೆ ದೊಡ್ಡ ತಲೆನೋವಾಗಿದ್ದ ದಾವಣಗೆರೆ ದಕ್ಷಿಣ ಟಿಕೆಟ್​​ ಗೊಂದಲ ಕೊನೆಗೂ ಬಗೆಹರಿದಿದೆ. ಶಾಮನೂರ ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರ್​​​​​ಗೆ (Samarth Shamanur)​ ಕಾಂಗ್ರೆಸ್ ಹೈಕಮಾಂಡ್​​ ಟಿಕೆಟ್ ಘೋಷಣೆ ಮಾಡಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಮತ್ತೆ ಶಾಮನೂರ ಕುಟುಂಬದ ಪಾಲಾಗಿದೆ.

ಸತತ ಆರು ಸಲ ಶಾಸಕರಾಗಿದ್ದ ಶಾಮನೂರ ಶಿವಶಂಕರಪ್ಪ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಸಚಿವ ಜಮೀರ ಅಹ್ಮದ್ ಖಾನ್ ಸೇರಿದಂತೆ ಪ್ರಮುಖ ಅಲ್ಪ ಸಂಖ್ಯಾತರಿಗೆ ಟಿಕೆಟ್​ಗೆ ಪಟ್ಟು ಬೆನ್ನಲ್ಲೇ ಇದೀಗ ಶಾಮನೂರ ಕುಟುಂಬಕ್ಕೆ ಟಿಕೆಟ್​​ ಒಲಿದಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಸುರ್ಜೇವಾಲ ಸೇರಿದಂತೆ ನಾಯಕರೊಂದಿಗೆ ನಡೆದ ಸುದೀರ್ಘ ಸಂಧಾನ ಯಶಸ್ವಿಯಾಗಿದೆ. ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಸಚಿವ ಜಮೀರ್ ಅಹ್ಮದ್ ಸೇರಿ ಹಲವು ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

ಮಗನಿಗೆ ಟಿಕೆಟ್​ ಕೊಡಿಸುವಲ್ಲಿ ಯಶಸ್ವಿಯಾದ ಸಚಿವ ಮಲ್ಲಿಕಾರ್ಜುನ್

ಟಿಕೆಟ್​ ಗದ್ದಲದ ಹಿನ್ನೆಲ ಸಚಿವ ಎಸ್​ಎಸ್ ಮಲ್ಲಿಕಾರ್ಜುನ್​ ಇಂದು ದಿಢೀರ್ ಬೆಂಗಳೂರಿಗೆ ತೆರಳಿದ್ದರು. ಕೊನೆಗೂ ತಂದೆ ಶಾಮನೂರ ಶಿವಶಂಕರಪ್ಪ ರೀತಿಯಲ್ಲಿ ಪುತ್ರ ಸಮರ್ಥ್​ ಶಾಮನೂರಗೆ ಟಿಕೆಟ್ ಕೊಡಿಸುವಲ್ಲಿ ಸಚಿವ ಮಲ್ಲಿಕಾರ್ಜುನ್​ ಯಶಸ್ವಿ ಆಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ನಿಂದ ಸಮರ್ಥ್​​ ಶಾಮನೂರು ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ನೀಡಲಾಗಿದೆ. ಮಾರ್ಚ್ 23 ರಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್​​ ಕೊಡಬೇಕು ಅಂತ ಮುಸ್ಲಿಂ ಸಮುದಾಯದ ನಾಯಕರು ಆಗ್ರಹಿಸಿದ್ದರು. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡೋದಾದ್ರೆ, ದಾವಣಗೆರೆಯಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಬೇಕು ಅನ್ನೋದು ಶಾಮನೂರು ಕುಟುಂಬ ಮತ್ತು ಬೆಂಬಲಿಗರ ವಾದವಾಗಿತ್ತು. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಕಗ್ಗಂಟಾಗಿತ್ತು.

ಇದನ್ನೂ ಓದಿ: ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದ ಬಿಜೆಪಿ! ಜಾತಿ ಲೆಕ್ಕಾಚಾರ ಹೇಗಿದೆ ಗೊತ್ತೇ?

ಇನ್ನು ಟಿಕೆಟ್ ಘೋಷಣೆಗೂ ಮುನ್ನವೇ ನಿನ್ನೆ ನಾಮಪತ್ರ ಸಮರ್ಥ್ ಶಾಮನೂರ್​​ ನಾಮಪತ್ರ ಸಲ್ಲಿಸಿದ್ದರು. ದಾವಣಗೆರೆಯ ನಿಟುವಳ್ಳಿ ದುರ್ಗಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಪೂಜೆ ಬಳಿಕ ಪ್ರಮುಖರನ್ನ ಭೇಟಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Sat, 21 March 26

Follow Us
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ