ದಾವಣಗೆರೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್​ಸ್ಟೇಬಲ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 14, 2024 | 9:54 PM

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕ್ಷುಲ್ಲಕ ಕಾರಣಗಳಿಗೆ ಜೀವ ಬಿಡುತ್ತಿದ್ದಾರೆ. ಅದರಂತೆ ಇದೀಗ ದಾವಣಗೆರೆ (Davanagere) ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್​ಲೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ದಾವಣಗೆರೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್​ಸ್ಟೇಬಲ್
ದಾವಣಗೆರೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್​ಸ್ಟೇಬಲ್
Follow us on

ದಾವಣಗೆರೆ, ಫೆ.14: ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ(Davanagere)ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಗುಂಡು ಹಾರಿಸಿಕೊಂಡು ರಸ್ತದ ಮಡುವಿನಲ್ಲಿ ಬಿದ್ದ ಗುರುಮೂರ್ತಿಯನ್ನ ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿದ್ದ ಗುರುಮೂರ್ತಿ, ಇದೀಗ ಏಕಾಎಕಿ ಆತ್ಮಹತ್ಯೆಗೆ ಯತ್ನಿಸಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಟಿಪ್ಪರ್ ವಾಹನ ಡಿಕ್ಕಿ; ಬೈಕ್‌ನಲ್ಲಿದ್ದ ತಾಯಿ ಸಾವು, ಮಗನಿಗೆ ಗಾಯ

ಹಾಸನ: ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಮಾಳೆಕೊಪ್ಪಲು ಗ್ರಾಮದ ನಿವಾಸಿ ತಾಯಿ ಮಂಜುಳಮ್ಮ(45) ಮೃತ ರ್ದುದೈವಿ, ಪುತ್ರ ಮನೋಜ್‌ಗೆ ಗಂಭೀರ ಗಾಯವಾಗಿದ್ದು,
ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿಜಯಪುರ: ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಲಾರಿ, ಕಾರು ನಡುವೆ ಅಪಘಾತ; ಲಾರಿ ಚಾಲಕ ಪರಾರಿ

ಬೆಂಗಳೂರು ಗ್ರಾಮಾಂತರ: ಲಾರಿ ಹಾಗೂ ಕಾರಿಗೆ ಡಿಕ್ಕಿಯಾಗಿ ಕಾರು ಚಾಲಕನಿಗೆ ಗಂಭೀರ ಗಾಯವಾದ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ಮಹಿಮಾಪುರ ಗೇಟ್ ಬಳಿ ನಡೆದಿದೆ. ಕೂಡಲೇ ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತ ಕಾರಿನಲ್ಲಿದ್ದ ಇನ್ನುಳಿದ ಮೊವರು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Wed, 14 February 24