AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಸೀಮಂತದ ಊಟ ಮಾಡಿದ 100 ಜನರು ಅಸ್ವಸ್ಥ

20ಕ್ಕೂ ಹೆಚ್ಚು ಜನರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ: ಸೀಮಂತದ ಊಟ ಮಾಡಿದ 100 ಜನರು ಅಸ್ವಸ್ಥ
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ದೃಶ್ಯ
TV9 Web
| Edited By: |

Updated on:Aug 24, 2021 | 10:18 PM

Share

ದಾವಣಗೆರೆ: ಸೀಮಂತ ಕಾರ್ಯದಲ್ಲಿ ಊಟ ಮಾಡಿದ್ದ 100 ಜನರು ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಣ್ಣೆಹಳ್ಳಿಯ 100ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯ ನಡೆದಿತ್ತು. ಹೋಳಿಗೆ ಸೀಕರಣೆ ಸಿಹಿ ಅಡುಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಮಾಡಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಬೆಣ್ಣೆಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 20ಕ್ಕೂ ಹೆಚ್ಚು ಜನರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೈಮಗ್ಗ ಉತ್ಪನ್ನಗಳಿಗೆ ಆನ್​ಲೈನ್ ಮಾರಾಟ ವ್ಯವಸ್ಥೆ ರೂಪಿಸಲು ಸಿಎಂ ಬೊಮ್ಮಾಯಿ ಸೂಚನೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮದ 2 ಎಕರೆ 34 ಗುಂಟೆ ಜಮೀನಿನನ್ನು ಮೈಸೂರು ಮಿನರಲ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿ, ಆದಾಯ ತರುವಂತೆ ಮಾಡಬೇಕು. ನಗರ ಪ್ರದೇಶದ ಗ್ರಾಹಕರನ್ನು ಆಕರ್ಷಿಸಲು ವಿನ್ಯಾಸ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಮಾರುಕಟ್ಟೆ ಅವಕಾಶ ವಿಸ್ತರಿಸಬೇಕು. ಕೈಮಗ್ಗ ಉತ್ಪನ್ನಗಳು ಹಾಗೂ ಕರಕುಶಲ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಆನ್ ಲೈನ್ ಮಾರಾಟ ವ್ಯವಸ್ಥೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕೈಮಗ್ಗ ಅಭಿವೃದ್ಧಿ ನಿಗಮದ ಸಭೆಯಲ್ಲಿ ಅವರು ಅಧಿಕಾರಿಳಿಗೆ ಈ ಸೂಚನೆ ನೀಡಿದ್ದಾರೆ. ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸಬೇಕು. ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಿಸುವ ಮೂಲಕ ನಷ್ಟ ಭರಿಸಬೇಕು. ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ನಷ್ಟದಲ್ಲಿ 5 ಕೋಟಿ ಸರ್ಕಾರ ಭರಿಸಲಿದ್ದು, ಉಳಿದ 5 ಕೋಟಿಯನ್ನು ನಿಗಮದ ವಹಿವಾಟಿನ ಮೂಲಕ ಭರಿಸಬೇಕು. ಸರ್ಕಾರದ ವಿವಿಧ ಇಲಾಖೆಗಳು ತಮ್ಮ ಅಗತ್ಯದ ಕನಿಷ್ಠ ಶೇ. 25 ರಷ್ಟು ವಸ್ತ್ರವನ್ನು ಕೈಮಗ್ಗ ನಿಗಮದಿಂದ ಖರೀದಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: 

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಏರ್​ಲಿಫ್ಟ್​ಗೆ ನೆರವಾಗುತ್ತಿದೆ ತಜಕಿಸ್ತಾನದಲ್ಲಿರುವ ಭಾರತದ ವಾಯುನೆಲೆ

TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

(Davangere jagaluru 100 people who had lunch at the baby shower were ill)

Published On - 10:12 pm, Tue, 24 August 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್