AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಸದ್ಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಉಳಿದ ಪ್ರಾಣಿಗಳ ಸುರಕ್ಷತೆಗಾಗಿ ಜೈವಿಕ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‌ಮಾಹಿತಿ ನೀಡಿದ್ದಾರೆ.

ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ಕಿರು ಮೃಗಾಲಯ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jan 18, 2026 | 9:43 PM

Share

ದಾವಣಗೆರೆ, ಜನವರಿ 18: ದಾವಣಗೆರೆಯ (Davanagere) ಆನಗೋಡ ಬಳಿ ಇರುವ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು (Deer) ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಸಾವನ್ನಪ್ಪಿರುವಂತಹ ಶಂಕೆ ವ್ಯಕ್ತವಾಗಿದೆ. ಸದ್ಯ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‌ಮಾಹಿತಿ ನೀಡಿದ್ದಾರೆ.

ನಾಲ್ಕು ಜಿಂಕೆಗಳ ಸಾವು

ಜನವರಿ 16 ರಂದು ಒಂದು ಚುಕ್ಕೆ ಜಿಂಕೆ ಸಾವನ್ನಪ್ಪಿತ್ತು. ​ಮರುದಿನ ಮತ್ತೆರಡು ಜಿಂಕೆಗಳು ಮೃತಪಟ್ಟಿದ್ದು,  ಈವರೆಗೆ ಒಟ್ಟು ನಾಲ್ಕು ಜಿಂಕೆಗಳು ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದ ಶಂಕೆ ವ್ಯಕ್ತವಾಗಿದೆ. ಸದ್ಯ ​ಮೃಗಾಲಯದಲ್ಲಿ ಕಟ್ಟುನಿಟ್ಟಿನ ಜೈವಿಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

​ಮೃಗಾಲಯದಲ್ಲಿ 94 ಹೆಣ್ಣು, 58 ಗಂಡು ಹಾಗೂ 18 ಮರಿಗಳು ಸೇರಿದಂತೆ ಒಟ್ಟು 170 ಚುಕ್ಕೆ ಜಿಂಕೆಗಳಿವೆ. ಸದ್ಯ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರ ವೀಕ್ಷಣೆಗೆ ನಿಷೇಧಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‌ಮಾಹಿತಿ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಕಾಡು ಪ್ರಾಣಿಗಳ ಕಾಟ: ಚಿರತೆ ದಾಳಿಗೆ ನಾಯಿ ಬಲಿ

ಇನ್ನು ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಕಾಟ ಮುಂದುವರೆದಿದೆ. ತೋಟದ ಮನೆಗೆ ನುಗ್ಗಿದ ಚಿರತೆ ನಾಯಿಮರಿ ಎಳೆದುಕೊಂಡು ಹೋದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಉಂಡವಾಡಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಗ್ರಾಮದ ರೈತ ಪ್ರತಾಪ್ ಎಂಬಾವರ ತೋಟದ ಮನೆಗೆ ನುಗ್ಗಿದ ಚಿರತೆ, ನಾಯಿ ಮರಿ ಎಳೆದುಕೊಂಡು ಹೋಗಿದೆ. ಘಟನೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಸದ್ಯ ಅರಣ್ಯಾಧಿಕಾರಿಗಳಿಗೆ ರೈತ ಪ್ರತಾಪ್ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಬೋನು ಇರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:28 pm, Sun, 18 January 26

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ