ದಾವಣಗೆರೆ: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ, 10ಕ್ಕೂ ಹೆಚ್ಚು ವಾಹನ ಜಖಂ

ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್​ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಒಸಿ(ಮಟ್ಕಾ) ಆಡಿಸುತ್ತಿದ್ದ ಎಂದು ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ, ಆದಿಲ್​​ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಮೃತ ಕುಟುಂಬಸ್ಥರು ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದಾರೆ.

ದಾವಣಗೆರೆ, ಮೇ 25: ಲಾಕಪ್‌ಡೆತ್‌ (LockupDeath) ​​ಅಂತ ಆರೋಪಿಸಿ ಮೃತನ ಸಂಬಂಧಿಕರು ಚನ್ನಗಿರಿ ಪೊಲೀಸ್​ ಠಾಣೆ (Channagiri Police Station) ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್​ಗಳು ಜಖಂ‌ಗೊಂಡಿವೆ.

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್​ನನ್ನು​ ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್​ ಠಾಣೆಯಲ್ಲಿ ಕುಸಿದು ಬೀಳುತ್ತಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್​ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇಲ್ಲ ಎಂದು ಹೇಳಿದರು.

ಆದರೂ ಕೂಡ ಮೃತನ ಸಂಬಂಧಿಕರು ಲಾಕಪ್‌ಡೆತ್‌ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ‌ಕೂಡ ಸಿಸಿ‌ಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ.‌ ಪ್ರಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ.‌ ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.‌ ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು‌ ಪ್ರಕರಣ ದಾಖಲಾಗಿವೆ. ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ‌ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆ ಮಾರಾಟ ಆರೋಪ, ಮೂವರ ವಿರುದ್ಧ FIR

ಏನಿದು ಪ್ರಕರಣ

ಒಸಿ (ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಆದಿಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಆದಿಲ್‌ ಠಾಣೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಆದಿಲ್‌ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಆಕ್ರೋಶಗೊಂಡು ಪೊಲೀಸ್​ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Sat, 25 May 24

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us