AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ: ಗುತ್ತಿಗೆದಾರ ನೇಣಿಗೆ ಶರಣು

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್​ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ. ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ: ಗುತ್ತಿಗೆದಾರ ನೇಣಿಗೆ ಶರಣು
ಗುತ್ತಿಗೆದಾರ ಪಿ. ಎಸ್​ ಗೌಡರ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ|

Updated on:May 31, 2024 | 1:45 PM

Share

ದಾವಣಗೆರೆ, ಮೇ 31: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ (Contractor) ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ (Santebennur) ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್​ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೆ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್​ಐಡಿಎಲ್ ದೊಡ್ಡ ಮೊತ್ತದ ಪರಿಹಾರ ನೀಡಬೇಕೆಂದು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

ಪಿಎಸ್ ಗೌಡರ್ ಪತ್ನಿ ವಸಂತ ಕುಮಾರಿಯವರಿಂದ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಂತೇಬೆನ್ನೂರಿನ ಪೊಲೀಸ್ ಠಾಣೆಯಲ್ಲಿ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಸಹೋದರರಾದ ಶ್ರೀನಿವಾಸ ಹಾಗೂ ನಾಗರಾಜ್ ಅವರ ಬಗ್ಗೆ ಬರೆದಿದ್ದಾರೆ. ಜೊತೆಗೆ ಇವರು ಗುತ್ತಿಗೆದಾರ ಸಹ ಆಗಿದ್ದ ಇವರಿಗೆ ಹಣ ಬರಬೇಕಿತ್ತು. ಸಹೋದರ ತೊಂದರೆ ಹಾಗೂ ಬರಬೇಕಾದ ಒಟ್ಟು ಎಂಬತ್ತು ಲಕ್ಷ ಹಣ ಬರಬೇಕಿತ್ತು. ಈ ಎಲ್ಲ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕೆ ಸಂಬಂಧಿಸಿ ಪಿಎಸ್ ಗೌಡರ ಸಹೋದರರಾದ ನಾಗರಾಜ್, ಶ್ರೀನಿವಾಸ ಹಾಗೂ ಕೆಆರ್​ಐಡಿಎಲ್ ಸೇರಿಸಿ ಸಂತೆ ಬೆನ್ನೂರ ಪೊಲೀಸ ಠಾಣೆಯಲ್ಲಿ ಐಪಿಸಿ ಕಲಂ 306 ಅನೈಯ ಕೇಸ್ ಬುಕ್ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Fri, 31 May 24

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ