ದಾವಣಗೆರೆ: ಒಂದೇ ಕುಟುಂಬದ ಮೂವರು ನಾಪತ್ತೆ

ದಾವಣಗೆರೆಯ ವಿನೋಬ ನಗರದಲ್ಲಿ ನೆಲೆಸಿದ್ದ ಕುಟುಂಬ ನಾಪತ್ತೆಯಾಗಿದೆ. ಏಪ್ರಿಲ್​ 12ರಿಂದ ಮನೆಯಿಂದ ಹೊರಹೋದವರು ಮನೆಗೆ ವಾಪಸ್​​ ಬಂದಿಲ್ಲ. ದಾವಣಗೆರೆ ನಗರದ ಬಡಾವಣೆ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ: ಒಂದೇ ಕುಟುಂಬದ ಮೂವರು ನಾಪತ್ತೆ
ನಾಪತ್ತೆಯಾದ ಅಂಜನ್ ಬಾಬು, ನಾಗವೇಣಿ, ಮಗು ನಕ್ಷತ್ರ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on:May 21, 2024 | 10:16 AM

ದಾವಣಗೆರೆ, ಮೇ 21: ದಾವಣಗೆರೆಯ (Davangere) ವಿನೋಬ ನಗರದಲ್ಲಿ ನೆಲೆಸಿದ್ದ ಕುಟುಂಬ ನಾಪತ್ತೆಯಾಗಿದೆ. ವಿನೋಬ ನಗರದ ನಿವಾಸಿಗಳಾದ ಪತಿ ಅಂಜನ್ ಬಾಬು (34), ಪತ್ನಿ ನಾಗವೇಣಿ (30) ಮತ್ತು 1 ವರ್ಷದ ಮಗು ನಕ್ಷತ್ರ ನಾಪತ್ತೆಯಾಗಿದ್ದಾರೆ. ಏಪ್ರಿಲ್​ 12ರಿಂದ ಮನೆಯಿಂದ ಹೊರಹೋದವರು ವಾಪಸ್​​ ಬಂದಿಲ್ಲ. ದಾವಣಗೆರೆ ನಗರದ ಬಡಾವಣೆ ಪೊಲೀಸ್​ (Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತ, ಇಬ್ಬರ ಸಾವು

ಯಾದಗಿರಿ: ಎರಡು ಬೈಕ್​ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ದುರ್ದೈವಿಗಳು. ಓರ್ವ ಸವಾರನಿಗೆ ಗಂಭೀರ ಗಾಯವಾಗಿದ್ದು, ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 26 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪಕ್ಕದ ಮನೆಯಲ್ಲಿ ಪತ್ತೆ

10ಕ್ಕೂ ಹೆಚ್ಚು ಮೇಕೆಗಳ ಕಳ್ಳತನ

ಬೆಳಗಾವಿ: ಗೋಕಾಕ್ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಮನೆ ಮುಂದೆ ಕಟ್ಟಿದ್ದ 10ಕ್ಕೂ ಹೆಚ್ಚು ಮೇಕೆಗಳನ್ನು ಕಳ್ಳತನ ಮಾಡಲಾಗಿದೆ. ಮೇಕೆಗಳು ಕಳ್ಳತನದಿಂದ ಬಡ ಕುಟುಂಬ ಕಂಗಾಲಾಗಿವೆ. ವಾಹನದಲ್ಲಿ ಬಂದು ಮೇಕೆಗಳನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಡಿಲು ಬಡಿದು ಮಹಿಳೆ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾಳೆ. ಮಹಾರಾಷ್ಟ್ರ ಮೂಲದ ಕಾರ್ಮಿಕ ಮಹಿಳೆ ಲಕ್ಷ್ಮೀ (55) ಮೃತ ದುರ್ದೈವಿ. ಕಾರ್ಮಿಕ ಕುಟುಂಬ ರೇಖಲಗೆರೆಯ ಕೆರೆ ಅಂಗಳದಲ್ಲಿ ಬೀಡು ಬಿಟ್ಟಿದೆ. ಸೋಮವಾರ (ಮೇ 20) ತಡರಾತ್ರಿ ವೇಳೆ ಗುಡಿಸಲು ಬಳಿ ಸಿಡಿಲು ಬಡಿದಿದೆ. ಇದರಿಂದ ಲಕ್ಷ್ಮೀ ಮೃತಪಟ್ಟಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Tue, 21 May 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ