ದಾವಣಗೆರೆ: ಅಕಾಲಿಕ ಮಳೆಗೆ ಮಣ್ಣುಪಾಲಾದ ಭತ್ತ, ಕಣ್ಣೀರು ಹಾಕುತ್ತಿರುವ ಅನ್ನದಾತರು

ಮಳೆ-ಗಾಳಿಗೆ ಸಿಕ್ಕು ಸುಮಾರು ಐವತ್ತು ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ ಸರ್ವನಾಶವಾಗಿದೆ. ಜಿಲ್ಲೆಯಲ್ಲಿ ಶೇಕಡ 70 ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ಸುಮಾರು 1.4 ಲಕ್ಷ ಎಕರೆಯಲ್ಲಿ ರೈತರು ಭತ್ತ ಬೆಳೆದಿದ್ದಾರೆ.

ದಾವಣಗೆರೆ: ಅಕಾಲಿಕ ಮಳೆಗೆ ಮಣ್ಣುಪಾಲಾದ ಭತ್ತ, ಕಣ್ಣೀರು ಹಾಕುತ್ತಿರುವ ಅನ್ನದಾತರು
ಭತ್ತ ನೆಲಸಮ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on: Nov 11, 2023 | 1:23 PM

ದಾವಣಗೆರೆ ನ.10: ಭೀಕರ ಬರಗಾಲದ (Drought) ನಡುವೆಯೂ ರೈತರು ಸಮೃದ್ಧವಾಗಿ ಭತ್ತ (Paddy) ಬೆಳೆದಿದ್ದಾರೆ. ಕಟಾವು ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ರೈತರು ಸನ್ನದ್ಧವಾಗಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಮಳೆ-ಗಾಳಿಗೆ (Rain) ಸಿಕ್ಕು ಸುಮಾರು ಐವತ್ತು ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ ಸರ್ವನಾಶವಾಗಿದೆ. ಜಿಲ್ಲೆಯಲ್ಲಿ ಶೇಕಡ 70 ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ಸುಮಾರು 1.4 ಲಕ್ಷ ಎಕರೆಯಲ್ಲಿ ರೈತರು ಭತ್ತ ಬೆಳೆದಿದ್ದಾರೆ. ಆದರೆ ಬರಗಾಲದಿಂದ ನೀರಿಲ್ಲದೆ ಬೆಳೆ ಒಣಗುತ್ತಿತ್ತು.

ಈ ಸಂದರ್ಭದಲ್ಲಿ ರೈತರು ಭದ್ರಾ ಡ್ಯಾಂನಿಂದ ನೀರು ಬಿಡುವಂತೆ ಹೋರಾಟ ಮಾಡಿದರು. ಹಾಗೇ ಜಲಸಂಪನ್ಮೂಲ ಇಲಾಖೆ ಸಚಿವ ಡಿ ಕೆ ಶಿವಕುಮಾರ್​, ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ ಶಿವಮೊಗ್ಗಾ ಭದ್ರಾ ಡ್ಯಾಂನಿಂದ ನೀರು ಬಿಡಿಸಿಕೊಂಡಿದ್ದರು.

ಇದನ್ನೂ ಓದಿ: ಸಂತೋಷ-ಸಮಾಧಾನದ ಸಂಗತಿ! ಮುಂಗಾರು ಹಿಂಗಾರು ಕೈಕೊಟ್ಟರೂ ಆ ರೈತ ಮಾಡಿದ ಸೂಪರ್​ ಐಡಿಯಾಗೆ ಬಂಪರ್​ ಬೆಳೆ- ಮಹಿಳಾ ಕೃಷಿ ಕಾರ್ಮಿಕರಿಗೆ ಕೈತುಂಬಾ ಕೆಲಸ

ಇದರಿಂದ ಒಣಗುತ್ತಿರುವ ಭತ್ತದ ಬೆಳೆಗೆ ಜೀವಕಳೆ ಬಂದು, ಸಮೃದ್ಧವಾಗಿ ಬೆಳೆದು ನಿಂತಿತ್ತು. ಇನ್ನೇನು ಕಟಾವು ಮಾಡಬೇಕು ಎಂದುಕೊಳ್ಳುವಷ್ಟರಲ್ಲಿ ಅಕಾಲಿಕ ಮಳೆ ಬಂದು ಸುಮಾರು 50 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಸರ್ವನಾಶವಾಗಿದೆ. ಭತ್ತ ಚಾಪೆಯ ರೀತಿ ನೆಲಕ್ಕೆ ಒರಗಿದೆ. ಇದರಿಂದ ರೈತನ ಬದುಕು ಮಣ್ಣು ಪಾಲಾಗಿದ್ದು, ರೈತ ಕಣ್ಣೀರು ಹಾಕುತ್ತಿದ್ದಾನೆ. ಅಕಾಲಿಕ ಮಳೆಯಿಂದ ಜಿಲ್ಲೆಯ ರೈತರ ಶ್ರಮ ಮಣ್ಣುಪಾಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಬೇಕು. ರೈತರಿಗೆ ಪರಿಹಾರ ನೀಡಬೇಕು. ತೋಟಗಾರಿಕಾ ಸಚಿವ ತವರಿನಲ್ಲಿ ಈ ಸ್ಥಿತಿಯಾದರೆ ಹೇಗೆ ಎಂಬ ಮಾತುಗಳು ಕೇಳಿ ಬರತ್ತಿವೆ.

ಜಿಲ್ಲೆಯ 1.4 ಲಕ್ಷ ಎಕರೆಯಲ್ಲಿ 4.2 ಲಕ್ಷ ಟನ್ ಭತ್ತ ಬೆಳೆಯಲಾಗುತ್ತದೆ. ಇದರಿಂದ 2.7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನೆಯಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್