AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರಿನಲ್ಲಿ ವೃದ್ಧ ದಂಪತಿಯ ಮನೆಯಲ್ಲಿ 8.4 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ದರೋಡೆ ಗ್ಯಾಂಗ್ ಅನ್ನು ಪೊಲೀಸರು ನಾಲ್ಕು ತಿಂಗಳ ಬಳಿಕ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಐವರು ಆರೋಪಿಗಳಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಗ್ಯಾಂಗ್ ರಾಜ್ಯದ ಹಲವೆಡೆ ಇದೇ ರೀತಿಯ ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿರೋದು ತನಿಖೆಯಿಂದ ತಿಳಿದುಬಂದಿದೆ.

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​
ಬಂಧಿತ ಆರೋಪಿಗಳುImage Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 24, 2026 | 5:49 PM

Share

ದಾವಣಗೆರೆ, ಫೆಬ್ರವರಿ 24: ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದದ ಒಂಟಿ ಮನೆಯಲ್ಲಿದ್ದ ವೃದ್ಧ ದಂಪತಿಯ ಕೈ ಕಾಲು ಕಟ್ಟಿ, ಹಿಂಸೆ ನೀಡಿ ಮನೆಯಲ್ಲಿದ್ದ ಸುಮಾರು 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮಿಳುನಾಡಿನ ಹೊಸೂರು ಬತ್ತಪಲ್ಲಿಯ ಶಿವಕುಮಾರ್, ಸೇಲಂ ಜಿಲ್ಲೆಯ ಕೇಶವನ್, ದಿಂಡಿಗಲ್ ಜಿಲ್ಲೆಯ ಅರುಣ್ ಪ್ರಶಾಂತ್, ತಿರುವಣ್ಣಾಮಲೈನ ಅರಸು ಹಾಗೂ ನಾಮಕ್ಕಲ್ ಕಲಾದೇವಿ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಏನು?

ಸೆಪ್ಟೆಂಬರ್​​ 6,2025ರಂದು ಆರೋಪಿಗಳು ದರೋಡೆ ನಡೆಸಿದ್ದರು. ರಾತ್ರಿ ವೇಳೆ ಮನೆ ಬಾಗಿಲು ತೆರೆದಿರೋದು ನೋಡಿ ಒಳಗೆ ನುಗ್ಗಿದ್ದ ಐದುಜನ ಮುಸುಕುಧಾರಿಗಳ ಗ್ಯಾಂಗ್​​, ಟಿವಿ ನೋಡುತ್ತಿದ್ದ ಮಾದಪ್ಪ ಅವರನ್ನು ಪಂಚೆಯಿಂದ ಕಟ್ಟಿ ಬಳಿಕ ಅಡುಗೆ ಮನೆಯಲ್ಲಿದ್ದ ಸಾವಿತ್ರಮ್ಮ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ರಾಬರಿ ನಡೆಸಿತ್ತು. ಇವರ ಮೈಮೇಲಿದ್ದ ಬಂಗಾರ ಮಾತ್ರವಲ್ಲದೆ ಜೀವ ಬೆದರಿಕೆ ಹಾಕಿ ಕಪಾಟಿನಲ್ಲಿದ್ದ ಒಡವೆಗಳನ್ನೂ ಆರೋಪಿಗಳು ದೋಚಿದ್ದರು. ದಂಪತಿಯ ಜೊತೆಗಿದ್ದ ಮಗ ಕೆಲಸದ ನಿಮಿತ್ತ ಹೊರ ಹೋಗಿದ್ದ ವೇಳೆಯೇ ಘಟನೆ ನಡೆದಿರೋದು ಕುಟುಂಬವನ್ನು ಬೆಚ್ಚಿಬೀಳಿಸಿತ್ತು. ಸರ್ಕಾರಿ ನೌಕರರಾಗಿದ್ದ ದಂಪತಿ ಕರಾವಳಿ ಕರ್ನಾಟಕ ಭಾಗದಲ್ಲಿಯೇ ಹಲವು ವರ್ಷ ವಾಸವಿದ್ದು, ನಿವೃತ್ತಿ ಬಳಿಕ ಇದ್ದೊಬ್ಬ ಪುತ್ರನ ಜೊತೆ ಬಂದು ತೋಟದ ಮನೆಯಲ್ಲಿ ನೆಲೆಸಿದ್ದರು.

ಇದನ್ನೂ ಓದಿ: 400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದು, ಖದೀಮರನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಯಶಸ್ಸು ಕಂಡಿದ್ದಾರೆ. ಆರೋಪಿಗಳನ್ನು ತಮಿಳುನಾಡಿಗೇ ತೆರಳಿ ಬಂಧಿಸಲಾಗಿದ್ದು, ಇನ್ನೂ ಹಲವೆಡೆ ಈ ರೀತಿಯ ದರೋಡೆ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕೆಲ ಪೊಲೀಸ್ ಠಾಣೆಗಳಲ್ಲಿಯೂ ಇವರ ವಿರುದ್ಧ ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಗ್ಯಾಂಗ್ ಚಿತ್ರದುರ್ಗದ ಮೂಲಕ ಅಡಿಕೆನಾಡು ಚನ್ನಗಿರಿ ಪ್ರವೇಶ ಮಾಡಿತ್ತು ಎಂಬದು ಕೂಡ ಬಯಲಾಗಿದ್ದು, ಆರೋಪಿಗಳಿಗೆ ಸ್ಥಳೀಯರು ಯಾರಿಂದಾದರೂ ಸಹಕಾರ ಸಿಕ್ಕಿತ್ತಾ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​