AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

87 ಕೇಸ್ ಭೇದಿಸಿದ ದಾವಣಗೆರೆ ಪೊಲೀಸರು: ಚಿನ್ನ, ಬೆಳ್ಳಿ ಸೇರಿ 3.91 ಕೋಟಿ ರೂ. ಸ್ವತ್ತು ವಾರಸುದಾರರಿಗೆ ಹಸ್ತಾಂತರ

ದಾವಣಗೆರೆ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 87 ಪ್ರಕರಣಗಳನ್ನು ಭೇದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿನ್ನಾಭರಣ ಸೇರಿದಂತೆ ಬರೋಬ್ಬರಿ 3.91 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.‌ ದಾವಣಗೆರೆ ಪೊಲೀಸರ ಕಾರ್ಯಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆಗಳು ವ್ಯಕ್ತವಾಗಿವೆ.

87 ಕೇಸ್ ಭೇದಿಸಿದ ದಾವಣಗೆರೆ ಪೊಲೀಸರು: ಚಿನ್ನ, ಬೆಳ್ಳಿ ಸೇರಿ 3.91 ಕೋಟಿ ರೂ. ಸ್ವತ್ತು ವಾರಸುದಾರರಿಗೆ ಹಸ್ತಾಂತರ
Davanagere Police
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jul 21, 2026 | 9:53 PM

Share

ಮುಖ್ಯಾಂಶಗಳು

  • ದಾವಣಗೆರೆ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
  • 87 ಕೇಸ್​ಗಳಲ್ಲಿ 3.91 ಕೋಟಿ ಮೌಲ್ಯದ ನಗನಾಣ್ಯ ವಶಕ್ಕೆ
  • ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ದಾವಣಗೆರೆ, (ಜುಲೈ 21): ದಾವಣಗೆರೆ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 87 ಪ್ರಕರಣಗಳನ್ನು ಭೇದಿಸಿದ್ದು, ಒಂದೂವರೆ ಕೆ.ಜಿ ಚಿನ್ನಾಭರಣ, ಹದಿನೆಂಟು ಕೆ.ಜಿ ಬೆಳ್ಳಿ, ಕಾರು, ಮೊಬೈಲ್‌ ಸೇರಿದಂತೆ ಒಟ್ಟು 3.91 ಕೋಟಿ ರೂಪಾಯಿ ವಸ್ತುಗಳನ್ನ ವಶಕ್ಕೆ ಪಡೆದುಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.‌ ಒಂದು ಅಂದರೆ 2025 ಡಿಸೆಂಬರ್ 20ರಿಂದ 2026 ಜುಲೈ 20ರ ತನಕ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವರದಿಯಾಗಿದ್ದ 87 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

3.91 ಕೋಟಿ ರೂ ಮೌಲ್ಯದ ವಸ್ತುಗಳನ್ನು ಜಪ್ತಿ

ಇನ್ನು 3.91 ಕೋಟಿ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದು,  ಆ 1.66 ಕೆಜಿ ಚಿನ್ನ, 56.55 ಲಕ್ಷ ಮೌಲ್ಯದ ಮೊಬೈಲ್​ಗಳು, 18.56 ಕೆಜಿ ಬೆಳ್ಳಿ, 4 ಲಕ್ಷ ಮೌಲ್ಯದ ಕೃಷಿ ಸಾಮಗ್ರಿಗಳು 22.94 ಲಕ್ಷ ರೂ. ಮೌಲ್ಯದ 31 ವಾಹನಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು

2 ಸಾವಿರ ಹೆಲ್ಮೆಟ್, 85 ಸೈಲೆನ್ಸರ್, ಹಾರ್ನ್ಸ್, ಸ್ಪೀಕರ್ ಡಕ್ ನಾಶ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳಿಗೆ ಅಳವಡಿಸಿದ್ದ ಕಳಪೆ ಗುಣಮಟ್ಟದ ಸುಮಾರು 2,000ಕ್ಕೂ ಹೆಚ್ಚು ಆಫ್ ಹೆಲ್ಮೆಟ್‌ಗಳು, ದ್ವಿಚಕ್ರ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ ಕರ್ಕಶ ಧ್ವನಿ ಮಾಡುವ 85ಕ್ಕೂ ಹೆಚ್ಚು ಡಿಫೆಕ್ಟಿವ್ ಸೈಲೆನ್ಸರ್​​ಗಳು, ಇತರೆ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ 25 ಹಾರ್ನ್​​ಗಳನ್ನು ಮತ್ತು 10 ಸ್ಪೀಕರ್ ಡಕ್‌ಗಳನ್ನು ಬುಲ್ಡೋಜರ್ ಮೂಲಕ ಎಸ್ಪಿ ಶೇಖರ್ ಹೆಚ್.ಟಿ. ಅವರ ಸಮ್ಮುಖದಲ್ಲಿ ಪೊಲೀಸರು ನಾಶಪಡಿಸಿದರು.

ಎಸ್ಪಿ ಶ್ಲಾಘನೆ

ಇನ್ನು ಈ ಬಗ್ಗೆ ಎಸ್ಪಿ ಶೇಖರ್ ಹೆಚ್.ಟಿ. ಅವರು ಮಾತನಾಡಿ, “ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿದ್ದ ವಸ್ತುಗಳು ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಈ ಪ್ರಾಪರ್ಟಿ ಪರೇಡ್‌ನಲ್ಲಿ ಜಪ್ತಿ ಪಡಿಸಿಕೊಂಡಿದ್ದ ಒಟ್ಟು 87 ಪ್ರಕರಣಗಳಿಗೆ ಸಂಬಂಧಿಸಿದಂತೆ 22.94 ಲಕ್ಷ ಮೌಲ್ಯದ ವಿವಿಧ ಮಾದರಿಯ 31 ವಾಹನಗಳು, 90.67 ಲಕ್ಷ ನಗದು ಹಣ, 2.17 ಕೋಟಿ ಮೌಲ್ಯದ 1668.314 ಗ್ರಾಂ ಬಂಗಾರದ ಆಭರಣಗಳು ಹಾಗು 18.569 ಕೆ.ಜಿ. ಬೆಳ್ಳಿ, ‌ಮೊಬೈಲ್, 56.55 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ 377 ಮೊಬೈಲ್ ಪೋನ್‌ಗಳು, 4,87 ಲಕ್ಷ ಮೌಲ್ಯದ ಕೃಷಿ ಉಪಕರಣಗಳು, ಅಡಿಕೆ, ಬೋರವೆಲ್ ವೈರ್, ಮೋಟರ್ ಮತ್ತು ಇತರೆ ವಸ್ತುಗಳು ಸೇರಿ ಒಟ್ಟು 3,91,69,136 ಮೌಲ್ಯದ ಸ್ವತ್ತು ಕಳವು ಪ್ರಕರಣಗಳಲ್ಲಿನ ವಸ್ತುಗಳನ್ನು ವಶಕ್ಕೆ ಪಡೆದು ವಾರಸುದಾರಿಗೆ ಹಸ್ತಾಂತರ ಮಾಡಿದ್ದೇವೆ ಎಂದು ವಿವರಿಸಿದರು.

ಐಎಸ್ಐ ಮಾರ್ಕ್ ಇಲ್ಲದ ಆಫ್ ಹೆಲ್ಮೆಟ್​​ಗಳು, ಸೈಲೆನ್ಸರ್​​ಗಳು, ಕರ್ಕಶ ಶಬ್ದದ ಹಾರ್ನ್ ಹಾಗು ಡಕ್​​ಗಳನ್ನು ಬುಲ್ಡೋಜರ್ ಸಹಾಯದಿಂದ ನಾಶ ಪಡಿಸಲಾಗಿದೆ. ಎಲ್ಲಾ ಸಿಬ್ಬಂದಿಗೆ ಅಭಿನಂದನೆ‌ಗಳು, ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ