AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ ಮೂಲಕ ಮೃತನ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸ್​​: ವಿನೂತನ ತಂತ್ರಜ್ಞಾನ ಅಳವಡಿಕೆ

ದಾವಣಗೆರೆ ಜಿಲ್ಲೆಯ ವಿದ್ಯಾನಗರ ಪೊಲೀಸರು ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ (M-CCTNS) ಆ್ಯಪ್ ಮೂಲಕ ಕೊಲೆಯಾದ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಿದ್ದಾರೆ.

ಆ್ಯಪ್​ ಮೂಲಕ ಮೃತನ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸ್​​: ವಿನೂತನ ತಂತ್ರಜ್ಞಾನ ಅಳವಡಿಕೆ
ಎಂ-ಸಿಸಿಟಿಎನ್​ಎಸ್​ ಆ್ಯಪ್
ವಿವೇಕ ಬಿರಾದಾರ
|

Updated on:Apr 02, 2023 | 7:22 AM

Share

ದಾವಣಗೆರೆ: ರಾಜ್ಯ ಪೊಲೀಸ್​ ಇಲಾಖೆ ಹಲವು ತಂತ್ರಜ್ಞಾನಗಳನ್ನು ಅಳವಡಿಕೊಳ್ಳುತ್ತಿದ್ದು, ಇವುಗಳ ಮೂಲಕ ಅಪರಾಧ ಪ್ರಕರಣಗಳನ್ನು ಸುಲಭವಾಗಿ ಭೇದಿಸಲು ಸಹಾಯವಾಗುತ್ತಿದೆ. ಪೊಲೀಸ್​ ಇಲಾಖೆ ಇತ್ತೀಚಿಗೆ ಹೊಸ ತಂತ್ರಜ್ಞಾನದ ಮೊರೆ ಹೊಗಿದ್ದು, ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ (M-CCTNS) ಆ್ಯಪ್​ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಬಹುದಾಗಿದೆ. ಈ ಆ್ಯಪ್​​ ಮೂಲಕ ದಾವಣಗೆರೆ (Davangere) ಜಿಲ್ಲೆಯ ವಿದ್ಯಾನಗರ ಪೊಲೀಸರು (Vidyanagar) ಮೃತ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಕೊಲೆ ಪ್ರಕರಣವೊಂದರ ಬೆನ್ನುಹತ್ತಿದ್ದರು. ಹೀಗಾಗಿ ಕೊಲೆಯಾದವನ ಹಿನ್ನೆಲೆ ಮತ್ತು ಆತನ ಗುರುತು ಪತ್ತೆಗಾಗಿ ಎಂ-ಸಿಸಿಟಿಎನ್​ಎಸ್​ ಆ್ಯಪ್​ ಬಳಸಿದ್ದಾರೆ. ಈ ಡಿವೈಸನ್ನು ಉಪಯೋಗಿಸಿಕೊಂಡು ಮೊಬೈಲ್ ಅಪ್ಲಿಕೇಷನ್‌ ಮುಖಾಂತರ ಮೃತನ ವ್ಯಕ್ತಿಗಳ ಬೆರಳು ಮುದ್ರೆಯನ್ನು ಪರಿಶೀಲಿಸಿದಾಗ ಆ ವ್ಯಕ್ತಿಯ ಹಿನ್ನೆಲೆ ಪತ್ತೆಯಾಗಿದೆ.

ಈ ಕುರಿತು ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಿಶಾಂತ್ ವಿಡಿಯೋ ಹಂಚಿಕೊಂಡಿದ್ದು ಕರ್ನಾಟಕ ಪೊಲೀಸರು ಆ್ಯಪ್ ಮೂಲಕ ಮೃತದೇಹವನ್ನು ಗುರುತಿಸುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. “ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿದೆ. #MCCTNS ಅಪ್ಲಿಕೇಶನ್ ಬಳಸಿಕೊಂಡು ವ್ಯಕ್ತಿಯನ್ನು ಗುರುತಿಸಲಾಗಿದೆ. ನಂತರ ಪ್ರಕರಣವೂ ಪತ್ತೆಯಾಗಿತ್ತು. ಸಾಮಾನ್ಯವಾಗಿ, ರಾತ್ರಿಯ ಗಸ್ತಿನ ಸಮಯದಲ್ಲಿ, ರಸ್ತೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಪರಿಶೀಲಿಸಲು ಈ ಅಪ್ಲಿಕೇಶನ್​​ನ್ನು ಬಳಸಲಾಗುತ್ತದೆ. ಇದೇ ಮೊದಲ ಬಾರಿಗೆ ಮೃತ ದೇಹವನ್ನು ಗುರುತಿಸಲು ಅಪ್ಲಿಕೇಶನ್​ನ್ನು ಬಳಸಲಾಯಿತು ಮತ್ತು ಅದು ತುಂಬಾ ಉಪಯುಕ್ತವಾಗಿದೆ. ದಾವಣಗೆರೆಯ ಎಫ್‌ಪಿಬಿ ಘಟಕಕ್ಕೆ ಧನ್ಯವಾದಗಳು” ಎಂದು ಹೇಳಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ಎಂ-ಸಿಸಿಟಿಎನ್‌ಎಸ್ ಆ್ಯಪ್ ಮೂಲಕ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಸಂಗ್ರಹಿಸಿದ ಡೇಟಾಬೇಸ್ ಮೂಲಕ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮೂಲಕ ಆರೋಪಿಯ ಹಿನ್ನೆಲೆ ತಿಳಿದು ಬಂದಿತ್ತು. ಆತ ಹಲವು ಪ್ರಕರಣದಲ್ಲಿ ಬೇಕಾಗಿದ್ದನು. ಈ ವಿವರಗಳನ್ನು ತಿಳಿದ ಕೂಡಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Sun, 2 April 23

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ