AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬ್ಯಾಂಕ್ ಕಿರುಕುಳ ಆರೋಪ! ಸಿಬ್ಬಂದಿ ಮಿಸ್ಸಿಂಗ್, ಆತ್ಮಹತ್ಯೆ ಶಂಕೆ!

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಖಾಸಗಿ ಬ್ಯಾಂಕ್ ಸಿಬ್ಬಂದಿ ಮೋಹನ್ ಕುಮಾರ್ ಬ್ಯಾಂಕ್ ಕಿರುಕುಳ ಹಾಗೂ ಸಾಲದ ಬಾಧ್ಯತೆಗೆ ಬೇಸತ್ತು ವಿಡಿಯೋ ಮಾಡಿ ನಾಪತ್ತೆಯಾಗಿದ್ದಾರೆ. ಹೊನ್ನಾಳಿಯ ತುಂಗಾ ನಾಲೆಯಲ್ಲಿ ಬೈಕ್ ಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ನೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಖಾಸಗಿ ಬ್ಯಾಂಕ್ ಕಿರುಕುಳ ಆರೋಪ! ಸಿಬ್ಬಂದಿ ಮಿಸ್ಸಿಂಗ್, ಆತ್ಮಹತ್ಯೆ ಶಂಕೆ!
ಆರ್‌ಡಿ ಮೋಹನ್ ಕುಮಾರ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Aug 30, 2026 | 7:18 PM

Share

ಮುಖ್ಯಾಂಶಗಳು

  • ಖಾಸಗಿ ಬ್ಯಾಂಕ್ ನೌಕರ ಮೋಹನ್ ಕುಮಾರ್ ವಿಡಿಯೋ ಮಾಡಿ ನಾಪತ್ತೆಯಾಗಿದ್ದಾರೆ.
  • ಬ್ಯಾಂಕ್ ಕಿರುಕುಳ ಮತ್ತು ಪ್ರಮೋಶನ್ ಸಿಗದೆ ನಾಲೆಗೆ ಜಿಗಿದ ಶಂಕೆ.
  • ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ನ್ಯಾಯಕ್ಕಾಗಿ ವೀಡಿಯೋದಲ್ಲಿ ಮನವಿ.

ದಾವಣಗೆರೆ, ಆಗಸ್ಟ್ 30: ಖಾಸಗಿ ಬ್ಯಾಂಕ್‌ನ ಮೇಲಾಧಿಕಾರಿಗಳ ಕಿರುಕುಳ, ಬಡ್ತಿ ಸಿಗದಿರುವುದು ಮತ್ತು ಸಾಲದ ಸುಳಿಗೆ ಸಿಲುಕಿ ಮನನೊಂದ ಬ್ಯಾಂಕ್ ಸಿಬ್ಬಂದಿಯೊಬ್ಬರು ವಿಡಿಯೋ ಮಾಡಿ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ. ಹೊನ್ನಾಳಿ ತಾಲೂಕಿನ ಮಾದನಭಾವಿ ಗ್ರಾಮದ ಆರ್‌ಡಿ ಮೋಹನ್ ಕುಮಾರ್ (37) ನಾಪತ್ತೆಯಾದ ದುರ್ದೈವಿ. ಇವರು ಹೊನ್ನಾಳಿ ತಾಲೂಕಿನ ತುಂಗಾ ಮೇಲ್ದಂಡೆ ಕಾಲುವೆಗೆ ಬೈಕ್ ಸಮೇತ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವಿಡಿಯೋದಲ್ಲಿ ಕಣ್ಣೀರಿಟ್ಟ ಬ್ಯಾಂಕ್ ನೌಕರ!

ನಾಪತ್ತೆಯಾಗುವ ಮುನ್ನ ಮೋಹನ್ ಕುಮಾರ್ ವಿಡಿಯೋ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. “ಬ್ಯಾಂಕ್‌ನಲ್ಲಿ ಮ್ಯಾನೇಜರ್ ಪೋಸ್ಟ್ ಪಡೆಯಲು 50 ಸಾವಿರ ರೂಪಾಯಿ ಸಾಲ ಮಾಡಿ ನಕಲಿ ಮಾರ್ಕ್ಸ್ ಕಾರ್ಡ್ ಮಾಡಿಸಿಕೊಟ್ಟಿದ್ದೆ. ಆದರೆ ಪ್ರಮೋಶನ್ ಸಿಗಲಿಲ್ಲ, ಬದಲಾಗಿ ಸಾಲ ಹೆಚ್ಚಾಯಿತು. ನನ್ನ ಈ ಸ್ಥಿತಿಗೆ ಮತ್ತು ಸಾಲದ ಸುಳಿಗೆ ಆ ಬ್ಯಾಂಕ್ ಹಾಗೂ ಸಹ ಸಿಬ್ಬಂದಿ ತಿಪ್ಪೇಶ್ ಮತ್ತು ಕೊಟ್ರೇಶ್ ಕಾರಣ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೆ, “ಬ್ಯಾಂಕ್‌ನವರು ಲಂಚ ಪಡೆದು ಮೋಸ ಮಾಡಿದ್ದಾರೆ. ಎಷ್ಟೋ ನೌಕರರು ತಮ್ಮ ಕೈಯಿಂದ ಹಣ ಹಾಕಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಮುಂದೆ ನಿಂತು ನನ್ನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು” ಎಂದು ವಿಡಿಯೋದಲ್ಲಿ ವಿನಂತಿಸಿಕೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ಬೈಕ್ ಪತ್ತೆಯಾಗಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಾಲೆಯಲ್ಲಿ ಮೋಹನ್ ಕುಮಾರ್ ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sun, 30 August 26

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ